ಕೊಡಗಿನಲ್ಲಿ ಅಬ್ಬರಿಸಿ ಇಳಿದ ಮಳೆ:ತುಂಬಿ ಹರಿದ ಕಾವೇರಿ


Team Udayavani, Jul 9, 2018, 6:40 AM IST

z-omkareshwara-temple.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ದಿಂದ ರವಿವಾರ  ಬೆಳಗ್ಗೆ ತನಕ ನಿರಂತರ ಸುರಿದ ಧಾರಾಕಾರ ಮಳೆ ಬಳಿಕ ಇಳಿಮುಖವಾಯಿತು. 

ಮಳೆಯ ತೀವ್ರತೆಗೆ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗಿದೆ.

ಮೃಗಶಿರ ಮಳೆಯ ಅನಂತರ ಸುರಿದ ಆದ್ರಾì ಮಳೆ ಜಿಲ್ಲೆಯಲ್ಲಿ ಕೊಂಚ ಬಿಡುವನ್ನು ನೀಡಿತ್ತಾದರೂ ಜು. 6ರಿಂದ ಆರಂಭಗೊಂಡ ಪನರ್ವಸು ಮಳೆ ಮತ್ತೆ  ಜನಜೀವನದ ಮೇಲೆ ಪರಿಣಾಮ ಬೀರಿದೆ. 

ಶುಕ್ರವಾರ ಮಧ್ಯಾಹ್ನದಿಂದ ಆರಂಭಗೊಂಡ ಮಳೆಯ ನಿರಂತರವಾಗಿ ಸುರಿದ ಕಾರಣ ಶನಿವಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. 

ಮಡಿಕೇರಿ ತಾಲೂಕಿನಲ್ಲಿ ದಾಖಲೆಯ ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.ಈ ಭಾಗದಲ್ಲಿ ರಸ್ತೆ ಜಲಾವೃತ್ತ‌ಗೊಂಡಿರುವು ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.ಗ್ರಾಮಸ್ಥರು ಹಾಗೂ ಪ್ರವಾಸಿಗರನ್ನು ಕರೆದೊಯ್ಯಲು ಬೋಟ್‌ ವ್ಯವಸ್ಥೆಯನ್ನು ಮಾಡಲಾಗಿದೆ. ತಲಕಾವೇರಿಯಲ್ಲಿ ಮಂಜು ಸಹಿತ ಮಳೆಯಾಗುತ್ತಿದೆ.

ಮಡಿಕೇರಿ ನಗರದಲ್ಲಿ ಮಳೆಯೊಂದಿಗೆ ಮೈಕೊರೆಯುವ ಚಳಿ ಇದೆ. ಮಂಗಳಾದೇವಿ ನಗರದಲ್ಲಿ ಬರೆ ಕುಸಿದಿದ್ದು, ವಿದ್ಯುತ್‌ ಕಂಬಗಳು ನೆಲಕಚ್ಚಿವೆ. ಉಳಿದ ಬಡಾವಣೆಗಳಲ್ಲೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ.  ಓಂಕಾರೇಶ್ವರ ದೇವಾಲಯದ ಕೆರೆ ತುಂಬಿ ಹರಿಯುತ್ತಿದ್ದು, ಆವರಣ ಜಲಾವೃತಗೊಂಡಿದೆ. ಅಬ್ಬಿ ಜಲಪಾತ ತುಂಬಿ ಹರಿಯುತ್ತಿದ್ದು, ನಗರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಕಾರ್ಮಿಕರಿಗೆ ರಜೆ 
ಸುಂಟಿಕೊಪ್ಪ ಹೋಬಳಿಯಲ್ಲಿ ಪನರ್ವಸು ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಜು.6 ರಂದು ಸಂಜೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರಿಗೆ ರಜೆ ನೀಡಲಾಗಿದೆ.

ಹಟ್ಟಿಹೊಳೆಗೆ ಒಂದೇ ದಿನದಲ್ಲಿ 8 ಇಂಚು, ಮಾದಾಪುರಕ್ಕೆ 5 ಇಂಚು,ಐಗೂರಿಗೆ 7 ಇಂಚು, ಹರದೂರಿಗೆ 6 ಇಂಚು, ಸುಂಟಿಕೊಪ್ಪಕ್ಕೆ 5 ಇಂಚು, ಮಳೆಯಾಗಿದೆ. ಹಟ್ಟಿಹೊಳೆ, ಮಾದಾಪು‌, ಐಗೂರು, ಚೋರನಹೊಳೆ, ಹರದೂರು ಹೊಳೆ ತುಂಬಿ ಹರಿಯುತ್ತಿದ್ದು ನಾಲೆ, ತೊರೆಗಳು ತುಂಬಿ ಹರಿಯುತ್ತಿವೆ.   ವಿರಾಜಪೇಟೆ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಕೆರೆ, ತೋಡುಗಳು, ಕಾವೇರಿ ಹೊಳೆಯ ನೀರಿನ ಮಟ್ಟ ಏರಿಕೆಯಾಗಿದೆ. ಕದನೂರು, ಬಿಟ್ಟಂಗಾಲ ಹಾಗೂ ಆರ್ಜಿ ಗ್ರಾಮಗಳಲ್ಲಿ ಗದ್ದೆ ಹಾಗೂ ಬಾಣೆ ಜಾಗಗಳು ಜಲಾವೃತ್ತಗೊಳ್ಳಲು ಆರಂಭಗೊಂಡಿವೆ.  
 
ಆರ್ಜಿ ಗ್ರಾಮದಲ್ಲಿಯೂ ಭಾರೀ ಮಳೆ ಯಾಗುತ್ತಿದ್ದು ಅನ್ವಾರುಲ್‌ಹುದಾ ವಿದ್ಯಾ ಸಂಸ್ಥೆಯ ಮುಂಭಾಗದ ಕೊಡಗು ಕೇರಳ ರಾಜ್ಯ ಹೆದ್ದಾರಿಯ ಸೇತುವೆಯ ಮೇಲೆ ಒಂದಡಿಯಷ್ಟು ನೀರು ಹರಿದಿದ್ದರೂ ಸಂಚಾರಕ್ಕೆ ಅಡಚಣೆ ಯಾಗಿಲ್ಲ. ಬಲಮುರಿಯಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸೋಮವಾರಪೇಟೆ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.