ಕೊಡಗು: ಮತ್ತೆರಡು ದಿನ “ರೆಡ್‌ ಅಲರ್ಟ್‌’

Team Udayavani, Aug 11, 2019, 5:32 AM IST

ಮಡಿಕೇರಿ: ಪ್ರವಾಹದಿಂದ ಕಂಗೆಟ್ಟಿರುವ ಕೊಡಗು ಜಲ್ಲೆಗೆ ಮತ್ತೂಂದು ಶಾಕ್‌ ಎದುರಾಗಿದ್ದು, ಆಗಸ್ಟ್‌ 12ರ ಬೆಳಗ್ಗೆ 8.30ರ ವರೆಗೆ ಪ್ರತಿದಿನ 204 ಮಿ.ಮೀ.ಗಿಂತ ಅಧಿಕ ಮಳೆ ಬೀಳುವ ಸಾಧ್ಯತೆಗಳಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ.

ಜಿಲ್ಲೆಯ 67 ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಭೂ ಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ. ಭಾಗಮಂಡಲದ ಕೋರಂಗಾಲ ಹಾಗೂ ವೀರಾಜಪೇಟೆಯ ತೋರ ಗ್ರಾಮದಲ್ಲಿ ಭಾರೀ ಭೂ ಕುಸಿತ ಉಂಟಾಗಿ 7 ಮಂದಿ ಮೃತಪಟ್ಟು 8 ಮಂದಿ ನಾಪತ್ತೆಯಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 40 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 4,631 ಮಂದಿಗೆ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆಯೆಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಬೆಟ್ಟ, ಗುಡ್ಡ ನದಿ ತೀರದ ಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರದಿಂದ ಇರುವಂತೆ ತಿಳಿಸಿರುವ ಅವರು, ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ ಕಾರ್ಯಾಚರಣೆಗೆ ಇಳಿದಾಗ ಸಾರ್ವಜನಿಕರು ರಕ್ಷಣಾ ತಂಡದೊಂದಿಗೆ ಸಹಕರಿಸಬೇಕೆಂದು ಕೋರಿಕೊಂಡಿದ್ದಾರೆ.ತುರ್ತು ಸೇವೆಗೆ ಟೋಲ್‌ ಫ್ರೀ ಸಂಖ್ಯೆ 08272-221077, ವಾಟ್ಸ್‌ ಅಪ್‌- 8550001077 ಸಂಪರ್ಕಿಸಬಹುದು.

ಸಮಾಧಿಯಾದ 8 ಇನ್ನೂ ಪತ್ತೆಯಿಲ್ಲ
ವೀರಾಜಪೇಟೆಯ ತೋರ ಗ್ರಾಮದಲ್ಲಿ ಶುಕ್ರವಾರ ಗುಡ್ಡ ಕುಸಿದು ನಾಪತ್ತೆಯಾಗಿದ್ದ 8 ಮಂದಿ ಇನ್ನೂ ಪತ್ತೆಯಾಗಿಲ್ಲ. ಅವರೆಲ್ಲ ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಶಂಕೆ ಮೂಡಿದೆ. ಪ್ರತೀಕೂಲ ಹವಾಮಾನದ ಕಾರಣ ಸೇನಾಪಡೆ ಮತ್ತು ಎನ್‌ಡಿಆರ್‌ಎಫ್ ತಂಡಕ್ಕೆ ಕಾರ್ಯಾಚರಣೆ ಕಷ್ಟವಾಗುತ್ತಿದೆ.

ದಕ್ಷಿಣ ಕೊಡಗಿನ ಬಹುತೇಕ ಎಲ್ಲ ತೋಟ ಹಾಗೂ ಗದ್ದೆಗಳು ಮುಳುಗಡೆಯಾಗಿವೆ. ಸಿದ್ದಾಪುರ, ಕರಡಿಗೋಡು, ನೆಲ್ಲಿಹುದಿಕೇರಿ ಭಾಗದಲ್ಲಿ ಪ್ರವಾಹದ ನೀರು ಏರಿಕೆಯಾಗುತ್ತಿದ್ದು, ನೂರಾರು ಮನೆಗಳು ನೀರಿನಲ್ಲಿ ಮುಳುಗಿವೆ.

ತಲಕಾವೇರಿ, ಭಾಗಮಂಡಲದಲ್ಲಿ ಶನಿವಾರ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗಿದ್ದು, ಶ್ರೀ ಭಗಂಡೇಶ್ವರ‌ ದೇಗುಲದ ಗರ್ಭಗುಡಿ ಆವರಿಸಿದ್ದ ಪ್ರವಾಹದ ನೀರು ತಗ್ಗಿದೆ.

ಬ್ಯಾಂಕ್‌ ಮುಳುಗಡೆ
ಕೊಂಡಂಗೇರಿಯಲಿ ಬ್ಯಾಂಕೊಂದು ಮುಳುಗಡೆಯಾಗಿದೆ. ನಾಪೋಕ್ಲು ವ್ಯಾಪ್ತಿಯಲ್ಲಿ ಮಿತಿ ಮೀರಿ ಮಳೆಯಾಗುತ್ತಿದ್ದು, ಕೊಟ್ಟಮುಡಿ ಭಾಗದಲ್ಲಿ ಕೃಷಿ ಭೂಮಿ ಸೇರಿದಂತೆ ಮನೆಗಳು ಜಲಾವೃತವಾಗಿವೆ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ವ್ಯಾಯಾಮದ ಕಸರತ್ತಿಗೆ ಫೋಮ್‌ ರೋಲರ್‌ ಸಾಧನ ಹೆಚ್ಚು ಪ್ರಸಿದ್ಧವಾಗಿದೆ. ಮೂರರಿಂದ ನಾಲ್ಕು ಇಂಚುಗಳ ಅಗಲ, 36 ಇಂಚು ಉದ್ದದ ದಿಂಬಿನಂತೆ ಕಾಣುವ ಇದು ಸ್ನಾಯುಗಳಿಗೆ...

  • ಹಳ್ಳಿಮನೆಗಳಲ್ಲಿ ಮನೆ ಮದ್ದಾಗಿ ಕಾಮ ಕಸ್ತೂರಿಯನ್ನು ಸಾಮಾನ್ಯವಾಗಿ ಉಪಯೋಗಿಸುತ್ತಾರೆ. ಆದರೆ ಅನೇಕ ಮಂದಿಗೆ ಇದರಲ್ಲಿರುವ ಆರೋಗ್ಯಕರ ಅಂಶಗಳು ತಿಳಿದಿಲ್ಲ. ಹೇರಳವಾದ...

  • ಮಂಗಳೂರು: ದೇಶದಲ್ಲಿ ಆರ್ಥಿಕ ಹಿಂಜರಿತದಿಂದಾಗಿ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಸ್‌ಎಂಇ) ತೀವ್ರ ಸಂಕಷ್ಟಕ್ಕೊಳಗಾಗಿವೆ. ಅವುಗಳನ್ನು ಉಳಿಸಲು ಕೇಂದ್ರ ಮತ್ತು...

  • ಹೊಸದಿಲ್ಲಿ: ಶೂಟಿಂಗ್‌ ಅಭ್ಯಾಸ ನಡೆಸುತ್ತಿದ್ದ ವೇಳೆ ಇಬ್ಬರು ಶೂಟರ್‌ಗಳು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ದಿಲ್ಲಿಯ ಕರ್ಣಿ...

  • ಎಲ್ಲರಿಗೂ ಒಂದಲ್ಲ ಒಂದು ದಿನ ವಯಸ್ಸಾಗುತ್ತದೆ ಅದನ್ನು ತಡೆಯಲು ಪ್ರತಿದಿನ ಹಲವಾರು ರೀತಿಯ ಕಸರತ್ತನ್ನು ಮಾಡುತ್ತಲೇ ಇರುತ್ತೇವೆ. ಅದಕ್ಕಿಂತ ಸುಲಭವಾಗಿ ಮನೆಯಲ್ಲೇ...