ಕೊಡ್ಲಿಪೇಟೆ ಕಲ್ಲುಮಠದಲ್ಲಿ ಗುರುವಂದನಾ ಕಾರ್ಯಕ್ರಮ

Team Udayavani, Apr 7, 2017, 2:56 PM IST

07-MADIKERI-1.jpg

ಶನಿವಾರಸಂತೆ: ಸಿದ್ಧಗಂಗೆ ಮಠದ ಡಾ| ಶಿವಕುಮಾರ ಸ್ವಾಮೀಜಿ ಅವರು ಸಮಾಜದ ಉದ್ಧಾರ, ದೀನ-ದಲಿತರ ಶ್ರೇಯೋಭಿವೃದ್ಧಿ, ಶಿಕ್ಷಣ, ದಾಸೋಹ ಮುಂತಾದ ಸಮಾಜದ ಸುಧಾರಣೆಗಾಗಿ ಜನ್ಮತಾಳಿದ ಆಧುನಿಕ ಯುಗದ ಮಹಾನ್‌ ಸಂತರಾಗಿದ್ದಾರೆ ಎಂದು ಚಿಕ್ಕಮಗಳೂರಿನ ಸಾಹಿತಿ ಚಟ್ನಳ್ಳಿ ಮಹೇಶ್‌ ಅಭಿಪ್ರಾಯಪಟ್ಟರು. 

ಅವರು ಸಮಿಪದ ಕೊಡ್ಲಿಪೇಟೆ ಕಲ್ಲುಮಠದ ಶಾಲಾ ಆವರಣದಲ್ಲಿ ತುಮಕೂರು ಸಿದ್ಧಗಂಗೆ ಮಠದೀಶ ಡಾ| ಶಿವಕುಮಾರ ಸ್ವಾಮೀಜಿ ಅವರ 110ನೇ ಜನ್ಮದಿನಾಚರಣೆ ಅಂಗವಾಗಿ ಮಠದ ವತಿಯಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದರು. ಸಿದ್ಧಗಂಗೆ ಶ್ರೀಗಳು ಆಧುನಿಕ ಸಮಾಜದ ಮಹಾನ್‌ ಸಮಾಜ ಸುಧಾರಕರಾಗಿದ್ದಾರೆ. ಅವರಿಗೆ 110 ವರ್ಷ ಆಗಿರುವುದು ಆಧುನಿಕ ಸಮಾಜದ ಪ್ರತಿಯೊಬ್ಬರಿಗೂ ಹೆಮ್ಮೆತರುವಂಥದ್ದು ಎಂದರು. 

ಶ್ರೀಗಳ ಆದರ್ಶ, ತತ್ವ-ಸಿದ್ಧಾಂತ ಸಮಾಜ, ಶಿಕ್ಷಣದ ಪ್ರಗತಿಯ ಚಿಂತನೆ, ಆಧ್ಯಾತ್ಮಿಕ ಚಿಂತನೆ, ಮಾನವಿಯ ಮೌಲ್ಯ ಮುಂತಾದ ವಿಚಾರಧಾರೆಗಳನ್ನು ನಾವೆಲ್ಲರೂ ಕಿಂಚಿತ್ತಾದರೂ ನಮ್ಮಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕಾಗಿದೆ ಎಂದರು. 15ನೇ ಶತಮಾನದಲ್ಲಿ ಸಾರಿದ ವಚನ ಸಾಹಿತ್ಯ ಮತ್ತು ಶರಣರ ತತ್ವ-ನಿಷ್ಠೆಗಳನ್ನು ಇಂದಿನ ಆಧುನಿಕ ಯುಗದಲ್ಲಿ ಶ್ರೀಗಳು ಅವುಗಳನ್ನು ನಮ್ಮ ಸಮಾಜಕ್ಕೆ ಸಾರಿದ್ದಾರೆ, ಶಿಕ್ಷಣ, ದಾಸೋಹ ಮುಂತಾದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಅವರು ತಮ್ಮ ಜೀವನವನ್ನು ಧಾರೆ ಎರೆದಿದ್ದಾರೆ ಎಂದರು. ಪೋಷಕರು ಮಕ್ಕಳಿಗೆ ಹಿಂದಿನ ಕಾಲದಲ್ಲಿದ್ದ ಗೌರವ, ಪ್ರೀತಿ, ಸಂಸ್ಕಾರ ಮುಂತಾದ ಮೌಲ್ಯಗಳನ್ನು ಹೇಳಿಕೊಡುತ್ತಿಲ್ಲ. ಇದರಿಂದ ಇಂದಿನ ಮಕ್ಕಳು ಸಂಸ್ಕಾರವನ್ನು ಮರೆಯುತ್ತಿದ್ದಾರೆ, ಸ್ವಾತಿಕ ಸಂಸ್ಕಾರ ಇದ್ದಲ್ಲಿ ಸಮಾಜವೂ ಸಂಸ್ಕಾರಗೊಳುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಶ್ರೀಗಳಂತಹ ಮಹಾನ್‌ ಶರಣರ ಆದರ್ಶಗಳನ್ನು ತಮ್ಮ ಮಕ್ಕಳಿಗೆ ಹೇಳಿಕೊಡಬೇಕು, ಮನೆಗಳಲ್ಲಿ ಹೆತ್ತವರಿಗೆ ಮತ್ತು ಹಿರಿಯರಿಗೆ ಗೌರವಿಸುವುದನ್ನು ಹೇಳಿಕೊಡಬೇಕು, ಇದರಿಂದ ಮಾನವಿಯ ಸಂಬಂಧ ವೃದ್ಧಿಯಾಗಿ ಸಮಾಜ ಸುಭಿಕ್ಷೆಗೊಳ್ಳುತ್ತದೆ ಎಂದರು.

ವಿರಾಜಪೇಟೆ ಅರಮೇರಿಯ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, 9ನೇ ಶತಮಾನದ ತರುವಾಯ ಮತ್ತೀಗ 21ನೇ ಶತಮಾನದಲ್ಲಿ ಶರಣರ ಸಮಾಜದ ಸುಧಾರಣೆ ಅಭಿವೃದ್ಧಿಯಾಗುವುದಕ್ಕೆ ಸಿದ್ಧಗಂಗೆ ಮಠಾಧೀಶ ಡಾ| ಶಿವಕುಮಾರ ಸ್ವಾಮೀಜಿ ಅವರು ಸಾಕ್ಷಿಯಾಗಿದ್ದಾರೆ ಎಂದರು. ಶ್ರೀಗಳು ಸಮಾಜದ ಉದ್ಧಾರಕ್ಕಾಗಿ ಸಲ್ಲಿಸಿರುವ ಸೇವೆ ಇನ್ನೂ 9 ಶತಮಾನ ಕಳೆದರೂ ಸಹ ನೆನಪಿನಲ್ಲಿ ಉಳಿಯುತ್ತದೆ, ಇಂತಹ ಮಹಾನ್‌ ಶರಣರು ತಮ್ಮ ಜೀವನವನ್ನು ತಮ್ಮ ಅನುಭವಗಳಿಗೆ ಮುಡಿಪಾಗಿಟ್ಟು ಈ ಮೂಲಕವಾಗಿ ಅವರು ಸಮಾಜ ಸೇವೆಗಾಗಿ ಧಾರೆ ಎರೆದಿದ್ದಾರೆ ಎಂದರು. 

ಅವರು ಸಮಾಜದ ಉದ್ಧಾರಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ದೇಶಕ್ಕೆ ಮಾದರಿಯಾಗಿದ್ದಾರೆ, ಶ್ರೀಗಳ ಆದರ್ಶ ಬದುಕಿನ ಬಗ್ಗೆಯೇ ಇಂದಿನ ವಿದ್ಯಾರ್ಥಿಗಳು ಪಿಎಚ್‌ಡಿ ಮಾಡಬಹುದಾಗಿದೆ. ಇಂತಹ ಸಂದರ್ಭದಲ್ಲಿ ಶ್ರೀಗಳ 110ನೇ ಜನ್ಮದಿನವನ್ನು ನಾವೆಲ್ಲರೂ ಆಚರಣೆ ಮಾಡುವುದ್ದರಿಂದ ಸಮಾಜಕ್ಕೆ ಸಂದೇಶ ಸಾರಿದಂತಾಗುತ್ತದೆ. ಅವರ ಜನ್ಮ ದಿನಾಚರಣೆಯಲ್ಲಿ ಕಲ್ಲುಮಠದಲ್ಲಿ ಆಯೋಜನೆ ಮಾಡಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರೀಗಳ ಬಗ್ಗೆ ತಿಳಿದುಕೊಂಡು ಅವರ ಗುಣಗಳಲ್ಲಿ ಕೆಲವೊಂದನ್ನು ಪಾಲನೆ ಮಾಡಿದರೆ ಬದುಕಿನಲ್ಲಿ ಸಾರ್ಥಕತೆಸಿಗುತ್ತದೆ ಎಂದರು. 

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.