ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಕಾನೂನು ನೆರವು ಕಾರ್ಯಕ್ರಮ

Team Udayavani, Sep 5, 2017, 7:40 AM IST

ಸೋಮವಾರಪೇಟೆ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಆವರಣದಲ್ಲಿ ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಕಾನೂನು ನೆರವು ಕಾರ್ಯಕ್ರಮ ನಡೆಯಿತು.

ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಪರಶು ರಾಮ್‌ ಎಫ್ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಅವರು ಆ್ಯಸಿಡ್‌ ದಾಳಿಯಿಂದ ನೊಂದವರಿಗೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದರು. ನೊಂದವರು  ಜಿಲ್ಲಾ ಕಾನೂನು ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಕಾನೂನು ಸೇವೆ ಪಡೆದುಕೊಳ್ಳಬಹುದು. ಎಸ್‌.ಸಿ.ಎಸ್‌.ಟಿ, ಮಾನಸಿಕ ಹಾಗು ಇತರ ನ್ಯೂನತೆ ಹೊಂದಿದವರು, ಮಹಿಳೆ, ಮಕ್ಕಳು, ಕಾರ್ಖಾನೆ ಕಾರ್ಮಿಕರು, ಗುಂಪು ಘರ್ಷಣೆ, ಗಲಭೆ, ಪ್ರವಾಹ, ûಾಮ, ಭೂಕಂಪ, ಕೈಗಾರಿಕಾ ವಿನಾಶಕ್ಕೆ ತುತ್ತಾದವರು, ಜೀತಕ್ಕೊಳಗಾದವರು, ಮತೀಯ ಕಾರಣದಿಂದ ದೌರ್ಜನ್ಯಕ್ಕೆ ಒಳಗಾದವರು, ವಾರ್ಷಿಕ ಆದಾಯ ರು. 1 ಲಕ್ಷಕ್ಕಿಂತ ಕಡಿಮೆಯಿರುವ ಎಲ್ಲಾ ವರ್ಗದ ಜನರಿಗೆ ಉಚಿತ ಕಾನೂನು ನೆರವು ಸಿಗಲಿದೆ. ಇದರ ಸದುಪಯೋಗವನ್ನು ಫ‌ಲಾನುಭವಿಗಳು ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದರು.

ಕಾರ್ಯಕ್ರಮದಲ್ಲಿ ಸಿವಿಲ್‌ ನ್ಯಾಯಾ ಧೀಶರಾದ ಶ್ಯಾಮ್‌ ಪ್ರಕಾಶ್‌, ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್‌, ವಕೀಲರಾದ ಎಂ.ಎನ್‌. ಶಂಕರ್‌ ಇದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ