ಕುಷ್ಠ ರೋಗ: ಜನರಲ್ಲಿ ಜಾಗೃತಿ ಮೂಡಿಸಲು ಲಕ್ಷ್ಮೀಪ್ರಿಯ ಕರೆ

Team Udayavani, Jan 23, 2020, 11:57 PM IST

ಮಡಿಕೇರಿ: ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ ಅವರು ತಿಳಿಸಿದರು.

ಜಿ.ಪಂ.ಕಚೇರಿ ಸಭಾಂಗಣದಲ್ಲಿ ನಡೆದ ಸ್ಪರ್ಶ್‌ ಕುಷ್ಠರೋಗ ಅರಿವು ಆಂದೋಲನ ಅನುಷ್ಠಾನದ ಬಗ್ಗೆ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ, ಮಾಧ್ಯಮ ಗಳಲ್ಲಿ, ಕುಷ್ಠ ರೋಗದ ಕುರಿತು ಹೆಚ್ಚಿನ ಪ್ರಚಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಆನಂದ್‌ ಅವರು ಜನವರಿ, 30ರಿಂದ ಫೆಬ್ರವರಿ, 13 ರ ತನಕ 15 ದಿನಗಳ ಕಾಲ ಜಿಲ್ಲೆಯಾದ್ಯಂತ ಸ್ಪರ್ಶ್‌ ಕುಷ್ಠ ರೋಗ ಅರಿವು ಆಂದೋಲನ ನಡೆಯಲಿದ್ದು, ಗ್ರಾ.ಪಂ. ಗ್ರಾಮ ಸಭೆಗಳಲ್ಲಿ, ಪ್ರತಿ ಗ್ರಾಮದಲ್ಲಿ, ನಗರ ಪ್ರದೇಶಗಳಲ್ಲಿ ಕುಷ್ಠ ರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ವಿರಾಜಪೇಟೆ ತಾಲೂಕಿನಲ್ಲಿ 2, ಸೋಮವಾರಪೇಟೆ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದ್ದು, ಇವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಜಿ.ಪಂ. ಉಪಕಾರ್ಯದರ್ಶಿ ಗುಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಕೆ. ಮೋಹನ್‌, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್‌ ಇತರರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ