“ಯುವಪೀಳಿಗೆಯ ಆಸಕ್ತಿಯಲ್ಲಿ ಸಾಹಿತ್ಯ ಭವಿಷ್ಯ’

10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ತೆರೆ

Team Udayavani, Aug 3, 2019, 5:30 AM IST

DSC_2716

ಮಡಿಕೇರಿ: ಕೊಡಗಿನ ಪವಿತ್ರ ಮಣ್ಣಿನಲ್ಲಿ ಸಮೃದ್ದ ಸಾಹಿತ್ಯ ಕೃಷಿಯಲ್ಲಿ ಸಾಕಷ್ಟು ಮಂದಿ ತೊಡಗಿಸಿಕೊಂಡಿದ್ದು. ಮಹಿಳೆಯರಿಗೆ ಸಾಹಿತ್ಯ ರಂಗದಲ್ಲಿ ಆಸಕ್ತಿ ಹೆಚ್ಚಿರುವುದು ಗಮನಾರ್ಹವಾಗಿದೆ.

ಸಾಹಿತ್ಯ,ಸಾಂಸ್ಕೃತಿಕ ಜೀವನದಲ್ಲಿ ಜಿಲ್ಲೆಯ ಯುವಪೀಳಿಗೆಯೂ ಹೆಚ್ಚು ಆಸಕ್ತಿ ವಹಿಸುತ್ತಿರುವ ಬೆಳವಣಿಗೆ ಕೊಡಗಿನ ಭವಿಷ್ಯ ಈ ವಿಚಾರದಲ್ಲಿ ಉಜ್ವಲವಾಗಿದೆ ಎಂದು ಸಾಹಿತಿ ಪತ್ರಕರ್ತ ಚಿ.ನಾ.ಸೋಮೇಶ್‌ ಹೇಳಿದರು.

ಚೇರಂಬಾಣೆ ಕೊಡವ ಸಮಾಜದಲ್ಲಿ ಆಯೋಜಿತ ಮಡಿಕೇರಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡಿದರು.

ಸಮ್ಮೇಳನಾಧ್ಯಕ್ಷ ಕಿಗ್ಗಾಲು ಗಿರೀಶ್‌ ಮಾತನಾಡಿ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಚೇರಂಬಾಣೆಯಂಥ ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿಯಾಗಿ ನಡೆದಿದ್ದು ಸಂತೋಷ ತಂದಿದೆ. ಎಂದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ್‌ ಮಾತನಾಡಿ, ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಿತ್ಯ ಸಂಬಂಧಿತ ಕಾರ್ಯಕ್ರಮಗಳು ಹೆಚ್ಚುತ್ತಲೇ ಇರಬೇಕು. ಎಂದು ಕರೆ ನೀಡಿದರು.

ತಲಕಾವೇರಿ – ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಮಾತನಾಡಿ, ಕೊಡಗಿನಲ್ಲಿ ತಾನು ಗಮನಿಸಿದಂತೆ ಮಹಿಳೆಯರಿಗೆ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಆಸಕ್ತಿಯಿದೆ. ಹೀಗಾಗಿಯೇ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಕಾಣಿಸುತ್ತಾರೆ ಎಂದದರು.

ಕನ್ನಡ ಸಾಹಿತ್ಯ ಪರಿಷತ್‌ ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್‌ ಸಂತೋಷ್‌ , ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಬಿ.ಎಸ್‌.ಲೋಕೇಶ್‌ ಸಾಗರ್‌, ಗೌರವ ಕಾರ್ಯದರ್ಶಿ ಕೆ.ಎಸ್‌.ರಮೇಶ್‌, ಚೇರಂಬಾಣೆ ಗ್ರಾ.ಪಂ. ಅಧ್ಯಕ್ಷ ಅಶೋಕ್‌, ಚೇರಂಬಾಣೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮುಕ್ಕಾಟಿ ಎನ್‌.ಮಾದಪ್ಪ ಉಪಸ್ಥಿತರಿದ್ದರು.ಕಸಾಪ ಜಿಲ್ಲಾ ನಿರ್ದೇಶಕ ಜೋಯಪ್ಪ ಸ್ವಾಗತಿಸಿದರು. ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮಾನ
ಕನ್ನಡ ನಾಡು, ನುಡಿ, ಸಾಹಿತ್ಯ, ನೆಲ, ಜಲ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳನ್ನು ಸಮ್ಮಾನಿಸಲಾಯಿತು. ಕ್ರೀಡಾಕ್ಷೇತ್ರದಿಂದ ಚೇರಂಬಾಣೆಯ ಮೇಲಾಟಂಡ ಅರುಣ್‌ ಉತ್ತಪ್ಪ, ಸಮಾಜ ಸೇವೆಗಾಗಿ ಮಹದೇವಪೇಟೆಯ ಮಹಿಳಾ ಸಹಕಾರ ಸಂಘ, ಮಾಧ್ಯಮ ಕ್ಷೇತ್ರದಿಂದ ಅನಿಲ್‌ ಎಚ್‌.ಟಿ. ಶಿಕ್ಷಣ ಕ್ಷೇತ್ರದಿಂದ ಚೆಟ್ಟಿಮಾನಿಯ ಕೇಕಡ ಇಂದುಮತಿ, ಸಾಹಿತ್ಯ ಕ್ಷೇತ್ರದಿಂದ ಚೆಂಬು ಗ್ರಾಮದ ಹೊಸೂರು ಸಂಗೀತ ರವಿರಾಜ್‌, ಉನ್ನತ ಹುದ್ದೆಗಾಗಿ ಮಡಿಕೇರಿಯ ಪಿ.ಎಂ. ಸಚಿನ್‌ ಅವರನ್ನು ಸಮ್ಮಾನಿಸಲಾಯಿತು. ಕೃಷಿ ಕ್ಷೇತ್ರದಿಂದ ಚೇರಂಬಾಣೆಯ ಜಿ.ಈ. ಪಳಂಗಪ್ಪ, ನೃತ್ಯ ಕ್ಷೇತ್ರದಿಂದ ಮೂರ್ನಾಡಿನ ಕಾವ್ಯಶ್ರೀ ಸಿನಿಮಾ ಕ್ಷೇತ್ರದಿಂದ ಚೇರಂಬಾಣೆಯ ಕೊಟ್ಟುಕತ್ತಿರ ಪ್ರಕಾಶ್‌, ವೈದ್ಯಕೀಯ ಕ್ಷೇತ್ರದಿಂದ ಡಾ| ಎಚ್‌ ಎಸ್‌. ಉರಾಳ, ಸಂಗೀತ ಕ್ಷೇತ್ರದಿಂದ ಮಡಿಕೇರಿಯ ಕೋದಂಡ ಗೌರು ಗಣಪತಿ, ರಂಗಭೂಮಿಯಿಂದ ಅರ್ವತ್ತೂಕ್ಲಿನ ತೆನ್ನೀರ ರಮೇಶ್‌ ಪೊನ್ನಪ್ಪ ಅವರನ್ನು ಕಸಾಪದಿಂದ ಅಭಿನಂದಿಸಲಾಯಿತು. ಹೈನುಗಾರಿಕೆ ಕ್ಷೇತ್ರದಿಂದ ಮಡಿಕೇರಿಯ ಮುರಾದ್‌, ಯುವ ಪ್ರತಿಭೆ ಮರಗೋಡಿನ ಪಿ.ಆರ್‌. ಆರ್ಯ, ಯಕ್ಷಗಾನದಲ್ಲಿ ಸಂಪಾಜೆಯ ಬಿ.ಜೆ. ಯಶೋಧರ, ವಿಶೇಷ ಪ್ರತಿಭೆ ಕೊಳಗದಾಳಿನ ಚೀರಮಂಡ ವಾಣಿ ಚಂಗುವಮ್ಮಯ್ಯ, ವಿಜ್ಞಾನ ಕ್ಷೇತ್ರದಿಂದ ಚೇರಂಬಾಣೆಯ ಲೋಕೇಶ್‌, ಕಲೆ ಕ್ಷೇತ್ರದಿಂದ ಗೋಪಾಲ ಅವರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.