ಲಾರಿ, ಕಾರು ಢಿಕ್ಕಿ: ಮಹಿಳೆ ಸಾವು
Team Udayavani, Jun 14, 2018, 6:00 AM IST
ಮಡಿಕೇರಿ: ಲಾರಿ ಹಾಗೂ ಕಾರು ಪರಸ್ಪರ ಢಿಕ್ಕಿ ಹೊಡೆ ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ರಸ್ತೆಯ ಆನೆಕಾಡು ಬಳಿ ನಡೆದಿದೆ.
ಮಡಿಕೇರಿ ಸಮೀಪದ ಕಾಟಕೇರಿ ನಿವಾಸಿ ಫಿಲೋಮಿನಾ ಮೃತರು. ಕಾರು ಚಲಾಯಿಸುತ್ತಿದ್ದ ಅವರ ಪುತ್ರ ಯೋಧ ಪ್ರವೀಣ್ ಡ್ಯಾನಿಯಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮೈಸೂರಿನ ಡೋರ್ನಳ್ಳಿ ಚರ್ಚಿಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಪ್ರವೀಣ್ ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಲಾರಿಯೊಂದನ್ನು ಹಿಂದಿಕ್ಕುವ ಪ್ರಯತ್ನದಲ್ಲಿದ್ದ ಈ ಕಾರು ಎದುರಿನಿಂದ ಬಂದ ಲಾರಿಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ