Madikeri 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಮಾಡಿದ ಕೊಡಗಿನ ಯೋಧ ಅನಾರೋಗ್ಯದಿಂದ ನಿಧನ
Team Udayavani, Sep 16, 2023, 8:51 PM IST
ಮಡಿಕೇರಿ: ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯು.ಕೆ. ಜಿತನ್ (33) ಅನಾರೋಗ್ಯದಿಂದ ಸೆ. 15ರಂದು ನಿಧನ ಹೊಂದಿದರು.
ಮೃತರು ಪತ್ನಿ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ. ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮದಲ್ಲಿ ಸಕಲ ಸೇನಾ ಗೌರವ ಮತ್ತು ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಭಾರತೀಯ ಸೇನೆಯಲ್ಲಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಜಿತನ್ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಪ್ರಸ್ತುತ ಎಂಇಜಿ ಸೆಂಟರ್ನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ