ಮಡಿಕೇರಿ: ತಂದೆಯಿಂದಲೇ ಪುತ್ರನ ಹತ್ಯೆ
Team Udayavani, Feb 20, 2023, 6:00 AM IST
ಮಡಿಕೇರಿ: ವ್ಯಕ್ತಿಯೊಬ್ಬರು ಗುಂಡೇಟಿನಿಂದ ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ತಂದೆಯಿಂದಲೇ ಪುತ್ರನ ಹತ್ಯೆಯಾಗಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಂದೇಟಿರ ನಿರನ್ (28) ಮೃತ ವ್ಯಕ್ತಿಯಾಗಿದ್ದು, ಆರೋಪಿ ತಂದೆ ನಂದೇಟಿರ ಚಿಟ್ಟಿಯಪ್ಪ ಸಾಬು (58) ಅವರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ ಕೋವಿಯನ್ನು ವಶಕ್ಕೆ ಪಡೆಯಲಾಗಿದೆ.
ಕೌಟುಂಬಿಕ ಕಲಹವೇ ಘಟನೆಗೆ ಕಾರಣವೆಂದು ಹೇಳಲಾಗಿದ್ದು, ನಿರನ್ ಟಿವಿ ನೋಡುತ್ತಿದ್ದ ಸಂದರ್ಭ ತಂದೆ ಸಾಬು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್