ಮಡಿಕೇರಿ : ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣು
Team Udayavani, May 24, 2022, 9:58 PM IST
ಮಡಿಕೇರಿ : ಜೀವನದಲ್ಲಿ ಜುಗುಪ್ಸೆಗೊಂಡು ನವ ವಿವಾಹಿತೆ ಚಿತ್ರಾ (26) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಸಮೀಪದ ತೂಬನಕೊಲ್ಲಿಯಲ್ಲಿ ನಡೆದಿದೆ.
ಯುವತಿಗೆ ಕಳೆದ ಒಂದು ತಿಂಗಳ ಹಿಂದೆ ಮೂರ್ನಾಡು ಸಮೀಪದ ಹೊದ್ದೂರು ನಿವಾಸಿ ಹರೀಶ ಅವರೊಂದಿಗೆ ವಿವಾಹವಾಗಿತ್ತು. ಕೆಲವು ದಿನಗಳ ಹಿಂದೆ ಅವರು ತೂಬನಕೊಲ್ಲಿಯಲ್ಲಿರುವ ತನ್ನ ತಾಯಿಯ ಮನೆಗೆ ಬಂದಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಭೇಟಿ ನೀಡಿ ಪರಿಶೀಲಿಸಿದರು. ಸಿದ್ದಾಪುರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ