ಮಡಿಕೇರಿ: ಜಿಲ್ಲಾಡಳಿತದಿಂದ ತನಿಖಾ ತಂಡ ರಚನೆ

ತಲಕಾವೇರಿಯಲ್ಲಿ ವಿವಾದಿತ ರೆಸಾರ್ಟ್‌ ಯೋಜನೆ

Team Udayavani, Sep 12, 2019, 5:13 AM IST

ಮಡಿಕೇರಿ: ತಲಕಾವೇರಿಯಿಂದ ಕೇವಲ 700 ಮೀಟರ್‌ ದೂರದಲ್ಲಿರುವ ಅತಿಸೂಕ್ಷ್ಮ ಅರಣ್ಯ ಪ್ರದೇಶವನ್ನು ನಾಶ ಮಾಡಿ ರೆಸಾರ್ಟ್‌ ನಿರ್ಮಿಸಲು ಮುಂದಾ ಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ನಾಲ್ವರು ಅಧಿಕಾರಿ ಗಳನ್ನೊಳ ಗೊಂಡ ತನಿಖಾ ತಂಡ ರಚಿಸಿದ್ದಾರೆ.

ಉಪವಿಭಾಗಾಧಿಕಾರಿ ಜವರೇ ಗೌಡ, ಮುಖ್ಯ ಕಾರ್ಯ ನಿರ್ವ ಹಣಾ ಧಿಕಾರಿ ಲಕ್ಷ್ಮೀಪ್ರಿಯ, ಮಡಿಕೇರಿ ಎಸಿಎಫ್ ನೆಹರೂ ಮತ್ತು ಗಣಿ ಮತ್ತು ಭೂ ವಿಜ್ಞಾನಿಗಳು ಸಮಿತಿಯಲ್ಲಿದ್ದು, ತನಿಖೆ ಪ್ರಗತಿಯಲ್ಲಿದೆ.

ಅರಣ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬೆಟ್ಟ ವಿರೂಪಗೊಳಿಸಿರುವ ಜಾಗ ಅರಣ್ಯ ಪೈಸಾರಿ ಎಂದು ಗೊತ್ತಾಗಿದೆ. ವಿವಿಧ ಜಾತಿಯ ಕಾಡು ಮರಗಳನ್ನು ಕಡಿದು ಬೀಳಿಸಿ ರು ವುದೂ ಅಲ್ಲದೆ, ಔಷಧೀಯ ಸಸ್ಯ ಸಂಕುಲವನ್ನು ಮಣ್ಣಿ¡ನಡಿ ಮುಚ್ಚಿ ಹಾಕಿರುವುದು ಅರಣ್ಯ ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಕಂದಾಯ ಉಪನಿರೀಕ್ಷಕ ಅಕ್ರಮ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಪ್ರಕರಣದ ಬಗ್ಗೆ ವಿಳಂಬ ಮಾಡದೆ ಶೀಘ್ರ ತನಿಖೆ ನಡೆಸಿ ಸತ್ಯಾಂಶ ಬಯಲು ಗೊಳಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಮತ್ತು ಭಾಗಮಂಡಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮಸ್ಥರಲ್ಲಿ ಆತಂಕ
ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಅಪಾಯಕಾರಿ ಬಿರುಕು ಕಾಣಿಸಿಕೊಳ್ಳುತ್ತಿರುವುದರಿಂದ ವಿವಾದಿತ ಪ್ರದೇಶದ ಗ್ರಾಮಸ್ಥರಲ್ಲೂ ಆತಂಕ ಸೃಷ್ಟಿಯಾಗಿದೆ. ಸೂಕ್ಷ್ಮ ಅರಣ್ಯ ಪ್ರದೇಶದಲ್ಲಿ ರೆಸಾರ್ಟ್‌ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ, ಅಲ್ಲದೆ ಕೆರೆಯೊಂದನ್ನು ಕೂಡ ನಿರ್ಮಿಸಲಾಗಿದೆ. ಈ ಕೆರೆಯಿಂದಲೇ ಮುಂದೊಂದು ದಿನ ಅಪಾಯ ಕಾದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಕಂದಾಯ ಉಪನಿರೀಕ್ಷಕ, ಪುತ್ರನ ವಿರುದ್ಧ ಪ್ರಕರಣ
ಬೆಟ್ಟ ವಿರೂಪಗೊಳಿಸಿ ಕಾಟೇಜ್‌ ನಿರ್ಮಾಣ, ರಸ್ತೆ, ಕೆರೆ ಹಾಗೂ ಇನ್ನಿತರ ಕಾಮಗಾರಿ ನಡೆಸಿದ್ದ ಮಡಿಕೇರಿ ಕಂದಾಯ ಇಲಾಖೆ ಉಪನಿರೀಕ್ಷಕ ಹಾಗೂ ಅವರ ಪುತ್ರನ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ, ಕರ್ನಾಟಕ ಜೀವ ವೈವಿಧ್ಯ ಅಧಿನಿಯಮ ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಈ ಪ್ರಕರಣದ ಕುರಿತು ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಅರಣ್ಯ ಇಲಾಖೆಗೆ ದೂರು ನೀಡಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ