ಮಡಿಕೇರಿ ಪ್ರ.ದ. ಕಾ. : ಹಳೆ ವಿದ್ಯಾರ್ಥಿ ಸಂಘ ರಚನೆ

Team Udayavani, Jul 24, 2019, 5:19 AM IST

sangha

ಮಡಿಕೇರಿ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಸವಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಕಾಲೇಜ್‌ನ ಪ್ರಾಂಶುಪಾಲೆ ಪ್ರೊ| ವೈ.ಕೆ. ಚಿತ್ರಾ, ಉಪಾಧ್ಯಕ್ಷರಾಗಿ ಬಿ.ಪಿ.ಕಾಸ್‌ ಹಾಗೂ ಕಾರ್ಯದರ್ಶಿಯಾಗಿ ಕೆ.ಪಿ.ಪ್ರತಾಪ್‌ ಆಯ್ಕೆಯಾಗಿದ್ದಾರೆ.

ಸಂಘದ ರಚನೆ ಸಂಬಂಧ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು.ಇನ್ನು ಸಹ ಕಾರ್ಯದರ್ಶಿಯಾಗಿ ಸಲ್ಮಾ ಖಾನಂ, ಖಜಾಂಚಿಯಾಗಿ ಎಂ. ಶಿವರಾಜ್‌ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಸಭೆಯ ಆರಂಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಂಚಾಲಕ ಡಾ| ಕೆ.ಸಿ. ದಯಾನಂದ ಅವರು ಮಾತನಾಡಿ, ಕಾಲೇಜು ಪ್ರಾರಂಭವಾಗಿ 12 ವರ್ಷ ಕಳೆದರೂ ಹಳೆ ವಿದ್ಯಾರ್ಥಿ ಸಂಘ ಇನ್ನು ರಚನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ಈ ಬಗ್ಗೆ ಹಲವು ಬಾರಿ ಸಭೆ ನಡೆಸಿ ಚರ್ಚೆಯಾಗಿದ್ದರೂ ಇನ್ನು ಕಾರ್ಯೋನ್ಮುಖವಾಗಿಲ್ಲ. ಇನ್ನು ಮುಂದೆ ಹಳೆಯ ವಿದ್ಯಾರ್ಥಿಗಳು ಸಂಘದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕೋರಿದರು.

2019-20ನೇ ಸಾಲಿನಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಮಡಿಕೇರಿ ಎಂದು ನೋಂದಣಿ ಮಾಡಿಸಿ ಇನ್ನು ಹೆಚ್ಚಿನ ಸದಸ್ಯರು ನೇಮಿಸಿ ಸಂಘಟಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಕಾಲೇಜ್‌ನ ಪ್ರಾಂಶುಪಾಲೆ ಪ್ರೊ| ವೈ.ಕೆ. ಚಿತ್ರಾ ಅವರು ಮಾತನಾಡಿ, ನೂತನ ಸಮಿತಿಯು ಮುಂದಿನ ಅಧಿಕಾರಾವಧಿಯಲ್ಲಿ ಕಾಲೇಜಿನ ಪ್ರಗತಿ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಯೋಜನೆ ರೂಪಿಸುವುದು ಮತ್ತು ಶೈಕ್ಷಣಿಕ ಬೆಳವಣಿಗೆ, ಸಾಮಾಜಿಕ ಕಳಕಳಿ ಸೇರಿದಂತೆ ಸೇವಾ ಮನೋಭಾವದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಸಂಘದ ನೋಂದಣಿ ಕಾರ್ಯ ಶೀಘ್ರ ಆಗಬೇಕು, ಕನಿಷ್ಠ ಎರಡು ತಿಂಗಳಿಗೊಮ್ಮೆ ಹಾಗೂ ತುರ್ತು ಸಂದರ್ಭದಲ್ಲಿ ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಸಂಘದ ಪ್ರಾಧ್ಯಾಪಕ‌ ಬಿ.ಆರ್‌. ಶಶಿಧರ್‌, ಪದಾಧಿಕಾರಿಗಳಾದ ಎಂ.ಜಿ. ದೀಪಕ್‌, ಬಿ.ಆರ್‌. ಕಾರ್ತಿಕ್‌, ಬಿ.ಎನ್‌. ಸುಮಂತ್‌, ಚರಣ್‌ ರಾಜ್‌, ಪವನ್‌ ಕುಮಾರ್‌, ಲಿಕ್ಕಿತಾ, ಪ್ರಿಯಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.