ಮಳೆ: ಮಡಿಕೇರಿ – ಮಂಗಳೂರು ರಸ್ತೆ ಕುಸಿತ

Team Udayavani, Jul 26, 2018, 3:40 AM IST

ಮಡಿಕೇರಿ: ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ಬಿರುಕುಗಳು ಕಾಣಿಸಿಕೊಂಡಿವೆ. ಕಾಟಕೇರಿ ಬಳಿ ಮಂಗಳವಾರ ರಾತ್ರಿ ರಸ್ತೆ ಕುಸಿದು ವಾಹನಗಳ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ.

ರಸ್ತೆಯ ಶೇ. 50ರಷ್ಟು ಭಾಗ ಅಪಾಯದಂಚಿನಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್‌ ಗಳನ್ನು ಅಳವಡಿಸಿದ್ದಾರೆ. ಭಾರೀ ವಾಹನಗಳ ಸಂಚಾರದಿಂದಾಗಿ ಮತ್ತೆ ರಸ್ತೆ ಸಂಪೂರ್ಣವಾಗಿ ಕುಸಿಯುವ ಸಾಧ್ಯತೆಗಳಿದ್ದು, ಅಧಿಕಾರಿಗಳು ನಿಗಾವಹಿಸಿದ್ದಾರೆ. ಪುನರ್ವಸು ಮಳೆಯ ಅನಂತರ ಪುಷ್ಯ ಮಳೆ ಕೂಡ ವೇಗವನ್ನು ಹೆಚ್ಚಿಸಿಕೊಂಡಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ