
ಮಡಿಕೇರಿ: ವೈದ್ಯರ ಬ್ಯಾಗ್ ಸಹಿತ ದ್ವಿಚಕ್ರ ವಾಹನ ಕಳ್ಳತನ
Team Udayavani, Nov 29, 2022, 6:15 AM IST

ಮಡಿಕೇರಿ: ವೈದ್ಯರ ಬ್ಯಾಗ್ ಸಹಿತ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿರುವ ಪ್ರಕರಣ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ರವಿವಾರ ಸಂಜೆ 7 ಗಂಟೆ ಸುಮಾರಿಗೆ ಆಸ್ಪತ್ರೆಯ ಸಿಬಂದಿಯ ರೀತಿಯಲ್ಲಿ ಮಾಸ್ಕ್ ಧರಿಸಿ ಬಂದ ಯುವಕನೊಬ್ಬ ಅಂದಾಜು 1 ಗಂಟೆಗಳ ಕಾಲ ವೈದ್ಯರು ಇಟ್ಟಿದ್ದ ಬ್ಯಾಗ್‌ಗಳ ಕೊಠಡಿಯ ಸುತ್ತಮುತ್ತ ಓಡಾಡಿದ್ದಾನೆ. ಅನಂತರ ಯಾರು ಇಲ್ಲದ ಸಮಯ ನೋಡಿಕೊಂಡು ಕೊಠಡಿಯಲ್ಲಿದ್ದ 7 ಬ್ಯಾಗ್‌ಗಳನ್ನು ಕದ್ದೊಯ್ದಿದ್ದಾನೆೆ. ಬ್ಯಾಗ್‌ನಲ್ಲಿ ಸಿಕ್ಕಿದ 1 ಕೀ ಬಳಸಿ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ್ದ ಒಂದು ಆ್ಯಕ್ಟಿವ ಹೋಂಡ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾಗಿದ್ದಾನೆ.
ಈ ಎಲ್ಲ ದೃಶ್ಯಗಳು ಆಸ್ಪತ್ರೆಯ ಸಿ.ಸಿ. ಕೆಮರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ ಹಾಗೂ ಸಿಬಂದಿ ಸಹಿತ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಕಳ್ಳತನ ನಡೆಯುತ್ತಿರುವುದು ಹೊಸದೇನಲ್ಲ. ಕೋವಿಡ್ ಸಮಯದಲ್ಲೂ ಈ ರೀತಿಯ ಕಳ್ಳತನ ಪ್ರಕರಣಗಳು ನಡೆದಿವೆ. ಇದೀಗ ಮತ್ತೆ ಕಳ್ಳತನ ಪ್ರಕರಣಗಳು ನಡೆದಿದ್ದು, ಆಸ್ಪತ್ರೆ ಸುರಕ್ಷಿತ ಸ್ಥಳವಲ್ಲ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್