ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
Team Udayavani, May 18, 2019, 6:07 AM IST
ಮಡಿಕೇರಿ: ಮೈಸೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿನ ಮಡಿಕೇರಿ ಜೋಡುಪಾಲ ರಸ್ತೆಯಲ್ಲಿ ಅತಿವೃಷ್ಟಿಗೆ ಹಾನಿಯಾದ ರಸ್ತೆಯ ಶಾಶ್ವತ ಕಾಮಗಾರಿಯನ್ನು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದೆ.
ರಸ್ತೆ ಹಾನಿಗೊಳಗಾದ ಪ್ರದೇಶದಲ್ಲಿ 300 ಮೀಟರ್ ವಿಸ್ತಾರದ 30 ಅಡಿ ಉದ್ದದ ತಡೆಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳೊಂದಿಗೆ ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ 2 ನೇ ಮೊಣ್ಣಂಗೇರಿ ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರೊಂದಿಗೆ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಮತ್ತು ಕುಂದ ಹಾಡಿಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ತಾ.ಪಂ.ಇಒ ಜಯಣ್ಣ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!