“ಪ್ರಕೃತಿ ವಿಕೋಪ:ಮುಂಜಾಗ್ರತ ಕ್ರಮ ಅಗತ್ಯ’

ವಿಪತ್ತು ನಿರ್ವಹಣಾ ಯೋಜನೆ ತರಬೇತಿ

Team Udayavani, May 11, 2019, 6:07 AM IST

ಮಡಿಕೇರಿ: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿ ಸಬೇಕಾಗಿದೆ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ನಿಯೋಜಿಸುವ ಮೂಲಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸುವುದು ಮುಖ್ಯ ಎಂದು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕ ಡಾ.ಜೆ.ಆರ್‌.ಪರಮೇಶ ಹೇಳಿದ್ದಾರೆ.

ಜಿಲ್ಲಾಡಳಿತ ಹಾಗೂ ವಿಕೋಪ ನಿರ್ವಹಣಾ ಕೇಂದ್ರ, ಆಡಳಿತ ತರಬೇತಿ ಸಂಸ್ಥೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬಂದಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ, ಪರಿಷ್ಕರಣೆ ಹಾಗೂ ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧತೆ ಹಾಗೂ ಸ್ಪಂದನೆ ಯೋಜನೆ ಬಗ್ಗೆ ಎರಡು ದಿನದ ತರಬೇತಿ ಉಪನ್ಯಾಸ ಕಾರ್ಯಾಗಾರ ನಡೆಯಿತು.

ಕಳೆದ ಬಾರಿ ಕೊಡಗು ತೀವ್ರ ಅತೀವೃಷ್ಟಿಯಿಂದಾಗಿ ಹಲವು ಹಾನಿ ಸಂಭವಿಸಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ವಿಪತ್ತು ತಡೆಗಟ್ಟುವಿಕೆ, ವಿಪತ್ತಿನ ಸಂದರ್ಭದಲ್ಲಿ ಸೂಕ್ತ ಸ್ಪಂದನೆ ಹಾಗೂ ಪುನರ್ವಸತಿ ಕಲ್ಪಿಸುವಲ್ಲಿ ಯೋಜನೆಯು ಹೇಗೆ ಉಪಯುಕ್ತವಾಗುತ್ತದೆ, ಮಾಹಿತಿಗಳನ್ನು ಹೇಗೆ ಕ್ರೋಢಿಕರಿಸಬೇಕು, ವಿಪತ್ತು ಯೋಜನೆ ಸಿದ್ಧ$ªಪಡಿಸುವ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಪಾಯಗಳ ಬಗ್ಗೆ ಗುರುತಿಸಿಕೊಂಡು ವಿಪತ್ತಿನ ಸಂದರ್ಭದಲ್ಲಿ ಸೂಕ್ತ ಸ್ಪಂದನೆ ಹಾಗೂ ಪುನರ್ವಸತಿ ಯೋಜನೆ ರೂಪಿಸಬೇಕು ಎಂದರು.

ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರದವರು ವಿಪತ್ತು ನಿರ್ವಹಣಾ ಯೋಜನೆಗೆ ಸಿದ್ಧ$ªಪಡಿಸಿರುವ ಮಾರ್ಗದರ್ಶಿ ಆಧಾರದ ಮೇಲೆ ಸೂಕ್ತ ನಮೂನೆಗಳನ್ನು ಕಾರ್ಯಾಗಾರದಲ್ಲಿ ಪರಿಚಯಿಸಿದರು. ಜಿಲ್ಲೆಯಲ್ಲಿ ತುರ್ತು ನಿರ್ವಹಣಾ ಕೇಂದ್ರಗಳನ್ನು ದಿನದ 24 ಗಂಟೆಗಳು ಕಾರ್ಯನಿರ್ವಹಿಸುವಂತೆ ಮಾಡಬೇಕು.

ನೈಸರ್ಗಿಕ ವಿಕೋಪದಿಂದ ಸಂತ್ರಸ್ಥರಾದವರಿಗೆ ತಂಗಲು ಪರಿಹಾರ ಕೇಂದ್ರ, ಪುನರ್ವಸತಿ ಕೇಂದ್ರ ಆರಂಭಿಸಿಸಬೇಕಿದೆ. ಜಿಲ್ಲಾ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅವಶ್ಯಕ ಔಷಧಿಗಳನ್ನು ದಾಸ್ತಾನು ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸಬೇಕು ಎಂದು ಅವರು ಸಲಹೆ ಮಾಡಿದರು. ಭೌಗೋಳಿಕ ಮಾಹಿತಿ ವ್ಯವಸ್ಥೆಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದು. ವಿಪತ್ತು ನಿರ್ವಹಣೆ ಯೋಜನೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಜಿಲ್ಲಾ ಅಗ್ನಿ ಶಾಮಕಾಧಿಕಾರಿ, ಭೂವಿಜ್ಞಾನಿ ವಿಪತ್ತು ನಿರ್ವಹಣಾ ತಜ್ಞರು, ಆರೋಗ್ಯಾಧಿಕಾರಿ, ಜಿಲ್ಲಾ ಪೊಲೀಸರು ವಿಪತ್ತು ನಿರ್ವಹಣಾ ಕಾರ್ಯಗಳಲ್ಲಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಿರ್ವಹಣೆಯನ್ನು ಹೇಗೆ ಕೈಗೊಳ್ಳಬೇಕೆಂದು ವಿವರಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್‌ ಇಲಾಖೆ, ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡಗಳು ಗುಂಪು ಚರ್ಚೆಯ ಮೂಲಕ ವಿಕೋಪ ತಡೆಗಟ್ಟುವಿಕೆ ಹಾಗೂ ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ರಾಜಲಕ್ಷಿ¾ ಉಪಸ್ಥಿತರಿದ್ದರು.

ಯೋಜನೆ ಸಹಕಾರಿ
ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಮಾತನಾಡಿ ಕಾರ್ಯಾಗಾರದ ಪ್ರಶಿಕ್ಷಣಾರ್ಥಿಗಳೊಂದಿಗೆ ಚರ್ಚೆ ನಡೆಸಿ, ಮುಂಬರುವ ದಿನಗಳಲ್ಲಿ ಸಂಭವಿಸಬಹುದಾದವಿಕೋಪಗಳನ್ನು ತಡೆಗಟ್ಟುವಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆಯು ಸಹ ಕಾರಿಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಸಂಬಂಧಪಟ್ಟ ಎಲ್ಲಾ ಮಾಹಿತಿಗಳನ್ನು ಕ್ರೋಢೀಕರಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ಸೇರಿಸಿ ಜಿಲ್ಲಾ ಮಟ್ಟದ ಅಪಾಯ, ನಷ್ಟದು ರ್ಬಲತೆಹಾಗೂಸಾಮರ್ಥ್ಯಗಳನ್ನು ಗುರುತಿಸಿಕೊಂಡು ವಿಕೋಪ ತಡೆಗಟ್ಟುವಿಕೆ, ಸ್ಪಂದನೆ ಹಾಗೂ ಪುನರ್ವಸತಿ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ