ಪ್ರತಾಪಸಿಂಹ ವಚನಭ್ರಷ್ಟ ಸಂಸದ : ಡಾ| ಪ್ರಸಾದ್‌ 


Team Udayavani, Jul 10, 2017, 3:15 AM IST

Z-CPIM.jpg

ಮಡಿಕೇರಿ: ಕೇಂದ್ರ ಸರಕಾರ ತಲಕಾವೇರಿ ಮತ್ತು ಬ್ರಹ್ಮಗಿರಿ ವನ್ಯಧಾಮವನ್ನು ಸೂಕ್ಷ್ಮ ಪರಿಸರ ವಲಯವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ತಪ್ಪನ್ನು ಮರೆ ಮಾಚುವ ಉದ್ದೇಶದಿಂದ ಸಂಸದ ಪ್ರತಾಪ ಸಿಂಹ ಅವರು ಸುಳ್ಳಿನ ಸರಮಾಲೆಯನ್ನೇ ಪೆ‌ೂàಣಿಸುತ್ತಿದ್ದಾರೆ ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಾ| ಇ.ರ. ದುರ್ಗಾಪ್ರಸಾದ್‌ ಆರೋಪಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪಸಿಂಹ ಅವರು ರಾಜ್ಯ ಸರ್ಕಾರವನ್ನು ಟೀಕಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮೊದಲು ತಾನು ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸಲಿ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ರಾಜ್ಯ ಸರಕಾರವನ್ನು ದೂಷಿಸು ತ್ತಿರುವ ಸಂಸದರು ಮೊದಲು ತಾವು ಮಾಡಿರುವ ಕಾರ್ಯದ ಬಗ್ಗೆ ಬಹಿರಂಗ ಪಡಿಸಲಿ ಎಂದು ಒತ್ತಾಯಿಸಿದರು.

ಪ್ರಸಕ್ತ ಸಾಲಿನ ಫೆಬ್ರವರಿಯಲ್ಲಿ ಕೇಂದ್ರ ಸರಕಾರ ಡಾ| ಕಸ್ತೂರಿ ರಂಗನ್‌ ವರದಿಯ ಜಾರಿಯ ಕುರಿತಾದ ಕರಡು ಅಧಿಸೂಚನೆಯನ್ನು ಹೊರಡಿಸಿತು. ಅಲ್ಲದೆ ಕಳೆದ ಮೇ 15ರಂದು ತಲಕಾವೇರಿ ವನ್ಯಧಾಮವನ್ನು ಮತ್ತು ಮೇ 26ರಂದು ಬ್ರಹ್ಮಗಿರಿ ವನ್ಯಧಾಮವನ್ನು ಸೂಕ್ಷ್ಮ ಪರಿಸರ ವಲಯವೆಂದು ಘೋಷಿಸಿದೆ. ಅಧಿಸೂಚನೆ ಹೊರಬಿದ್ದು 3 ತಿಂಗಳ ಬಳಿಕ ಸಂಸದ ಪ್ರತಾಪ ಸಿಂಹ ಅವರು ಈ ಎಲ್ಲ ಬೆಳವಣಿಗೆಗಳಿಗೆ ರಾಜ್ಯ ಸರಕಾರದ ವೈಫ‌ಲ್ಯ ಕಾರಣವೆಂದು ಹೇಳಿದ್ದಾರೆ. ಇದು ಹೇಗೆನ್ನುವ ಬಗ್ಗೆ ಸಂಸದರೆ ಸ್ಪಷ್ಟ ಕಾರಣವನ್ನು ನೀಡಬೇಕು. ಕೇಂದ್ರ ಸರಕಾರಕ್ಕೆ ಸಲ್ಲಿಸಿದ ವರದಿಯನ್ನು ರಾಜ್ಯ ಸರಕಾರ ಬಹಿರಂಗಪಡಿಸಿದಲ್ಲಿ ಅದರ ಬಣ್ಣ ಬಯಲಾಗುತ್ತದೆ ಎಂದು ಸಂಸದರು ಹೇಳಿದ್ದಾರೆ. ಆದರೆ, ವರದಿ ಬಹಿರಂಗವಾದರೆ ಇವರ ನಿಜ ಸ್ವರೂಪವೇ ಬಯಲಾಗಲಿದೆ ಎಂದು ವ್ಯಂಗ್ಯವಾಡಿದ ದುರ್ಗಾಪ್ರಸಾದ್‌, ರಾಜ್ಯ ಸರಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯ ಬಗ್ಗೆ ಸಂಸದರಿಗೆ ತಿಳಿದಿದೆ ಎಂದರು.

ಜಿಲ್ಲೆಯ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್‌ ಅವರನ್ನು ಡಾ| ಕಸ್ತೂರಿ ರಂಗನ್‌ ವರದಿಗೆ ಸಂಬಂಧಿಸಿದಂತೆ ಮಾಹಿತಿ ಯನ್ನು ಕೇಳಿದ್ದರೆ ಸಂಸದರಿಗೆ ಎಲ್ಲ ವಿಚಾರಗಳು ತಿಳಿಯುತ್ತಿತ್ತು. ಜಿಲ್ಲೆಯಲ್ಲಿ ಕಸ್ತೂರಿ ರಂಗನ್‌ ವರದಿಯ ವಿರುದ್ಧದ ಹೋರಾಟ ಸಮಿತಿ  ಶಾಸಕ ಅಪ್ಪಚ್ಚುರಂಜನ್‌ ಅವರ ನೇತೃತ್ವದಲ್ಲೇ ರಚನೆ ಯಾಗಿ ಹೋರಾಟಗಳನ್ನು ನಡೆಸಲಾಗಿತ್ತು. ಅಲ್ಲದೆ, ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವರದಿಯ ಲೋಪಗಳನ್ನು ಸರಿಪಡಿಸಿದ ಆಕ್ಷೇಪಣಾ ಪತ್ರವನ್ನು ಶಾಸಕ ಕೆ.ಜಿ. ಬೋಪಯ್ಯ ಉಸ್ತುವಾರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್‌ ಅಧ್ಯಕ್ಷತೆಯಲ್ಲೆ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತೇ ಎಂದು ದುರ್ಗಾಪ್ರಸಾದ್‌ ಮಾಹಿತಿ ನೀಡಿದರು.

ಶಾಸಕರ ಉಸ್ತುವಾರಿಯಲ್ಲಿನ ಆಕ್ಷೇಪ ಣೆಯ ಆರಂಭದಲ್ಲೆ ರಾಜ್ಯ ಸರಕಾರ ಕಸ್ತೂರಿ ರಂಗನ್‌ ವರದಿಗೆ ಸಂಬಂಧಿಸಿದಂತೆ 2014 ಎ. 24, ಮೇ 5 ಮತ್ತು 2015ರ ಸೆಪ್ಟಂಬರ್‌ 1ರಂದು ಮೂರು ವರದಿಗಳನ್ನು ಕೇಂದ›ಕ್ಕೆ ಸಲ್ಲಿಸಿತ್ತು. ಸ್ಥಳೀಯ ಶಾಸಕರು ಸರಕಾರದ ವರದಿಯ ಬಗ್ಗೆ ಸಮ್ಮತಿ ವ್ಯಕ್ತಪಡಿಸಿರುವ ಹಂತದಲ್ಲಿ ಸಂಸದ ಪ್ರತಾಪಸಿಂಹ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರಕಾರ ಕಳುಹಿಸಿದ ವರದಿ ಸಮರ್ಪಕವಾಗಿಲ್ಲ, ಅದನ್ನು ಬಹಿರಂಗ ಪಡಿಸಿ ಎನ್ನುವ ಮೂಲಕ ತಮ್ಮ ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ದುರ್ಗಾಪ್ರಸಾದ್‌ ಟೀಕಿಸಿದರು.

ಚುನಾವಣಾ ಪೂರ್ವದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ‌ಲ್ಲಿ ಡಾ| ಕಸ್ತೂರಿ ರಂಗನ್‌ ವರದಿ ಜಾರಿಗೆ ಅವಕಾಶ ನೀಡುವುದಿಲ್ಲವೆಂದು ಭರವಸೆ ನೀಡಿತ್ತು. 

ಆದರೆ ಇದೀಗ ಸಂಸದರು ವಚನಭ್ರಷ್ಟತೆ ಯನ್ನು ಮೆರೆದಿದ್ದಾರೆ ಎಂದು ಟೀಕಿಸಿದ ಅವರು ಇನ್ನಾದರು ರಾಜ್ಯ ಬಿಜೆಪಿ ಮುಖಂಡ ಯಡಿ ಯೂರಪ್ಪ ಅವರೊಂದಿಗೆ ಸಂಸದ ಪ್ರತಾಪ ಸಿಂಹ ಹಾಗೂ ಪಶ್ಚಿಮ ಘಟ್ಟ ವ್ಯಾಪ್ತಿಯ ಬಿಜೆಪಿ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ಹೇರಿ ಯೋಜನೆ ಜಾರಿಯಾಗದಂತೆ ನೋಡಿ ಕೊಳ್ಳಬೇಕೆಂದು ಆಗ್ರಹಿಸಿದರು. ಜಿಲ್ಲೆಯ ಜನರು ಮುಗ್ಧರಿರಬಹುದು, ಆದರೆ, ಸಂಸದರು ಹೇಳಿದ್ದನ್ನೆಲ್ಲ ಹೌದೆಂದು ಒಪ್ಪಲು ಮುಠಾuಳರೇನು ಅಲ್ಲವೆಂದು ಖಾರವಾಗಿ ನುಡಿದರು.

ಸುದ್ದಿಗೋಷ್ಠಿಯಲ್ಲಿ ಸಿಪಿಐಎಂ ಪಕ್ಷ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎ.ಸಿ. ಸಾಬು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.