ಮಳೆಗಾಲಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ: ಸಚಿವ ಬಿ.ಸಿ.ನಾಗೇಶ್
Team Udayavani, Jun 28, 2022, 2:08 AM IST
ಮಡಿಕೇರಿ: ಇತ್ತೀಚೆಗೆ ಹಾಸನ ಹಾಗೂ ಕೊಡಗು ಜಿಲ್ಲೆಯ ನೈಋತ್ಯ ಗಡಿಭಾಗದಲ್ಲಿ ಭೂಮಿ ಕಂಪಿಸಿರುವ ವರದಿ ಯಾಗಿದ್ದು, ಯಾರೂ ಆತಂಕಪಡುವ ಅಗತ್ಯ ಇಲ್ಲ. ಮಳೆಗಾಲವನ್ನು ಎದುರಿಸಲು ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳ ಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಗಾರು ಸಂದರ್ಭ ಕೈಗೊಂಡಿರುವ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಭೂ ಕಂಪನದಿಂದ ಎಲ್ಲೂ ಭೂಮಿ ಬಿರುಕು ಬಿಟ್ಟಿರುವ ವರದಿಯಾಗಿಲ್ಲ. ಮುಂಗಾರು ಸಂದರ್ಭ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.