ಮಾ.10ರಂದು ಪಲ್ಸ್‌ ಪೋಲಿಯೋ : ಅಗತ್ಯ ಸಹಕಾರಕ್ಕೆ ಎಡಿಸಿ ಮನವಿ


Team Udayavani, Mar 7, 2019, 1:00 AM IST

polio.jpg

ಮಡಿಕೇರಿ: ಇದೇ ಮಾ.10 ರಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌ ಅವರು ಕೋರಿದ್ದಾರೆ.               

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್‌ ಪೋಲಿಯೊ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್‌ ಪೋಲಿಯೊವನ್ನು ಕಡ್ಡಾಯವಾಗಿ ಹಾಕಬೇಕು. ಕೊಡಗು ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು, ಜೊತೆಗೆ ಕಳೆದ ಬಾರಿ ಪಲ್ಸ್‌ ಪೋಲಿಯೊದಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ ಪಲ್ಸ್‌ ಪೋಲಿಯೋ ಹನಿ ಹಾಕಬೇಕು. ಹಾಗೆಯೇ ಜಿಲ್ಲೆಯ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ತಂಡ ರಚಿಸಿ ಪಲ್ಸ್‌ ಪೋಲಿಯೊ ಹನಿ ಹಾಕುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.    

ಪೋಲಿಯೊ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್‌ ಪೂರೈಕೆ ಮಾಡಬೇಕು. ಪಲ್ಸ್‌ ಪೋಲಿಯೊ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪಾತ್ರ ಮಹತ್ತರವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.         

ಜಿಲ್ಲೆಯ ವಿವಿಧ ಹಾಡಿಗಳು, ವಲ್ನರಬಲ್‌ ಪ್ರದೇಶ, ಲೈನ್‌ಮನೆಗಳು ಹಾಗೂ ಜನದಟ್ಟಣೆ ಪ್ರದೇಶಗಳಿಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.    

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್‌ ಅವರು ಪಲ್ಸ್‌ ಪೋಲಿಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 5,66,397 ಜನಸಂಖ್ಯೆ ಇದ್ದು, ಇವರಲ್ಲಿ 57,424 ನಗರ/ಪಟ್ಟಣ ಪ್ರದೇಶದಲ್ಲಿ ಮತ್ತು 5,09,013 ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಇದ್ದಾರೆ. ಇವರಲ್ಲಿ 5 ವರ್ಷದೊಳಗಿನ 39,015 ಮಕ್ಕಳು ಜಿಲ್ಲೆಯಲ್ಲಿದ್ದು, ಇವರಲ್ಲಿ 4,602 ನಗರ ಮತ್ತು 34,413 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 1,59,443 ವಲಸಿಗ ಜನಸಂಖ್ಯೆ ಇದ್ದು, ಇವರಲ್ಲಿ 12,859 ಐದು ವರ್ಷದೊಳಗಿನ ಮಕ್ಕಳು ಇದ್ದಾರೆ, ಒಟ್ಟಾರೆ ಜಿಲ್ಲೆಯಲ್ಲಿ 1,33,356 ಕುಟುಂಬಗಳಿವೆ ಎಂದು ಅವರು ಮಾಹಿತಿ ನೀಡಿದರು.  

ಪಲ್ಸ್‌ ಪೊಲಿಯೊ ಕಾರ್ಯಕ್ರಮಕ್ಕೆ ಪಲ್ಸ್‌ ಪೋಲಿಯೋವನ್ನು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಹಾಕಿಸಬೇಕಿದೆ. ಪೊಲಿಯೋ ರೋಗವು ರಾಷ್ಟ್ರದಲ್ಲಿ ನಿರ್ಮೂಲನೆಯಾಗಿದ್ದರೂ ಸಹ ಪಕ್ಕದ ದೇಶಗಳಲ್ಲಿ ಇನ್ನೂ ಇರುವುದರಿಂದ, ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ ಸುಧೀರ್‌ ನಾಯಕ್‌ ಎಂದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್‌, ತಾಲ್ಲೂಕು ವೈದ್ಯಾಧಿಕಾರಿಗಳಾದ ಯತಿರಾಜು, ಶ್ರೀನಿವಾಸ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಜರಿದ್ದರು. 

ಒಟ್ಟು 465 ಬೂತ್‌ಜಿಲ್ಲೆಯಾದ್ಯಂತ ಒಟ್ಟು 465 ಬೂತ್‌ಗಳನ್ನು ತೆರೆಯಲಾಗಿದೆ. ಅಲ್ಲದೆ 20 ಟ್ರಾನ್ಸಿಸ್ಟ್‌ ತಂಡಗಳು, 6 ಸಂಚಾರಿ ಲಸಿಕಾ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 1,950 ಮಂದಿ ಲಸಿಕೆ ಹಾಕುವವರು, 87 ಮಂದಿ ಮೇಲ್ವಿಚಾರಕರು, 966 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಡಾ.ಆನಂದ್‌ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.