ಮಳೆಹಾನಿ ಸಂತ್ರಸ್ತರಿಗೆ ಶೀಘ್ರ ನಿವೇಶನ ಹಂಚಿಕೆ

ಜಿಲ್ಲಾಧಿಕಾರಿಯಿಂದ ಸ್ಥಳ ಪರಿಶೀಲನೆ

Team Udayavani, Feb 21, 2020, 10:46 PM IST

kala-31

ಮಡಿಕೇರಿ: ಜಿಲ್ಲೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ಪ್ರವಾಹದಿಂದ ಬಾಧಿತವಾಗುವ ಮತ್ತು ಸುರಕ್ಷಿತವಲ್ಲದ ಜಾಗಗಳಲ್ಲಿರುವ ಮನೆಗಳನ್ನು ಶಾಶ್ವತವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತವು ಕ್ರಮ ಕೈಗೊಂಡಿದ್ದು, ಜಿಲ್ಲೆಯ ವಿವಿದೆಡೆಗಳಲ್ಲಿ ಜಾಗ ಗುರುತಿಸಿ ನಿವೇಶನ ಹಂಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ.

2019-20ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ನದಿ ತಟದಲ್ಲಿ ಅನಧಿಕೃತವಾಗಿ ಕಟ್ಟಿಕೊಂಡಿದ್ದ ಮನೆಗಳು ಹಾನಿಯಾದ ಒಟ್ಟು 237 ಫ‌ಲಾನುಭವಿಗಳಿಗೆ ಜಿಲ್ಲೆಯ 5 ಸ್ಥಳಗಳಲ್ಲಿ ಜಾಗವನ್ನು ಗುರುತಿಸಿನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯವರಿಂದ ವ್ಯವಸ್ಥಿತವಾಗಿ ಅಳತೆಯ ನಿವೇಶನಗಳಿಗೆ ಬಡಾವಣೆ ವಿನ್ಯಾಸ ನಕ್ಷೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಈ ಪೈಕಿ ಅಭ್ಯತ್‌ಮಂಗಲದಲ್ಲಿ 60 ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಉಳಿದ 177 ನಿವೇಶನಗಳನ್ನು ಫೆ.26ರಂದುಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯವರಿಂದ ರೂಪಿಸಲಾದ ನಿವೇಶನ ನಕ್ಷೆಯಂತೆ ಸಂತ್ರಸ್ತರ ಸಮ್ಮುಖದಲ್ಲಿಯೇ ನಿವೇಶನಗಳನ್ನು ಹಂಚಲು ಕ್ರಮ ವಹಿಸಲಾಗುವುದು ಎಂದು ಅವರು ಸ್ಪಷ್ಪಡಿಸಿದ್ದಾರೆ.–

10 ತಿಂಗಳ ಬಾಡಿಗೆ ಪಾವತಿ
ಅದೇ ರೀತಿ ಎ ಮತ್ತು ಬಿ ವೃಂದದ ಪಟ್ಟಿಯಲ್ಲಿರುವ ಮನೆಗಳಿಗೆ ಬಾಡಿಗೆ ಹಣವನ್ನು ಪಾವತಿಸುವ ಸಲುವಾಗಿ ಫೆ.10ರಂದುಬೆಂಗಳೂರಿನಲ್ಲಿಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲೆಗೆವಿಶೇಷ ಆದ್ಯತೆ ನೀಡಿ ತಿಂಗಳಿಗೆ ತಲಾ 5 ಸಾವಿರದಂತೆಗರಿಷ್ಠ 10 ತಿಂಗಳಿಗೆ 50 ಸಾವಿರ ರೂ. ಬಾಡಿಗೆ ಹಣ ಪಾವತಿಸಲು ತೀರ್ಮಾನಿಸಿದೆ. ಅದರಂತೆ 2019-20 ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಒಟ್ಟು 228 ಎ ಮತ್ತು ಬಿ ಕ್ಯಾಟಗರಿ ಮನೆಗಳ ಫ‌ಲಾನುಭವಿಗಳಿಗೆ ಮೊದಲನೇ ಹಂತದಲ್ಲಿ5 ತಿಂಗಳ ಬಾಡಿಗೆ ಹಣ ತಲಾ ರೂ.25ಸಾವಿರದಂತೆ ಒಟ್ಟು ರೂ.57ಲಕ್ಷ ರೂ.ಗಳನ್ನುಅವರವರ ಬ್ಯಾಂಕ್‌ ಖಾತೆಗಳಿಗೆರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ನೇರವಾಗಿ ಪಾವತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

15 ಎಕರೆ ಜಾಗ ಗುರುತು
ಅದರಂತೆ ಸೋಮವಾರಪೇಟೆ ತಾಲೂಕಿನ ಅಭ್ಯತ್‌ಮಂಗಲ ಗ್ರಾಮದ ಸ.ನಂ.87/2ರಲ್ಲಿ 8.22 ಎಕರೆ ಜಾಗವನ್ನು ಗುರುತಿಸಲಾಗಿದ್ದು, 128 ನಿವೇಶನಗಳನ್ನು ನೀಡಲಾಗುತ್ತದೆ. ನೆಲ್ಲಿಹುದಿಕೇರಿ, ವಾಲೂ°ರು, ನಂಜರಾಯಪಟ್ಟಣ ಬಸವನಹಳ್ಳಿಯ 117 ಫ‌ಲಾನುಭವಿಗಳಿಗೆ ಅಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವೀರಾಜಪೇಟೆಯ ಬಿ.ಶೆಎಟ್ಟಿಗೇರಿಯ ಸ.ನಂ.37/26ಪಿ1ರಲ್ಲಿ 6ಎಕರೆ ಜಾಗ ಗುರುತಿಸಲಾಗಿದ್ದು, ಇಲ್ಲಿ 125 ನಿವೇಶನಗಳನ್ನು ಒದಗಿಸಲು ಅವಕಾಶವಿದೆ. ಸಿದ್ದಾಪುರ, ಕರಡಿಗೋಡು, ಗುಯ್ಯ ಗ್ರಾಮದ 103 ಫ‌ಲಾನುಭವಿಗಳಿಗೆ ಅಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತದೆ.

ವೀರಾಜಪೇಟೆ ತಾಲೂಕಿನ ಅರುವತ್ತೂಕ್ಲು ಗ್ರಾಮದಲ್ಲಿ 50 ಸೆಂಟ್‌ ಜಾಗ ಗುರುತಿಸಲಾಗಿದ್ದು,ತಿತಿಮತಿ, ಚೆನ್ನಂಗೊಲ್ಲಿ,ಕಾನೂರು, ಮತ್ತೂರು ಗ್ರಾಮ 9 ಫ‌ಲಾನುಭವಿ ಕುಟುಂಬಗಳಿಗೆ ಹಾಗೂಕೆದಮಳ್ಳೂರು ಗ್ರಾಮದ 8 ಸೆಂಟ್‌ ಜಾಗದಲ್ಲಿ ತೋರ ಗ್ರಾಮದ 3 ಮತ್ತು ಬಾಳುಗೋಡು ಗ್ರಾಮದಲ್ಲಿ 2.4/3ಸೆಂಟ್‌ ಜಾಗದಲ್ಲಿ ನಾಂಗಾಲ ಗ್ರಾಮದ ಒಂದು ಕುಟುಂಬಕ್ಕೆ ಪುನರ್ವಸತಿ ಕಲ್ಪಿಸಲಾಗುತ್ತದೆ ಎಂದು ಅನೀಸ್‌ ಕಣ್ಮಣಿ ಜಾಯ್‌ ಹೇಳಿದ್ದಾರೆ.

ಬಿ.ಶೆಟ್ಟಿಗೇರಿಗೆ ಭೇಟಿ
ಅದೇ ರೀತಿ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಗುರುತಿಸಲಾಗಿರುವ ಸ್ಥಳಕ್ಕೆಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಮತ್ತು ಇತರೆ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲಿಸಿದ್ದು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯವರಿಗೆ ಬಡಾವಣೆ ವಿನ್ಯಾಸ ನಕ್ಷೆಯನ್ನು ತುರ್ತಾಗಿ ತಯಾರಿಸಲು ನಿರ್ದೇಶನ ನೀಡಲಾಗಿದೆ. ಉಳಿದಂತೆ ಅರ್ವತ್ತೂಕ್ಲು, ಕೆದಮುಳ್ಳೂರು ಮತ್ತು ಬಾಳುಗೋಡು ಗ್ರಾಮದ ಸರ್ಕಾರಿ ಜಾಗಗಳನ್ನು ಪುನರ್ವಸತಿ ಉದ್ದೇಶಕ್ಕೆ ಕಾಯ್ದಿರಿಸಲು ಕ್ರಮ ವಹಿಸಲಾಗಿದ್ದು, ಶೀಘ್ರದಲ್ಲಿ ಕಾಯ್ದಿರಿಸಿ ಅರ್ಹ ಫ‌ಲಾನುಭವಿಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.