Udayavni Special

ಮುಂಗಾರು ವಿಪತ್ತು ಎದುರಿಸಲು ಸಜ್ಜಾಗಿ: ಜಿಲ್ಲಾಧಿಕಾರಿ


Team Udayavani, Feb 28, 2020, 5:57 AM IST

Z-RAIN-MEETING-2

ಮಡಿಕೇರಿ: ಮುಂದಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತನ್ನು ಎದುರಿಸಲು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದ್ದು, ಆ ನಿಟ್ಟಿನಲ್ಲಿ ಅಗ್ನಿಶಾಮಕ, ಗೃಹ ರಕ್ಷಕ ದಳ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳು ತಮಗೆ ಬೇಕಿರುವ ಸಲಕರಣೆ ಸಂಬಂಧಿಸಿದಂತೆ ಮಾಹಿತಿಯ ಪಟ್ಟಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸೂಚಿಸಿದ್ದಾರೆ.

ಮುಂಗಾರು ಅವಧಿಯಲ್ಲಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ವರ್ಷದ ಪ್ರಕೃತಿ ವಿಕೋಪದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಸಂಬಂಧ ಪಂಚಾಯತ್‌ ರಾಜ್‌, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯುವಂತೆ ಜಿಲ್ಲಾಧಿಕಾರಿ ನಿರ್ದೇಶ ನೀಡಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್‌ ಅವರು ಹೆಚ್ಚುವರಿಯಾಗಿ ನಾಲ್ಕು ಬೋಟ್‌ಗಳ ಅಗತ್ಯವಿದ್ದು, ಈ ಸಂಬಂಧ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ ,ಭೂ ದಾಖಲೆಗಳ ಉಪ ನಿರ್ದೇಶಕÃ ಶ್ರೀನಿವಾಸ್‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ‌ ಪಿ.ಎಸ್‌.ಮಚ್ಚಾಡೋ, ಪೌರಾಯುಕ್ತ‌ ರಮೇಶ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಲಿ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಗೀತಾ, ಸಹಕಾರ ಇಲಾಖೆ ಸಹಾಯಕ ನಿಬಂಧಕ ರವಿಕುಮಾರ್‌, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್‌, ತಾ.ಪಂ.ಇಒಗಳಾದ ಸುನಿಲ್‌ ಕುಮಾರ್‌, ಷಣ್ಮುಗಂ, ಬಿಸಿಎಂ ಇಲಾಖೆಯ ಅಧಿಕಾರಿ ಲಿಂಗರಾಜು, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಅಧಿಕಾರಿ ಪುಟ್ಟರಾಜು, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಕುಸುಮಾ, ಐಟಿಡಿಪಿ ಇಲಾಖಾ ವ್ಯವಸ್ಥಾಪಕ‌ ದೇವ ರಾಜು, ವಿಪತ್ತು ನಿರ್ವಹಣಾ ವಿಭಾಗದ ಅನನ್ಯಾ ವಾಸುದೇವು, ಅನಿಲ್‌ ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ತರಬೇತಿ
ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯ ಚಟುವಟಿಕೆಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ತಾಲ್ಲೂಕು ಮಟ್ಟದಲ್ಲಿ ಗ್ರಾ.ಪಂ.ಪಿಡಿಒ ಸೇರಿದಂತೆ ತಾಲೂಕಿನ ಎಲ್ಲಾ ಹಂತದ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಈ ಬಾರಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಮುಂಚಿತವಾಗಿ ಜಿ.ಪಂ.ಸಿಇಒ, ತಹಶೀಲ್ದಾರರು ಹಾಗೂ ಗ್ರಾ.ಪಂ.ಗಳಿಗೆ ಎನ್‌ಡಿಆರ್‌ಎಫ್ ಅಡಿ ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಜಿಲ್ಲೆಯ ಶಾಲೆಗಳು ಮತ್ತು ಅಂಗನವಾಡಿಗಳು, ವಿದ್ಯಾರ್ಥಿ ನಿಲಯಗಳ ಸುಸ್ಥಿತಿ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

whatsapp-message

ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯ 12 ಮಂದಿಯಲ್ಲಿ ಸೋಂಕು

ಕಾಸರಗೋಡು ಜಿಲ್ಲೆಯ 12 ಮಂದಿಯಲ್ಲಿ ಸೋಂಕು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

08-April-6

ದಿನಬಳಕೆ ವಸ್ತುಗಳ ದರ ಹೆಚ್ಚಳಕ್ಕೆ ಹೈರಾಣಾದ ಸಾರ್ವಜನಿಕರು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

08-April-5

ಅಭಿವೃದ್ಧಿಗೆ ಕೊರೊನಾ ಲಾಕ್‌ಡೌನ್‌ ಅಡ್ಡಿ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಲಾಕ್‌ಡೌನ್‌: ಖನ್ನತೆಯಲ್ಲಿ ಟೆಕ್ಕಿಗಳೇ ಹೆಚ್ಚು!

ಲಾಕ್‌ಡೌನ್‌: ಖನ್ನತೆಯಲ್ಲಿ ಟೆಕ್ಕಿಗಳೇ ಹೆಚ್ಚು!