ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ

ಜಿಲ್ಲೆಯಲ್ಲಿ ನಿಫಾ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮ

Team Udayavani, Jun 8, 2019, 6:00 AM IST

ಮಡಿಕೇರಿ: ನಿಫಾ ವೈರಸ್‌ ಹರಡದಂತೆ ಕೊಡಗು ಜಿಲ್ಲೆಯಲ್ಲೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್‌ ತಿಳಿಸಿದ್ದಾರೆ.

ಯಾವುದೇ ಜ್ವರ ಕಂಡು ಬಂದರೂ ನಿರ್ಲಕ್ಷ್ಯ ತೋರದೆ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಮೋಹನ್‌, ಪಕ್ಕದ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ ಕಂಡು ಬಂದ ಹಿನ್ನೆಲೆ ಗಡಿ ಜಿಲ್ಲೆ ಕೊಡಗಿನಲ್ಲೂ ಎಚ್ಚರ ವಹಿಸಲಾಗಿದೆ ಎಂದರು. ಸಾರ್ವಜನಿಕರಿಗೆ ವೈರಸ್‌ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ರೋಗಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆನ್ನು ಮಾಡಲಾಗಿದೆ.

ಆಶಾ ಕಾರ್ಯಕರ್ತರ ಮೂಲಕ ಪ್ರತಿ ಮನೆ ಮನೆಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಪ್ರತಿದಿನ ವೈದ್ಯಕೀಯ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿದ್ದು, ಈ ಪ್ರಕ್ರಿಯೆ ಆರಂಭವಾಗಿದೆ ಎಂದು ಡಾ.ಕೆ.ಮೋಹನ್‌ ತಿಳಿಸಿದರು.

ನಿಫಾ ಸೋಂಕಿಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ, ರೋಗ ಲಕ್ಷಣಗಳಿಗೆ ಅನುಗುಣವಾದ ಚಿಕಿತ್ಸೆ ಹಾಗೂ ಸೂಕ್ತ ನಿರ್ವಹಣೆಯಿಂದ ಸೋಂಕನ್ನು ಗುಣಪಡಿಸಬಹುದಾಗಿದೆ. ಆದ್ದರಿಂದ ಜ್ವರ, ತಲೆ ನೋವು, ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದಲ್ಲಿ ನೇರವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಡಾ.ಮೋಹನ್‌ ಸಲಹೆ ನೀಡಿದರು.

ಡಾ.ಕೆ.ಮೋಹನ್‌ ಸುದ್ದಿಗೋಷ್ಠಿಯ ಬಳಿಕ ಅಲ್ಲಿಗೆ ತೆರಳಿ ಪರಿಶೀಲಿಸಿದರು. ಈ ಸಂದರ್ಭ ಆಸ್ಪತ್ರೆಯ ಡೀನ್‌ ಕಾವೇರಪ್ಪ, ಸರ್ವೇಕ್ಷಣಾಧಿಕಾರಿ ಶಿವಕುಮಾರ್‌, ಡಾ.ಶ್ಯಾಮಲ ಹಾಗೂ ಮತ್ತಿತರ ಆರೋಗ್ಯ ಅಧಿಕಾರಿಗಳು ಹಾಜರಿದ್ದರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ