ಪ್ರತ್ಯೇಕ ತಾಲೂಕು ಹೋರಾಟ: ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಬೆಂಬಲ


Team Udayavani, Dec 28, 2017, 3:04 PM IST

28-33.jpg

ಮಡಿಕೇರಿ: ಪ್ರತ್ಯೇಕ ಕಾವೇರಿ ತಾಲ್ಲೂಕು ಹಾಗೂ ಪೊನ್ನಂಪೇಟೆ ತಾಲ್ಲೂಕು ರಚನೆಯ ಹೋರಾಟಕ್ಕೆ ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಬೆಂಬಲ ಸೂಚಿಸಿದೆ. ಜಿಲ್ಲೆಗೆ ಐದು ತಾಲ್ಲೂಕುಗಳ ಅಗತ್ಯವಿದೆ ಎಂದು ಸಂಘದ ಜಿಲ್ಲಾಧ್ಯಕ್ಷರಾದ ಎಸ್‌.ಎಂ.ಚಂಗಪ್ಪ ತಿಳಿಸಿದ್ದಾರೆ.

 ಸಂಘದ ಕಾರ್ಯಕಾರಿ ಸಮಿತಿ ಸಭೆ ವಿರಾಜಪೇಟೆಯ ಹಾತೂರಿನ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಭೌಗೋಳಿಕವಾಗಿ ಮೂರು ತಾಲ್ಲೂಕು, ಮೂವರು ಶಾಸಕರುಗಳು ಹಾಗೂ ಸಂಸದರನ್ನು ಹೊಂದಿದ್ದ ಕೊಡಗು ಜಿಲ್ಲೆ ಈಗ ಇಬ್ಬರು ಶಾಸಕರನ್ನು ಹೊಂದುವಂತಾಗಿದೆ. ಸಂಸತ್‌ ಸ್ಥಾನ ಕೂಡ ಹಂಚಿ ಹೋಗಿದೆ. ಇವೆಲ್ಲವನ್ನು ಅವಲೋಕಿಸಿದಾಗ ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಪ್ರಸ್ತುತ ಇರುವ ಮೂರು ತಾಲೂಕನ್ನು 5 ತಾಲ್ಲೂಕಿಗೆ ವಿಸ್ತರಿಸುವ ಅಗತ್ಯವಿದೆ ಎಂದರು. ಪ್ರತ್ಯೇಕ ಕಾವೇರಿ ತಾಲೂಕು ಮತ್ತು ಪೊನ್ನಂಪೇಟೆ ತಾಲೂಕು ರಚನೆಯ ಹೋರಾಟದಲ್ಲಿ ಒಕ್ಕಲಿಗರ ಸಂಘ ಪಾಲ್ಗೊಳ್ಳಲಿದೆ ಎಂದು ಚಂಗಪ್ಪ ತಿಳಿಸಿದರು.

ಜಿಲ್ಲೆಯಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಒಕ್ಕಲಿಗ ಜನಾಂಗದ ಕುಟುಂಬಗಳಿದ್ದು, ಸರ್ವರನ್ನು ಸಂಘದ ಸದಸ್ಯರನ್ನಾಗಿ ಮಾಡಲು ಸ್ವಯಂಪ್ರೇರೀತರಾಗಿ ಪ್ರಯತ್ನಿಸುವಂತೆ ಸಲಹೆ ನೀಡಿದರು. ಮಡಿಕೇರಿ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಸಂಘಕ್ಕೆ ಸುಮಾರು ಮೂರು ಎಕರೆ ಪೈಸಾರಿ ಜಾಗವನ್ನು ಗುರುತಿಸಿ ಅದನ್ನು ಸರಕಾರದ ಮಟ್ಟದಲ್ಲಿ ಮಂಜೂರು ಮಾಡಿಸಿಕೊಳ್ಳಲು ಪ್ರಯತ್ನಿಸ ಲಾಗುವುದು. ಅದು ಸಾಧ್ಯವಾಗದಿದ್ದಲ್ಲಿ ಜಿಲ್ಲೆಯ ಮೂರು ತಾಲ್ಲೂಕಿನ ಒಕ್ಕಲಿಗ‌ ಕುಲಬಾಂಧವರಲ್ಲಿ ಆರ್ಥಿಕ ಸಹಕಾರ ಪಡೆದು ಪರ್ಯಾಯ ವ್ಯವಸ್ಥೆ ಮಾಡುವುದು ಸೂಕ್ತವೆಂದು ಚಂಗಪ್ಪ ಅಭಿಪ್ರಾಯಪಟ್ಟರು.

 ಕೊಡಗು ಜಿಲ್ಲೆಯಿಂದ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಪ್ರತಿನಿಧಿಸುತ್ತಿರುವವರು ಜಿಲ್ಲೆಯ ಹೊರಗಿನ ಒಕ್ಕಲಿಗರಾಗಿರುತ್ತಾರೆ. ಮುಂದಿನ ಬಾರಿ ಕೊಡಗಿನ ಒಕ್ಕಲಿಗ ಬಾಂಧವರಿಗೆ ಆದ್ಯತೆ ನೀಡುವ ಹಾಗೆ ಆಗಬೇಕು ಎಂದು ಸಭೆ ಒಮ್ಮತದ ಅಭಿಪ್ರಾಯ ತೆಗೆದುಕೊಂಡಿತು. ಕೊಡಗು ಜಿಲ್ಲೆಯಲ್ಲಿ ಒಕ್ಕಲಿಗ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಇದಕ್ಕೆ ಕಾರಣವಾಗಿದೆ ಎಂದು ಸಭೆ ಅಭಿಪ್ರಾಯಪಟ್ಟಿತು.

ಸಂಘದ ಬೆಳವಣಿಗೆ ಕುರಿತು ಹಿರಿಯ ಕುಲಬಾಂಧವರಾದ ಡಿ.ಎಸ್‌. ಸುಬ್ರಮಣಿ, ವಿ.ಎಲ್‌. ಸುರೇಶ್‌, ಹಾತೂರಿನ ರಾಮಚಂದ್ರ, ದೊಡ್ಡ ಮಲೆ¤ಯ ಶ್ರೀಕೃಷ್ಣ, ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎ.ಆರ್‌.ಮುತ್ತಣ್ಣ, ಜಿಲ್ಲಾ ಉಪಾಧ್ಯಕ್ಷರಾದ ಬಿ.ಇ. ಶಿವಯ್ಯ, ವಿ.ಪಿ. ಸುರೇಶ್‌, ಎನ್‌.ಕೆ. ಅಪ್ಪಸ್ವಾಮಿ, ಕೊಡ್ಲಿಪೇಟೆಯ ಜಯರಾಂ ಮೊದಲಾದವರು ದಾನಿಗಳಾದ ಡಿ.ಎ. ಸುಬ್ರಮಣಿ ಸಲಹೆ ನೀಡಿದರು.

ಸಂಘದ ಗೌರವ ಕಾರ್ಯದರ್ಶಿ ಪಿ. ಉಮೇಶ್‌ ಕುಮಾರ್‌ ಕಳೆದ ಮಹಾಸಭೆಯ ವರದಿಯನ್ನು ಕಾರ್ಯಕಾರಿ  ಸಮಿತಿಯ ಮುಂದಿಟ್ಟರು. ವರದಿಗೆ ಸಭೆ ಅಂಗೀಕಾರ ನೀಡಿತು. ಸಂಘದ ಉಪಾಧ್ಯಕ್ಷರಾದ ವಿ.ಕೆ. ದೇವಲಿಂಗಯ್ಯ ಸ್ವಾಗತಿಸಿದರು. 

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.