“ಬಾಲ್ಯದಿಂದಲೇ ಕೊಡವ ಭಾಷೆ ಮೇಲೆ ಹಿಡಿತ ಸಾಧಿಸಿ’

Team Udayavani, Apr 10, 2019, 6:30 AM IST

balya

ಮಡಿಕೇರಿ: ಬಾಲ್ಯದಿಂದಲೇ ಕೊಡವ ಭಾಷೆಯ ಮೇಲೆ ಹಿಡಿತ ಸಾಧಿಸಲು ಪೋಷಕರು ಮಕ್ಕಳಿಗೆ ಪ್ರೇರ ಣೆಯನ್ನು ನೀಡಬೇಕೆಂದು ತಿರಿ ಬೊಳಚ ಕೊಡವ ಸಂಘದ ಅಧ್ಯಕ್ಷೆ ಹಾಗೂ ಬ್ರಹ್ಮಗಿರಿ ಪತ್ರಿಕೆಯ ಉಪಸಂಪಾದಕರಾದ ಉಳ್ಳಿಯಡ ಡಾಟಿ ಪೂವಯ್ಯ ಕರೆ ನೀಡಿದ್ದಾರೆ.

ಮಡಿಕೇರಿಯ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಕೊಡವ ಸಮಾಜ ಪೊಮ್ಮಕ್ಕಡ ಕೂಟದ 3ನೇ ವಾರ್ಷಿ ಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸಲು ಪೋಷಕರು ಹೆಚ್ಚು ಕಾಳಜಿ ತೋರಬೇಕೆಂದರು. ಬಾಲ್ಯದಿಂದಲೇ ಒಂದು ಭಾಷೆಯ ಮೇಲೆ ಹಿಡಿತ ಸಾಧಿಸಿದಾಗ ಮಾತ್ರ ಆ ಭಾಷೆ ಜೀವಂತವಾಗಿ ಉಳಿಯಲು ಸಾಧ್ಯವೆಂದು ಅಭಿಪ್ರಾಯಪಟ್ಟರು.

ಎಲ್ಲ ಕ್ಷೇತ್ರಗಳಲ್ಲು ಮಹಿಳೆ ತನ್ನದೇ ಆದ ಪಾತ್ರವನ್ನು ಹೊಂದಿದ್ದು, ಸಮಾ ಜದಲ್ಲಿ ಗೌರವಯುತ ಸ್ಥಾನದಲ್ಲಿ ಗಮನ ಸೆಳೆಯುತ್ತಿದ್ದಾಳೆ. ಕೊಡವ ಭಾಷಾ ಸಮುದಾಯದ ಮಹಿಳೆಯರು ಒಕ್ಕೂಟ ವ್ಯವಸ್ಥೆಯಡಿ ವಿವಿಧ ಚಟು ವಟಿಕೆಗಳಲ್ಲಿ ತೊಡಗಿಸಿಕೊಂಡು ಇತರರಿಗೆ ಮಾದರಿ ಯಾಗಿದ್ದಾರೆ ಎಂದು ಡಾಟಿಪೂವಯ್ಯ ಹರ್ಷ ವ್ಯಕ್ತಪ ಡಿಸಿದರು.

ಕೊಡವ ಸಮಾಜ ಪೊಮ್ಮಕ್ಕಡ ಕೂಟದ‌ ಸ್ಥಾಪಕಾಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಮಾತನಾಡಿ, ಪೊಮ್ಮಕ್ಕಡ ಕೂಟವು 3ನೇ ವರ್ಷದ ಸಂಭ್ರಮಾಚರಣೆಯಲ್ಲಿದ್ದು, ಎಲ್ಲರೂ ಒಗ್ಗೂಡಿ ಕಾರ್ಯ ನಿರ್ವಹಿಸಲು ಕೂಟ ಹೆಚ್ಚು ಸಹಕಾರಿಯಾಗಿದೆ ಎಂದರು. ಪ್ರತಿ ವರ್ಷ ಒಕ್ಕೂಟದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡುತ್ತಿದ್ದು, ಮತ್ತಷ್ಟು ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲು ಸ್ಫೂರ್ತಿ ನೀಡಿದೆ ಎಂದು ಕವಿತಾ ತಿಳಿಸಿದರು.

ಬರಹಗಾರ್ತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರು ಪೊಮ್ಮಾಲೆ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತ ನಾಡಿ, ಯಾವುದೇ ಕಾರ್ಯವನ್ನು ಕೈಗೊಳ್ಳುವ ಮೊದಲು ದೃಢ ವಿಶ್ವಾಸ ದೊಂದಿಗೆ ಮುನ್ನುಗ್ಗಬೇಕು, ಆಗ ಸುಲಭ ಯಶಸ್ಸು ಸಾಧ್ಯ ಎಂದು ಅಭಿಪ್ರಾ ಯಪಟ್ಟರು.

ಒಕ್ಕೂಟದ ಕಾರ್ಯದರ್ಶಿ ಬೊಳ್ಳಜಿರ ಯಮುನಾ ಅಯ್ಯಪ್ಪ ವರದಿ ವಾಚಿ ಸಿದರು. ಖಜಾಂಚಿ ಉಳ್ಳಿಯಡ ಸಚಿತಾ ಗಂಗಮ್ಮ ಲೆಕ್ಕಪತ್ರ ಮಂಡಿಸಿದರು.
ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಬರಹಗಾರ್ತಿ ಕೂಪದಿರ ಸುಂದರಿ ಮಾಚಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.