ಸುಂದರ ಸಮಾಜವನ್ನು ರೂಪಿಸುವುದೇ ‘ಮತ್ತೆ ಕಲ್ಯಾಣ’ದ ಉದ್ದೇಶ’

Team Udayavani, Jul 8, 2019, 5:37 AM IST

ಮಡಿಕೇರಿ: ಜಾತಿ, ಜಾತಿ ಗಳ ನಡುವಿನ ಮನಸ್ತಾಪಗಳನ್ನು ಹೋಗಲಾಡಿಸಿ ಸುಂದರ ಸಮಾಜವನ್ನು ರೂಪಿಸುವುದೇ ‘ಮತ್ತೆ ಕಲ್ಯಾಣ’ ಕಾರ್ಯ ಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಹೇಳಿದರು.

ಸಹಮತ ವೇದಿಕೆಯ ಸಹಯೋಗದಲ್ಲಿ ನಗರದ ಡಾ| ಅಂಬೇಡ್ಕರ್‌ ಭವನದಲ್ಲಿ ನಡೆದ ”ಮತ್ತೆ ಕಲ್ಯಾಣ” ಆಂದೋಲನದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಸ್ವಾಮೀಜಿ ಮಾತನಾಡಿದರು.

ಬಸವಣ್ಣನವರು 12ನೇ ಶತಮಾನದಲ್ಲಿ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದರು. ಆ ಸಂಕಲ್ಪದೊಂದಿಗೆ ಕಾರ್ಯಕ್ರಮ ಆಯೋಜಿಸಿ, ಜನರಿಗೆ ಸಮಾನತೆ ಬಗ್ಗೆ ಅರಿವು ನೀಡುವ, ಎಲ್ಲರೂ ಒಂದು ಎನ್ನುವ ಮನೋಭಾವ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಎಂದರು.

ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಬಸವಣ್ಣವರ ವಿಚಾರಧಾರೆ, ತತ್ವ ಆದರ್ಶಗಳನ್ನು ಯಾರೂ ನೋಡಿಲ್ಲ, ಆದರೆ ಕೇಳಿ ಅನುಭವಿಸಿದನ್ನು ಹಂಚಿಕೊಳ್ಳುವ ವ್ಯವಸ್ಥೆಯೇ ಮತ್ತೆ ಕಲ್ಯಾಣ ಕಾರ್ಯಕ್ರಮವಾಗಿದ್ದು, ಉತ್ತಮ ಮನಸ್ಸಿನಿಂದ ಯಶಸ್ಸನ್ನು ಸಾಧಿಸೋಣವೆಂದರು.

ಕೊಡ್ಲಿಪೇಟೆ ಕಲ್ಲುಮಠದ ಶ್ರೀಮಹಾಂತ ಸ್ವಾಮೀಜಿ ಮಾತನಾಡಿ, ಕಲ್ಯಾಣವೆಂದರೆ ಅಂಧಕಾರವನ್ನು ಹೋಗಲಾಡಿಸಿ, ಬೆಳಕನ್ನು ಚೆಲ್ಲುವ ಕಾರ್ಯವಾಗಿದೆ. ಎಲ್ಲ ಧರ್ಮಕ್ಕಿಂತ ಶ್ರೇಷ್ಠವಾದದ್ದು ಮಾನವ ಧರ್ಮ, ಇಂತಹ ಮಾನವೀಯ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರು ತಮ್ಮ ಜೀವನದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದರು.

ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್‌ ಮಾತನಾಡಿ, ಆ.1 ರಿಂದ 30ರ ವರೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಸಾಣೇಹಳ್ಳಿ ಶ್ರೀಮಠದ ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ”ಮತ್ತೆ ಕಲ್ಯಾಣ” ಕಾರ್ಯ ಕ್ರಮವನ್ನು ಕೊಡಗು ಜಿಲ್ಲೆಯಲ್ಲಿ ಆ.5 ರಂದು ನಡೆಸಲು ನಿರ್ಧರಿಸಲಾಗಿದೆ ಎಂದರು.

ಅಂದು ಬೆಳಗ್ಗೆ 11 ಗಂಟೆಗೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮ ಮತ್ತು ಸಂಜೆ 5 ಗಂಟೆಗೆ ಸಾಮರಸ್ಯ ನಡಿಗೆ ನಡೆಯಲಿದೆ. ಅನಂತರ 6 ಗಂಟೆಗೆ ಸಾರ್ವಜನಿಕ ಸಮಾವೇಶ, 8.30ಕ್ಕೆ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಶಿವಶಕ್ತಿ ನಾಟಕ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ ಹಾಗೂ ರಾತ್ರಿ ಸಾಮೂಹಿಕ ಪ್ರಸಾದ ವಿತರಣೆಯಾಗಲಿದೆ ಎಂದು ಮಾಹಿತಿ ನೀಡಿದರು. ಸಮುದಾಯದ ಮುಖಂಡರು ಕಾರ್ಯಕ್ರಮದ ರೂಪು ರೇಷೆಗಳ ಕುರಿತು ಚರ್ಚಿಸಿದರು.

ಶಿಡಿಗಳಲೆ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಮತ್ತೆ ಕಲ್ಯಾಣ ಕಾರ್ಯಕ್ರಮದ ಸಂಚಾಲಕ ಎಸ್‌.ಮಹೇಶ್‌, ಸಂಯೋಜಕ‌ ಮೊಣ್ಣಪ್ಪ, ಪ್ರಮುಖರಾದ ಕೆ.ಟಿ.ಬೇಬಿಮ್ಯಾಥ್ಯು, ಮುನೀರ್‌ ಅಹಮ್ಮದ್‌, ಅಮೀನ್‌ ಮೊಹಿಸಿನ್‌ ಹಾಗೂ ವಿವಿಧ ಜನಾಂಗದ ಮುಖಂಡರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ