ದೇಶದ ಭವಿಷ್ಯಕ್ಕೆ ಯುವ ವರ್ಗವೇ ಬುನಾದಿ: ಬಿ.ಎ. ಹರೀಶ್‌

ಮಡಿಕೇರಿಯಲ್ಲಿ ಜಿಲ್ಲಾ ಯುವ ಸಮಾವೇಶ

Team Udayavani, Mar 13, 2020, 5:59 AM IST

YUVA-SAMAVESHA-1

ಮಡಿಕೇರಿ: ಯುವಕರೇ ದೇಶದ ಶಕ್ತಿಯಾಗಿದ್ದು, ಭಾರತದ ಭವ್ಯ ಭವಿಷ್ಯಕ್ಕೆ ಯುವ ವರ್ಗವೇ ಬುನಾದಿ ಎಂದು ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್‌ ಅವರು ತಿಳಿಸಿದರು.

ನೆಹರೂ ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಲ್ಲಕ್ಕಿ ಯುವತಿ ಮಂಡಳಿ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಜಿಲ್ಲಾ ಯುವ ಸಮಾವೇಶ, ಉತ್ತಮ ಯುವ ಸಂಘ ಪ್ರಶಸ್ತಿ ವಿತರಣೆ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಸಮಾರಂಭ ಯುವ ಸಂಘಗಳ ಸದೃಢ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ನಾವು ಸದಾ ಚಟು ವಟಿಕೆ ಯಿಂದಿರಬೇಕು. ಕ್ರೀಡೆ ಯಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸು ಮತ್ತು ದೈಹಿಕ ಆರೋಗ್ಯ ಉತ್ತಮವಾಗಿ ರುತ್ತದೆಎಂದರು.

ಕೊಡಗು ಜಿಲ್ಲೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಅನೇಕ ಕ್ರೀಡಾಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಅವರ ಹಾದಿಯಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳುವಂತಾಗಬೇಕು ಎಂದು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಪಂ. ಉಪಾಧ್ಯಕ್ಷ ಲೋಕೇಶ್ವರಿ ಗೋಪಾಲ್‌ ಅವರು, ದೇಶದ ಆಸ್ತಿ ಮತ್ತು ಶಕ್ತಿ ಯುವ ವರ್ಗವೇ ಆಗಿದೆ. ದೇಶಕ್ಕೆ ಅನೇಕ ಮಹನೀಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಿ ಎಂದು ಸಲಹೆ ನೀಡಿದರು.

ನೆಹರೂ ಯುವ ಕೇಂದ್ರದ ಯುವಜನ ಸಮನ್ವಯಾಧಿಕಾರಿ ಉಲ್ಲಾಸ್‌, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ| ದಯಾನಂದ್‌ ಮಾತನಾಡಿದರು.

ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್‌ ಅವರು ಜಿಲ್ಲಾ ಪಂಚಾಯತ್‌, ಜಿಲ್ಲಾಡಳಿತದ ವತಿಯಿಂದ ಯುವ ವರ್ಗದ ಅಭಿವೃದ್ಧಿಗಾಗಿ ಹೆಚ್ಚಿನ ಕಾರ್ಯಕ್ರಮ ರೂಪಿಸಬೇಕು. ಜತೆಗೆ ಯುವಜನೋತ್ಸವಗಳಿಗೆ ಹೆಚ್ಚಿನ ಅನುದಾನ ಮುಂದಿನ ದಿನಗಳಲ್ಲಿ ನೀಡುವಂತೆ ಜಿ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಯುವ ಸಂಘ ಗಳಿಗೆ ಉಚಿತವಾಗಿ ಕ್ರೀಡಾ ಸಾಮಗ್ರಿ ವಿತರಿಸಲಾಯಿತು. ಸೋಮವಾರಪೇಟೆ ತಾಲೂಕಿನ ಹಾರಳ್ಳಿ ಬೀಟಿ ಕಟ್ಟೆಯ ಡಾ| ಬಿ.ಆರ್‌. ಅಂಬೇಡ್ಕರ್‌ ಯುವಕ ಸಂಘಕ್ಕೆ ಜಿಲ್ಲಾ ಮಟ್ಟದ ಉತ್ತಮ ಯುವಸಂಘ ಪ್ರಶಸ್ತಿಯನ್ನು ಈ ಸಂದರ್ಭ ನೀಡಿ ಗೌರವಿಸಲಾಯಿತು.

ಫೀ|ಮಾ| ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಯೋಜನಾಧಿಕಾರಿ ಡಾ| ಗೀತಾಂಜಲಿ, ನೆಹರೂ ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಸಂತೋಷ್‌ ಕುಮಾರ್‌, ಚರಣ್‌ ಬಿ.ಜೆ., ಮಿಥುನ್‌ ಎಂ.ಬಿ, ಲಕ್ಷ್ಮಿ¾àಕಾಂತ್‌, ಮೇರಿ ಒಲಿವೆರ, ಧನಲಕ್ಷ್ಮೀ, ರಾಜೇಶ್ವರಿ, ಜ್ಯೋತಿ ಸೇರಿದಂತೆ ಇತರರು ಇದ್ದರು.
ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್‌ ಸ್ವಾಗತಿಸಿದರು, ನೆಲ್ಲಕ್ಕಿ ಯುವತಿ ಮಂಡಳಿಯ ಅಧ್ಯಕ್ಷರಾದ ಇಂದುಮತಿ ಪ್ರಾರ್ಥಿಸಿದರು. ಕಲಾವಿದೆ ಮಂಜು ಭಾರ್ಗವಿಯವರು ಸ್ವಾಗತ ನೃತ್ಯ ಪ್ರದರ್ಶಿಸಿದರು. ನೆಹರೂ ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಚಂದನ್‌ ವಂದಿಸಿದರು. ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷರಾದ ಹರೀಶ್‌ ನಿರೂಪಿಸಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.