
ಮಡಿಕೇರಿ : ಹಸುಗಳ ಬಲಿ ಪಡೆಯುತ್ತಿದ್ದ ಹುಲಿ ಸೆರೆ, 10 ದಿನಗಳ ಕಾರ್ಯಾಚರಣೆ ಯಶಸ್ವಿ
Team Udayavani, Sep 21, 2022, 9:44 AM IST

ಮಡಿಕೇರಿ: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯ ಬಾಡಗ-ಬಾಣಂಗಾಲ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಬಲಿ ಪಡೆಯುತ್ತಿದ್ದ 13 ವರ್ಷದ ಗಂಡು ಹುಲಿ ಕೊನೆಗೂ ಸೆರೆಯಾಗಿದೆ.
ಅರಣ್ಯ ಇಲಾಖೆಯ 10 ದಿನಗಳ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಮಾಲ್ದಾರೆ ಸಮೀಪ ತೋಟವೊಂದರ ಬಳಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಮಂಗಳವಾರ ಸಂಜೆ 5ರ ಸುಮಾರಿಗೆ ಕಾರ್ಯಾಚರಣೆ ತಂಡದ ಕಣ್ಣಿಗೆ ಬಿದ್ದ ಹುಲಿಗೆ ಉಪ ವಲಯ ಅರಣ್ಯಾಧಿಕಾರಿ ಶಾರ್ಪ್ ಶೂಟರ್ ರಂಜನ್ ಅರಿವಳಿಕೆ ಮದ್ದು ನೀಡಿದರು. ಹುಲಿ ನಿತ್ರಾಣಗೊಂಡಿತ್ತಾದರೂ ನೆಲಕ್ಕೆ ಬೀಳಲಿಲ್ಲ. ಈ ಕಾರಣ ದಿಂದ ಮತ್ತೂಮ್ಮೆ ಅರಿವಳಿಕೆ ಶೂಟ್ ಮಾಡಲಾಯಿತು. ಅನಂತರ ಬಿದ್ದ ಹುಲಿಯನ್ನು ಬಲೆಯ ಸಹಾಯದಿಂದ ಬೋನಿಗೆ ಹಾಕಲಾಯಿತು. ಸೆರೆಯಾದ ಹುಲಿಯನ್ನು ಮೈಸೂರು ಮೃಗಾಲಯಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುವುದು. ಚೇತರಿಸಿಕೊಂಡ ಅನಂತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದರು.
ಸೆರೆಯಾದ ಹುಲಿಯ ಒಂದು ಕಾಲಿಗೆ ಗಾಯವಾಗಿದ್ದು, ಪ್ರಾಣಿಗಳನ್ನು ಬೇಟೆ ಯಾಡುವ ಸಂದರ್ಭ ಗಾಯ ಆಗಿರಬಹುದೆಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣ ಚಳಿಗಾಲದ ವೇಳಾಪಟ್ಟಿ : ಬೆಂಗಳೂರು, ದುಬಾೖಗೆ ಬೆಳಗ್ಗೆ ನಿತ್ಯ ಸಂಚಾರ
6 ಹಸುಗಳು ಬಲಿ
ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರ ಕಣ್ಣಿಗೆ ಬೀಳುತ್ತಿದ್ದ ಹುಲಿ ಹಾಡಹಗಲೇ ಹಸುಗಳನ್ನು ಕೊಂದು ಭೀತಿ ಹುಟ್ಟಿಸಿತ್ತು. 15 ದಿನಗಳಲ್ಲಿ 6 ಹಸುಗಳು ಬಲಿಯಾಗಿದ್ದವು. ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಹುಲಿ ಸೆರೆಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ದುಬಾರೆ ಸಾಕಾನೆ ಶಿಬಿರದ ಲಕ್ಷ್ಮಣ, ಈಶ್ವರ, ಇಂದ್ರ, ಮತ್ತು ಅಂಜನಾ ಹೆಸರಿನ 4 ಸಾಕಾನೆಗಳೊಂದಿಗೆ ಅರಣ್ಯ ಅಧಿಕಾರಿಗಳು, ಸಿಬಂದಿ ಹಾಗೂ ಆರ್‌ಆರ್‌ಟಿ ಸಿಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೂರ್ತಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಅಧಿಕಾರಿಗಳು ಹಾಗೂ ಸಿಬಂದಿಯ
ಶ್ರಮಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ ಹೊಸ ರಾಗ

ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
