ಜೀಪ್ ಪಲ್ಟಿ: ಇಬ್ಬರ ಸಾವು
Team Udayavani, Mar 18, 2017, 2:24 PM IST
ಮಡಿಕೇರಿ: ಕಾರ್ಮಿಕರನ್ನು ಸಾಗಿ ಸುತ್ತಿದ್ದ ಜೀಪ್ ಪಲ್ಟಿಯಾದ ಪರಿಣಾಮ ಚಾಲಕ ಸೇರಿ ಇಬ್ಬರು ಸಾವನಪ್ಪಿರುವ ಘಟನೆ ಕುಟ್ಟ-ಗೋಣಿಕೊಪ್ಪ ರಸ್ತೆಯ ಕಾಕೂರು ಎಂಬಲ್ಲಿ ನಡೆದಿದೆ.
ಚಾಲಕ ಕೇರಳದ 6ನೇ ಪಾರೆ ನಿವಾಸಿ ಅಜೇಶ್ (26) ಸ್ಥಳದಲ್ಲಿಯೇ ಸಾವನಪ್ಪಿದರು. ಪ್ರಯಾಣಿಕ ಸಿನೋಜ್ (32) ಮಾನಂದವಾಡಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಸುಮಾರು 12 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಕೇರಳದಿಂದ ಬರುತ್ತಿದ್ದ ಜೀಪ್ ಮಗುಚಿಕೊಂಡಿದೆ. ಪರಿಣಾಮ ಚಾಲಕ ವಾಹನದ ಕೆಳಗೆ ಸಿಲುಕೊಂಡು ಸ್ಥಳದಲ್ಲಿಯೇ ಸಾವನಪ್ಪಿದರು. ಗಂಭೀರವಾಗಿ ಗಾಯಗೊಂಡವರನ್ನು ಕುಟ್ಟ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಮಾನಂದವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಕುಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ