ಚುನಾವಣೆಯಲ್ಲಿ ನಿರ್ಭೀತರಾಗಿ ಮತದಾನ ಮಾಡಲು ಕರೆ

Team Udayavani, Mar 9, 2019, 12:50 AM IST

z-jagrthi.jpg

ಮಡಿಕೇರಿ: ಮತದಾನದ ಮಹತ್ವ ಕುರಿತು ಜಿಲ್ಲೆಯ ಹಲವು ಕಡೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದೆ. ಹಲವು ಸಂಘ ಸಂಸ್ಥೆಗಳ ಜೊತೆಗೂಡಿ ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂಬಂಧ ಪ್ರತಿಜ್ಞಾ ವಿಧಿ ಸ್ವೀಕಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್‌) ಅಧ್ಯಕ್ಷೆ ಲಕ್ಷ್ಮೀಪ್ರಿಯಾ ತಿಳಿಸಿದರು.

ಈಗಾಗಲೇ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವುದು, ಸಂಘ ಸಂಸ್ಥೆಗಳ ಜೊತೆಗೂಡಿ ಮತದಾನದ ಮಹತ್ವ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದವರು ತಿ‌ಳಿಸಿದರು. 

ಪ್ರತಿಜ್ಞಾ ವಿಧಿ ಸಂದರ್ಭದಲ್ಲಿ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಬೋಧಿಸಲಾಗುತ್ತದೆ ಎಉಂದು ಅವರು ತಿಳಿಸಿದರು.

ಇಡೀ ವಿಶ್ವದಲ್ಲಿಯೇ ಮಾದರಿ ಸಂವಿಧಾನ ಹೊಂದಿರುವ ಅರ್ಹರೆಲ್ಲರೂ ಚುನಾವಣಾ ಗುರುತಿನ ಚೀಟಿ ಪಡೆದು ಮತದಾನ ಮಾಡುವಂತಾಗಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.ಮತದಾನ ಜಾಗೃತಿ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಜಾಥಾ ಕಾರ್ಯಕ್ರಮಗಳು, ಬೀದಿನಾಟಕ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಸ್ವೀಪ್‌ ಸಮಿತಿ ಅಧಕ್ಷೆ ಲಕ್ಷ್ಮೀಪ್ರಿಯಾ ಅವರು ತಿಳಿಸಿದ್ದಾರೆ. 

ವಿವಿ ಪ್ಯಾಟ್‌ ಪ್ರಮುಖವಿದ್ಯುನ್ಮಾನ ಮತಯಂತ್ರದಲ್ಲಿ ಪ್ರಮುಖವಾಗಿ ಕಂಟ್ರೋಲ್‌ ಯೂನಿಟ್‌, ಬ್ಯಾಲೇಟ್‌ ಯೂನಿಟ್‌ ಹಾಗೆಯೇ ವಿವಿ ಪ್ಯಾಟ್‌ ಪ್ರಮುಖವಾಗಿದ್ದು, ಬ್ಯಾಲೆಟ್‌ ಯೂನಿಟ್‌ನಲ್ಲಿ ಮತದಾನ ಮಾಡಿದ ನಂತರ ಕಂಟ್ರೋಲ್‌ ಯೂನಿಟ್‌ನಲ್ಲಿ ಭದ್ರವಾಗಲಿದೆ. ಯಾರಿಗೆ ಮತದಾನ ಮಾಡಲಾಗಿದೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ವಿವಿಪ್ಯಾಟ್‌ ಸಹಕಾರಿಯಾಗಿದೆ. ಹೀಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.

ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ 18 ವರ್ಷ ಪೂರ್ಣಗೊಂಡವರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡು ವಂತಾಗಬೇಕು. ಲಕ್ಷ್ಮೀಪ್ರಿಯಾ ಅವರು ತಿಳಿಸಿದರು. 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.