ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಅನ್ಬುಬ್ ಕುಮಾರ್


Team Udayavani, Nov 12, 2020, 8:57 PM IST

Z-VOTERS-

ಮಡಿಕೇರಿ: ಭಾವಚಿತ್ರ ಇರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಮತದಾರರ ಪಟ್ಟಿ ವೀಕ್ಷಕರಾಗಿ ನೇಮಕವಾಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಬ್ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಸಭೆ ನಡೆಯಿತು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ವಿ.ಅನುºಕುಮಾರ್‌ ಅವರು ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಆಯೋಗದ ನಿರ್ದೇಶನ ಮತ್ತು ನಿಯಮದಂತೆ ನಡೆಸಬೇಕು. ಅರ್ಜಿ ನಮೂನೆ-6, 7, 8 ಮತ್ತು 8ಎ ರಂತೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕುವುದು, ಸ್ಥಳಾಂತರ ಬಗ್ಗೆ ಬಿಎಲ್‌ಒಗಳಿಂದ ನಿಖರ ಮಾಹಿತಿ ಪಡೆಯುವಂತೆ ಅವರು ಸಲಹೆ ಮಾಡಿದರು.

ಮತದಾರರ ಪಟ್ಟಿ ಸಂಬಂಧಿಸಿದಂತೆ ಯಾವುದೇ ದೂರುಗಳು ಬರದಂತೆ ಗಮನಹರಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸಬೇಕು. ಒಂದು ಮತಗಟ್ಟೆಯಲ್ಲಿ 1500 ಕ್ಕಿಂತ ಹೆಚ್ಚು ಮತದಾರರು ಇದ್ದಲ್ಲಿ ಮಾಹಿತಿ ನೀಡುವಂತೆ ಅನ್ಬುಬ್ ಕುಮಾರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 4,41,832 ಮತದಾರರು ಇದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 2,22,198 ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,18,157 ಮತದಾರರು ಇದ್ದಾರೆ. ಜೊತೆಗೆ 1,477 ಸೇವಾ ಮತದಾರರಿದ್ದಾರೆ. ಅಂತಿಮ ಮತದಾರರ ಪಟ್ಟಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ಕರಡು ಮತದಾರರ ಪಟ್ಟಿಯನ್ನು ನವೆಂಬರ್‌, 18 ರಂದು ಪ್ರಕಟಿಸಲಾಗುತ್ತದೆ. ನವೆಂಬರ್‌, 18 ರಿಂದ ಡಿಸೆಂಬರ್‌, 17 ರವರೆಗೆ ಮತದಾರರ ಪಟ್ಟಿ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಹಾಗೆಯೇ ನವೆಂಬರ್‌, 22, 29, ಡಿಸೆಂಬರ್‌, 06 ಮತ್ತು 13 ರಂದು ವಿಶೇಷ ಅಭಿಯಾನ ನಡೆಯಲಿದೆ ಎಂದು ಅನೀಸ್‌ ಕಣ್ಮಣಿ ಜಾಯ್‌ ಅವರು ಮಾಹಿತಿ ನೀಡಿದರು.

ಜಿ.ಪಂ.ಸಿಇಒ ಭಂವರ್‌ ಸಿಂಗ್‌ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್‌, ತಹಶೀಲ್ದಾರರಾದ ಗೋವಿಂದ ರಾಜು(ಸೋಮವಾರಪೇಟೆ), ಮಹೇಶ್‌(ಮಡಿಕೇರಿ), ನಂದೀಶ್‌(ವಿರಾಜಪೇಟೆ), ಚುನಾವಣಾ ವಿಭಾಗದ ಅನಿಲ್‌ ಕುಮಾರ್‌ ಅವರು ಹಲವು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.