ಕೊಕ್ಕಡ: ಕಾರು ಮತ್ತು ಶಾಲಾ ವಿದ್ಯಾರ್ಥಿಗಳ ಪ್ರವಾಸದ ಬಸ್ ಅಫಘಾತ

Team Udayavani, Dec 6, 2019, 11:45 AM IST

ಕೊಕ್ಕಡ : ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ತಿರುವಿನಲ್ಲಿ ಕಾರು ಮತ್ತು ಶಾಲಾ ವಿದ್ಯಾರ್ಥಿಗಳ ಪ್ರವಾಸದ ಬಸ್ ನಡುವೆ ಶುಕ್ರವಾರದಂದು ಅಫಘಾತ ಸಂಭವಿಸಿದ್ದು, ಘಟನೆಯಿಂದಾಗಿ ಬಸ್ಸಿನಲ್ಲಿದ್ದ 8 ಮಂದಿ ವಿದ್ಯಾರ್ಥಿಗಳು ಹಾಗು ಓರ್ವ ಅಧ್ಯಾಪಕ ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ 3 ಖಾಸಗಿ ಬಸ್ ಗಳ ಪೈಕಿ ಒಂದು ಬಸ್ ಧರ್ಮಸ್ಥಳದಿಂದ ಬೇಲೂರಿಗೆ ಹೋಗುವ ವೇಳೆ ಕೊಕ್ಕಡದ ಕಾಪಿನಬಾಗಿಲು ಬಳಿ ಕಾರೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ . ಗಾಯಗೊಂಡ 8 ಮಂದಿ ವಿದ್ಯಾರ್ಥಿಗಳು ಹಾಗು ಅಧ್ಯಾಪಕರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ಅಪಘಾತದ ವೇಳೆ ತಮಿಳುನಾಡಿನ ಚಿತ್ತೂರು ಜಿಲ್ಲೆ ತಿರುಪತಿಯ ಕಾರು ಬಸ್ ನಡಿಗೆ ಬಿದ್ದು ಚಾಲಕ ಪ್ರಸಾದ್ (38) ಗಾಯಗೊಂಡಿದ್ದಾರೆ. ಕಾರಿನ ಮುಂಭಾಗದ ಮೇಲೆ ಬಸ್ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಜೀವಾಪಾಯದಿಂದ ಪಾರಾಗಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ