1 ಸಾವಿರ ಘನತ್ಯಾಜ್ಯ ನಿರ್ವಹಣಾ ಘಟಕ

ಸುಸ್ಥಿರ ಕಸ ನಿರ್ವಹಣೆ, ನೈರ್ಮಲ್ಯದ ದೃಷ್ಟಿಯಿಂದ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆ: ಸಚಿವ ಕೃಷ್ಣಬೈರೇಗೌಡ

Team Udayavani, Jun 16, 2019, 1:35 PM IST

kolar-tdy-2..

ಕೋಲಾರ ಜಿಲ್ಲೆಯ ಉತ್ತನೂರಿನಲ್ಲಿ ಆರಂಭಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕವನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಸಿ.ಬಿ.ಕೃಷ್ಣಬೈರೇಗೌಡ ಮಾತನಾಡಿದರು.

ಕೋಲಾರ: ಗ್ರಾಮೀಣ ಪ್ರದೇಶದಲ್ಲಿ ಸುಸ್ಥಿರ ಕಸ ನಿರ್ವಹಣೆ ದೃಷ್ಟಿಯಿಂದ ಸ್ವಚ್ಛ ಮೇವ ಜಯತೆ ಯೋಜನೆಯಡಿ ಈ ವರ್ಷದಲ್ಲಿ ರಾಜ್ಯಾದ್ಯಂತ ಒಂದು ಸಾವಿರ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ದಿ ಸಚಿವ ಸಿ.ಬಿ.ಕೃಷ್ಣಬೈರೇಗೌಡ ತಿಳಿಸಿದರು.

ಜಿಲ್ಲೆಯ ಉತ್ತನೂರಿನಲ್ಲಿ ಆರಂಭಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕವನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇಂತಹ 50 ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದ ಅವರು, 2 ತಿಂಗಳ ಹಿಂದೆ ಉತ್ತನೂರಿನಲ್ಲಿ ಆರಂಭಗೊಂಡಿರುವ ಘಟಕವನ್ನು ಮಾದರಿಯಾಗಿ ಪರಿಗಣಿಸಲಾಗಿದೆ. ಇದರ ಜತೆಗೆ ಜಿಲ್ಲೆಯಲ್ಲಿ ಈಗಾಗಲೇ 7 ಘಟಕಗಳಿಗೆ ಮಂಜೂರಾತಿ ನೀಡಲಾಗಿದ್ದು, ಉಳಿದ 43 ಘಟಕಗಳಿಗೂ ಶೀಘ್ರ ಅನುಮತಿ ಸಿಕ್ಕಿ ಕಾರ್ಯ ಆರಂಭಿಸಲಿವೆ ಎಂದು ಹೇಳಿದರು.

ರಿಸೈಕಲ್ಗೆ ಕ್ರಮ: ಹಳ್ಳಿಗಳಲ್ಲಿ ಕೊಳಕು ಪರಿಸರ ದೂರ ಮಾಡಿ ನೈರ್ಮಲ್ಯ ಮೂಡಿಸಲು ಈ ಘಟಕ ಸಹಕಾರಿ ಎಂದ ಅವರು, ಇದರಲ್ಲಿ ಪ್ಲಾಸ್ಟಿಕ್‌, ಡಬ್ಬಿಗಳು, ಮತ್ತಿತರ ಒಣಕಸವನ್ನು ಸಂಗ್ರಹಿಸಿ ಅದನ್ನು ಖರೀದಿಸುವವರೊಂದಿಗೆ ಲಿಂಕ್‌ ಮಾಡಿ ರಿಸೈಕಲ್ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಗೊಬ್ಬರ ತಯಾರಿ: ಉಳಿದಂತೆ ಹಸಿ ಕಸವನ್ನು ಕಸ ಹಾಕಲು ಜಾಗವಿರುವ ರೈತರು ಸ್ವತಃ ನಿರ್ವಹಿಸಿ ಗೊಬ್ಬರ ಮಾಡಿಕೊಳ್ಳಬಹುದು, ಜಾಗ ಇಲ್ಲದವರಿಂದ ಗ್ರಾಮ ಪಂಚಾಯಿತಿಗಳು ಕಸ ಸ್ವೀಕರಿಸಿ ಅದನ್ನು ಗೊಬ್ಬರವಾಗಿ ಮಾರ್ಪಡಿಸಲಿವೆ. ಸಾರ್ವಜನಿಕರು, ಗ್ರಾಪಂ ಸಹಕಾರದಿಂದಾಗಿ ಉತ್ತನೂರಿನಲ್ಲಿ ಘಟಕ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಇದನ್ನು ಇತರೆ ಜಿಲ್ಲೆಯ ಗ್ರಾಮ ಪಂಚಾಯ್ತಿ ಸಿಬ್ಬಂದಿ, ಸದಸ್ಯರನ್ನು ಕರೆಸಿ ತೋರಿಸಲಾಗುವುದು ಎಂದರು.

ಸ್ವಚ್ಛ ಮೇವ ಜಯತೆ ಹಾಗೂ ಸ್ವಚ್ಛ ಭಾರತ ಅಭಿಯಾನದಡಿ ಘನತ್ಯಾಜ್ಯ ಘಟಕಗಳ ಸ್ಥಾಪನೆಗೆ 20 ರಿಂದ 40 ಲಕ್ಷ ರೂ. ಅನುದಾನ ನೀಡಲಾಗುವುದು, ಜತೆಗೆ ಕಸ ನೀಡುವ ಮನೆಗಳವರಿಂದ ತಿಂಗಳಿಗೆ 10 ಅಥವಾ 20 ರೂ. ಪಡೆದು ನಿರ್ವಹಣೆ ಮಾಡಲಾಗುವುದು ಎಂದರು.

ಘನತ್ಯಾಜ್ಯ ಘಟಕಗಳ ಸ್ಥಾಪನೆಗೆ ಜಾಗವಿಲ್ಲದಿದ್ದರೆ ಸರ್ಕಾರದಿಂದ ಮಂಜೂರು ಮಾಡಿಕೊಡಲಾಗುವುದು ಎಂದ ಸಚಿವರು, ಸಾರ್ವಜನಿಕರ ಸಹಕಾರ ಸಿಕ್ಕರೆ ಮಾತ್ರವೇ ಈ ಯೋಜನೆ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಕೆಟ್ಟು ಕೊಳೆತು ಹೋಗುತ್ತಿದ್ದು, ಇದನ್ನು ತಪ್ಪಿಸಿ ಉತ್ತಮ ಪರಿಸರದ ಜತೆ ಆರೋಗ್ಯ ರಕ್ಷಣೆಗೂ ಇದು ಸಹಕಾರಿಯಾಗಲಿದೆ ಎಂದರು. ಉತ್ತನೂರು ಗ್ರಾಪಂ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಕಾಂಗ್ರೆಸ್‌ ಮುಖಂಡರು ಹಾಜರಿದ್ದರು.

ಶೋಭಾರ ಅಸಭ್ಯ ಟ್ವೀಟ್‌ಗೆ ಸಚಿವ ತಿರುಗೇಟು:

ಮೈತ್ರಿ ಸರ್ಕಾರದ ಕುರಿತು ಅಸಭ್ಯವಾಗಿ ಟ್ವೀಟ್ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣಬೈರೇಗೌಡ ಗೆಲುವು ಮತ್ತು ಅಧಿಕಾರದ ಮದ ಈ ರೀತಿ ಮಾತನಾಡಿಸುತ್ತದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು. ತಾಲೂಕಿನ ಉತ್ತನೂರು, ಹನುಮನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ವೀಕ್ಷಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷ ಬಿಜೆಪಿಗೆ ಅಧಿಕಾರದ ಮದ ನೆತ್ತಿಗೇರಿದೆ, ಇದು ಸಾರ್ವಜನಿಕ ಜೀವನಕ್ಕೆ ಲಾಯಕ್ಕಾದ ಹೇಳಿಕೆಯಲ್ಲ ಎಂದು ತಿಳಿಸಿ, ಇದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು. ಕೈ ಮುರಿತೀವಿ, ಕಾಲು ಮುರಿತೀವಿ, ನಾಲಿಗೆ ಸೀಳ್ತೀವಿ ಅಂತ ಹಿಂದೆಯೂ ಬಿಜೆಪಿ ಮುಖಂಡರು ಹೇಳಿಕೆ ನೀಡಿದ್ದರು. ಈ ರೀತಿಯ ಹೇಳಿಕೆಗಳು ಇದು ಮೊದಲೇನಲ್ಲ ಎಂದು ಪ್ರತಿಕ್ರಿಯಿಸಿದರು. ಪಕ್ಷೇತರರಿಗೆ ಮಣೆ
ವರಿಷ್ಠರ ನಿರ್ಧಾರ: ಪಕ್ಷೇತರರಿಗೆ ಸಚಿವ ಸ್ಥಾನ ನೀಡಿರುವುದು ವರಿಷ್ಠರ ತೀರ್ಮಾನದಂತೆಯೇ, ಯಾವುದೇ ಭಿನ್ನಮತವಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಇತರೆ ಸಚಿವಾಕಾಂಕ್ಷಿಗಳಿಗೂ ಅವಕಾಶ ಸಿಗಲಿದೆ ಎಂದು ತಿಳಿಸಿದರು. ಇದೀಗ ಪಕ್ಷ ಖಾಲಿ ಇರುವ ಸಚಿವ ಸ್ಥಾನ ಮಾತ್ರ ಭರ್ತಿ ಮಾಡಿದೆ, ಪುನಾರಚನೆ ಮಾಡಿಲ್ಲ ಎಂದ ಅವರು, ಪುನಾರಚನೆಗೆ ವರಿಷ್ಠರು ತೀರ್ಮಾನ ಮಾಡಿದರೆ ಸರಕಾರದ ಹಿತ ದೃಷ್ಟಿಯಿಂದ ಸಚಿವ ಸ್ಥಾನ ಬಿಟ್ಟುಕೊಡಲು ನಾವೂ ಸಿದ್ಧ ಎಂದು ಹೇಳಿದರು. ಅಧಿಕಾರ ಹಿಡಿಯಲು ಬಿಜೆಪಿ ವಾಮಮಾರ್ಗ: ಬಿಜೆಪಿಯವರು ನಾವು ಮೈತ್ರಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿಲ್ಲ ಎನ್ನುತ್ತಲೇ ಈ ಕೆಲಸವನ್ನು ವಾಮಮಾರ್ಗದಲ್ಲಿ ಮಾಡುತ್ತಿದ್ದಾರೆ, ಇವರಿಗೆ ಕೇಂದ್ರದ ಪಕ್ಷದ ವರಿಷ್ಠರೇ ರಾಜ್ಯ ಸರ್ಕಾರ ಉರುಳಿಸಲು ಸೂಚನೆ ನೀಡಿದ್ದಾರೆ ಎಂದು ಟೀಕಿಸಿದರು. ಬಿಜೆಪಿ ಸರ್ಕಾರ ಬೀಳಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದರೂ, ಮೈತ್ರಿ ಸರ್ಕಾರದಲ್ಲಿ ನಾವು ಒಗ್ಗಟ್ಟಿನಿಂದ ಇದ್ದೇವೆ, ಸರ್ಕಾರ ಉರುಳಲು ನಾವು ಬಿಡೋದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.