ಕೆರೆಯಲ್ಲಿ 1100 ಸಸಿ ನೆಟ್ಟು ಗ್ರಾಪಂ ಸದಸ್ಯ ಮಾದರಿ

ಗ್ರಾಪಂ ಸದಸ್ಯ ಗೋಪಾಲರೆಡ್ಡಿ ಸಾಧನೆಗೆ ನಾಗರಿಕರ ಮೆಚ್ಚುಗೆ

Team Udayavani, Jun 17, 2019, 11:15 AM IST

kolar-tdy-2..

ಬೇತಮಂಗಲ ಹೋಬಳಿ ವ್ಯಾಪ್ತಿಯ ಸುಂದರಪಾಳ್ಯ ಗ್ರಾಪಂ ಕಳ್ಳಾವಿ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಗ್ರಾಪಂ ಸದಸ್ಯ ಗೋಪಾಲರೆಡ್ಡಿ 1100 ಸಸಿ ನೆಟ್ಟು, ಟ್ಯಾಂಕರ್‌ ಮೂಲಕ ನೀರು ಹರಿಸಿದರು.

ಬೇತಮಂಗಲ: ಸಸಿ ನೆಟ್ಟರೆ ಸಾಲದು, ಪೋಷಿಸಿ, ಮರಗಳಾಗಿ ಬೆಳೆಸಿದರೆ ಮಾತ್ರ ಪರಿಸರ ಬೆಳೆಸಿ ನಾಡನ್ನು ಉಳಿಸಿ ಎಂಬ ಧ್ಯೇಯೋದ್ದೇಶ ಈಡೇರಲು ಸಾಧ್ಯ ಎಂದು ಗ್ರಾಪಂ ಸದಸ್ಯ ಗೋಪಾಲರೆಡ್ಡಿ ಅಭಿಪ್ರಾಯಪಟ್ಟರು.

ಪಟ್ಟಣದ ಬಳಿಯ ಕಳ್ಳಾವಿ ಹೊಸಹಳ್ಳಿ ಕೆರೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು, ಟ್ಯಾಂಕರ್‌ ಮೂಲಕ ನೀರು ಹಾಕಿಸಿ ಮಾತನಾಡಿದ ಅವರು, ಸುಂದರಪಾಳ್ಯ ಗ್ರಾಪಂ ವ್ಯಾಪ್ತಿಯ ಗ್ರಾಮದ ಬಳಿಯ 60 ಎಕರೆ ವಿಸ್ತೀರ್ಣಹೊಂದಿರುವ ಕೆರೆಯಲ್ಲಿ 1100 ಸಸಿ ನೆಟ್ಟಿದ್ದು, ಈ ಸಸಿಗಳು ಮರಗಳಾಗಿ ಬೆಳೆಸಲು ಪಣತೊಟ್ಟಿರುವುದಾಗಿ ತಿಳಿಸಿದರು.

ಹೊಣೆಗಾರಿಕೆ ಇರಲಿ: ಜಿಪಂ ಅಧಿಕಾರಿಗಳ ಆದೇಶದ ಮೇರೆಗೆ ವಿಶ್ವ ಪರಿಸರ ದಿನಾಚರಣೆ, ಕೋಟಿ ನಾಟಿ, ಸ್ವಚ್ಛಮೇವ ಜಯತೆ ಆಂದೋಲನ ಕಾರ್ಯಕ್ರಮದಡಿ ಸರ್ಕಾರಿ ಶಾಲಾ ಆವರಣ, ಮುಖ್ಯರಸ್ತೆಯ ಬದಿ, ಆಸ್ಪತ್ರೆ ಆವರಣದಲ್ಲಿ ಸಸಿಗಳನ್ನು ನಾಟಿ ಮಾಡಲಾಗುತ್ತಿದೆ. ಇದು ಅ ದಿನಕ್ಕೆ ಸೀಮಿತವಾಗದೆ, ಭವಿಷ್ಯದ ದೃಷ್ಟಿಯಿಂದ ಪೋಷಣೆ ಮಾಡುವ ಹೊಣೆಗಾರಿಕೆ ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.

ಟ್ಯಾಂಕರ್‌ ನೀರು: ಅರಣ್ಯ ಇಲಾಖೆಯಿಂದ ಗ್ರಾಪಂ ಮೂಲಕ ಉಚಿತ ಸಸಿ ವಿತರಣೆ ಮಾಡಲಾಗಿದ್ದು, 60 ಎಕರೆಯಲ್ಲಿ ಹೊಂಗೆ, ಜಂಬು ನೇರಳೆ, ಬೇವಿನ ಸಸಿ, ಸೀತಾಫ‌ಲ, ಹಲವು ಸಸಿಗಳನ್ನು ನಾಟಿ ಮಾಡಿದ್ದು, ಇವುಗಳ ಬೆಳವಣಿಗೆ ಆಗುವವರೆಗೂ ಟ್ಯಾಂಕರ್‌ ಮೂಲಕ ನೀರು ಹರಿಸಿ ಪೋಷಣೆ ಮಾಡುತ್ತೇನೆ ಎಂದು ತಿಳಿಸಿದರು.

ಸರಿಯಾಗಿ ಮಳೆ ಸುರಿದರೆ ಸಸಿಗಳು ವಾರದೊಳಗೆ ಚೇತರಿಸಿಕೊಳ್ಳುತ್ತವೆ. 2 ದಿನಗಳಿಗೊಮ್ಮೆ ಟ್ಯಾಂಕರ್‌ ಮೂಲಕ ನೀರು ಹರಿಸಲಾಗುತ್ತಿದೆ. ಕುರಿ, ಮೇಕೆ ಇತರೆ ಪ್ರಾಣಿಗಳಿಂದ ಸಸಿಗಳನ್ನು ರಕ್ಷಿಸಲು ಮುಳ್ಳಿನ ಕೊಂಬೆಗಳನ್ನು ಸುತ್ತಲಾಗಿದೆ. ದಿನಕ್ಕೆ 4 ರಿಂದ 5 ಬಾರಿ ವೀಕ್ಷಣೆ ಮಾಡುತ್ತೇನೆ. 1100 ಸಸಿ ನಾಟಿ ಮಾಡಲು 5 ದಿನ ಸಮಯ ಬೇಕಾಯಿತು ಎಂದು ತಿಳಿಸಿದರು.

ಟ್ಯಾಂಕರ್‌ ನೀರಿಗೆ 250 ರಿಂದ 300 ರೂ. ತೆತ್ತು ಸಸಿಗೆ ಹರಿಸುತ್ತಿದ್ದು, 2 ತಿಂಗಳಲ್ಲಿ ಸಸಿಗಳು ಸಂಪೂರ್ಣವಾಗಿ ಅಂಟಿಕೊಂಡು ಚಿಗುರು ಬಿಡುತ್ತವೆ ಎಂದರು. ಈ ಸಂದರ್ಭದಲ್ಲಿ ಕೃಷ್ಣಾಪುರ ನಾರಾಯಣ ರೆಡ್ಡಿ, ಬೆಟ್ಕೂರು ಮುನಿಯಪ್ಪ, ಸುಬ್ರಮಣಿ, ಟ್ರ್ಯಾಕ್ಟರ್‌ ಚಾಲಕ ಅಂಬರೀಶ್‌ ಉಪಸ್ಥಿತರಿದ್ದು, ಗ್ರಾಪಂ ಸದಸ್ಯರಿಗೆ ಸಾಥ್‌ ನೀಡಿದ್ದಾರೆ. ಪಿಡಿಒ ಶ್ರೀನಿವಾಸರೆಡ್ಡಿ ಸಹಕಾರ ದಿಂದ ಹೆಚ್ಚು ಸಸಿಗಳನ್ನು ನೀಡಿದ್ದು, ಹೆಚ್ಚು ಸಸಿಗಳನ್ನು ನಾಟಿ ಮಾಡಲು ಸಹ ಕಾರವಾಯ್ತು. ಗ್ರಾಪಂನಲ್ಲಿ ಯಾರೂ ಇಷ್ಟೊಂದು ಸಸಿಗಳನ್ನು ಬೆಳೆಸಲು ಮುಂದಾಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.