8 ವರ್ಷವಾದ್ರೂ ಮುಗಿದಿಲ್ಲ ಕಾಮಗಾರಿ

ಹಾಸ್ಟೆಲ್ ಕಟ್ಟಡ ನನೆಗುದಿಗೆ ಬಿದ್ದು 5 ವರ್ಷವಾದ್ರೂ ಕೇಳ್ಳೋರಿಲ್ಲ

Team Udayavani, Jun 4, 2019, 7:48 AM IST

kolar-tdy-1..

ಮಾಸ್ತಿ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಕಾಲೇಜು ವಿದ್ಯಾರ್ಥಿ ನಿಲಯದ ಕಟ್ಟಡ. ಸುತ್ತಮುತ್ತ ಬೆಳೆದಿರುವ ಗಿಡಗಂಟಿ.

ಮಾಸ್ತಿ: ಗ್ರಾಮದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಕಾಲೇಜು ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಪ್ರಾರಂಭಿಸಿ 8 ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿ 5 ವರ್ಷದಿಂದ ನನೆಗುದಿಗೆ ಬಿದ್ದಿದ್ದು, ಅಸ್ತಿತ್ವವನ್ನೂ ಕಳೆದುಕೊಳ್ಳುತ್ತಿದೆ.

ಸದ್ಯ ಸ್ವಂತ ಕಟ್ಟಡವಿಲ್ಲದೆ ಸೌಲಭ್ಯಗಳ ಕೊರತೆ ನಡುವೆ 15 ವರ್ಷಗಳಿಂದ ವಿದ್ಯಾರ್ಥಿ ನಿಲಯವು ಬಾಡಿಗೆ ಕಟ್ಟಡದಲ್ಲಿ ನಡೆಯಸಲಾಗುತ್ತಿದೆ. ಸಂತೆ ಮೈದಾನದ ಬಳಿ ಸುಸಜ್ಜಿತ ಕಟ್ಟಡ ನಿರ್ಮಿಸಲು 2 ಕೋಟಿ ರೂ.ಗೆ ಕ್ರಿಯಾ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಸರ್ಕಾರ 2 ಹಂತದಲ್ಲಿ ಅನುದಾನ ಮಂಜೂರು ಮಾಡಿತ್ತಾದರೂ ಕಾಮಗಾರಿ ಪೂರ್ಣವಾಗಲೇ ಇಲ್ಲ.

ಆರಂಭದಿಂದಲೂ ಆಮೆ ವೇಗ: ಪ್ರಾರಂಭದಿಂದಲೂ ಮಂದಗತಿಯಲ್ಲಿ ಸಾಗುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತಗೊಂಡು 5 ವರ್ಷವಾಗಿದೆ. ಈ ಕಡೆ ಯಾರೂ ಗಮನ ಹರಿಸದ ಕಾರಣ, ಕಟ್ಟಡ ಒಳಗೆ, ಹೊರಗೆ ಗಿಡಗಂಟಿಗಳು ಬೆಳೆದು ವಿಷ ಜಂತುಗಳು ಸೇರಿಕೊಂಡಿವೆ. ಮದ್ಯ ವ್ಯಸನಿಗಳಿಗೆ ರಾತ್ರಿ ಬಾರ್‌ ಆಗಿದೆ. ಮದ್ಯದ ಬಾಟಲಿಗಳು ರಾಶಿ ಬದ್ದಿವೆ. ತ್ಯಾಜ್ಯ ಸುರಿದು ಅಲ್ಲೇ ಬಿಂಕಿ ಹಚ್ಚಿದ್ದರಿಂದ ಕಟ್ಟಿರುವ ಗೋಡೆಗಳು ಗುಣಮಟ್ಟ ಕಳೆದುಕೊಳ್ಳುವಂತಾಗಿದೆ.

ಊಟಕ್ಕೆ ಸೂಕ್ತ ಜಾಗವಿಲ್ಲ: ಕಟ್ಟಡ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಭೂಸೇನಾ ನಿಗಮದ ಎಂಜಿನಿಯರ್‌ಗಳು ಕಾಮಗಾರಿ ಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಿದ್ದು, ಅನುಮಾನಗಳಿಗೆ ಎಡೆ ಮಾಡಿದೆ. ವರ್ಷದಿಂದ ಗೋಡೌನ್‌ ಮಾದರಿಯಲ್ಲಿರುವ ಚಿಕ್ಕ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿ ನಿಲಯ ನಡೆಯುತ್ತಿದೆ. ವಿದ್ಯಾರ್ಥಿಗಳು ಆರಾಮವಾಗಿ ಕೂತು ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಿಲಯದ ವಿದ್ಯಾರ್ಥಿಗಳು ಉಳಿದುಕೊಳ್ಳಲು ಗ್ರಾಮದ ಲೋಕೊಪಯೋಗಿ ಇಲಾಖೆಗೆ ಸೇರಿದ ವಸತಿ ಗೃಹಗಳಲ್ಲಿ ಅನುಕೂಲ ಕಲ್ಪಿಸಲಾಗಿದೆ.

2 ವರ್ಷಗಳ ಹಿಂದೆ ಜಿಪಂ ಸಿಇಒ ಆಗಿದ್ದ ಕಾವೇರಿ ಹಾಗೂ ಲತಾಕುಮಾರಿ ಸಹ ಸ್ಥಗಿತಗೊಂಡಿದ್ದ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಎಂಜಿನಿಯರ್‌ಗಳಿಂದ ಮಾಹಿತಿ ಪಡೆದು, ಶೀಘ್ರ ಕಾಮಗಾರಿ ಪ್ರಾರಂಭಿಸುವ ಭರವಸೆ ನೀಡಿದ್ದರೂ ಪ್ರಯೋಜನವಾಗಿಲ್ಲ. 6 ತಿಂಗಳ ಹಿಂದೆ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ಪರಿಶೀಲಿಸಿ, ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಕಾಮಗಾರಿ ಪೂರ್ಣಗೊಳಿಸಲು ಮುಂದಿನ ಕ್ರಮ ಕೈಗೊಂಡು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿ ಸಲಾಗುವುದು ಎಂದು ಭರವಸೆ ನೀಡಿದ್ದರು.

ಗೋಳು ಕೇಳ್ಳೋರಿಲ್ಲ: ಪ್ರಸಕ್ತ ವರ್ಷದಿಂದ ಕಾಲೇಜು ಪ್ರಾರಂಭವಾಗುತ್ತಿದ್ದರೂ, ವಿದ್ಯಾರ್ಥಿ ನಿಲಯದ ಕಾಮಗಾರಿ ಮಾತ್ರ ಪ್ರಾರಂಭವಾಗದೇ, ಪರ್ಯಾಯ ವ್ಯವಸ್ಥೆಗಾಗಿ ಜಿಲ್ಲಾ ಹಾಗೂ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಬಾಡಿಗೆ ಕಟ್ಟಡಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಾಸ್ತಿಯಲ್ಲಿ ವ್ಯಾಸಂಗ ಮಾಡುವ ದಲಿತರ ವಿದ್ಯಾರ್ಥಿಗಳಿಗೆ ವಸತಿ ನಿಲಯವಿದ್ದರೂ ಸ್ವಂತ ಕಟ್ಟಡವಿಲ್ಲದೆ, ಬಾಡಿಗೆ ಕಟ್ಟಡದಲ್ಲೇ ವ್ಯಾಸಂಗ ಮಾಡುವಂತಾಗಿದೆ. ವಿದ್ಯಾರ್ಥಿಗಳ ಗೋಳು ಕೇಳುವವರೇ ಇಲ್ಲದಂತಾಗಿದೆ.

ಸ್ಥಳೀಯ ಜನಪ್ರತಿನಿಧಿಗಳು ಇಚ್ಛಾಶಕ್ತಿ ಕೊರತೆಯೋ, ಅಧಿಕಾರಿಗಳ ನಿರ್ಲಕ್ಷ್ಯವೋ ತಿಳಿಯುತ್ತಿಲ್ಲ. ಶಾಸಕ ಕೆ.ವೈ.ನಂಜೇಗೌಡ, ಸಂಸದ ಎಸ್‌.ಮುನಿಸ್ವಾಮಿ, ಜಿಲ್ಲಾಡಳಿತ ಇತ್ತ ಗಮನ ಹರಿಸಿ ಆದಷ್ಟು ಬೇಗ ಅರ್ಧಕ್ಕೆ ಸ್ಥಗಿತಗೊಂಡಿರುವ ಕಾಲೇಜು ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕಾಗಿದೆ.

● ಎಂ.ಮೂರ್ತಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.