ಕೋಲಾರ ಬಳಿ ಕಾರು ಮರಕ್ಕೆ ಢಿಕ್ಕಿಯಾಗಿ ಇಬ್ಬರ ಸಾವು – ಮೂವರಿಗೆ ಗಾಯ
Team Udayavani, Sep 11, 2022, 6:12 PM IST
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೋಲಾರ-ಬೇತಮಂಗಲ ರಸ್ತೆಯ ಶಾಪೂರು ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ನಡೆದಿದೆ.
ತಮಿಳುನಾಡಿನ ಚೆನ್ನೈನವರೆನ್ನಲಾದ ವಿಮಲ್ (27), ಶರೀನ (22) ಮೃತಪಟ್ಟವರಾಗಿದ್ದು, ಕಾರಿನಲ್ಲಿದ್ದ ಹರ್ಷಿತ, ಡೇವಿಡ್, ವಿಮೋನಿಯಲ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದು, ಕೋಲಾರ ಹೊರವಲಯದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶರೀನ, ಹರ್ಷಿತ, ಡೇವಿಡ್, ವಿಮೋನಿಯಲ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಚೆನ್ನೈನಿಂದ ಕಾರು ಬಾಡಿಗೆಗೆ ಪಡೆದು ಬೆಂಗಳೂರಿನತ್ತ ಸಾಗುತ್ತಿದ್ದರು. ಈ ವೇಳೆ ಚಾಲಕ ವಿಮಲ್ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಢಿಕ್ಕಿ ಹೊಡೆದಿದೆ.
ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ವಿಮಲ್, ಶರೀನಾರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೋಲಾರ ಗ್ರಾಮಾಂತರ ಠಾಣೆ ಸಿಬ್ಬಂದಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ
ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ
ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ
ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ