Udayavni Special

ಅಕ್ರಮ ಇ ಖಾತೆ ಮಾಡಿದರೆ ಪಿಡಿಒ ವಿರುದ್ಧ ಶಿಸ್ತುಕ್ರಮ

Team Udayavani, Oct 25, 2020, 5:40 PM IST

kolar-tdy-1

ಬಂಗಾರಪೇಟೆ: ಗ್ರಾಪಂಗಳ ವ್ಯಾಪ್ತಿಯಲ್ಲಿ ಲೇಔಟ್‌ಗಳು ಮಾಡುವ ನೆಪದಲ್ಲಿ ಸರ್ಕಾರದ ಖರಾಬು, ಗುಂಡುತೋಪು, ಕೆರೆ, ಕುಂಟೆಗಳು ಸೇರಿದಂತೆ ಸರ್ಕಾರದ ಭೂ ಕಾಯ್ದೆ ವಿರುದ್ಧವಾಗಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಅಕ್ರಮ ಇ-ಸ್ವತ್ತು ಖಾತೆಗಳನ್ನು ಮಾಡಿದರೆ, ರದ್ದುಪಡಿಸಿ ಅಂತಹ ಗ್ರಾಪಂಗಳ ಪಿಡಿಒ ಸೇರಿದಂತೆ ಇಂತಹ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಎಂ.ಆರ್‌.ರವಿಕುಮಾರ್‌ ಎಚ್ಚರಿಸಿದ್ದಾರೆ.

ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಜಿಪಂ ವ್ಯಾಪ್ತಿಯ ವಿವಿಧ ಇಲಾಖೆಗಳ ಅಧಿಕಾರಿಗಳ ಹಾಗೂ ಗ್ರಾಪಂ ಪಿಡಿಒ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಇ-ಸ್ವತ್ತು ಖಾತೆಗೆ ಸಂಬಂಧಪಟ್ಟಂತೆ ಸಾಕಷ್ಟು ದೂರುಗಳು ಬರುತ್ತಿವೆ ಎಂದರು.

ದಾಖಲೆ ಪರಿಶೀಲನೆ: ಗ್ರಾಪಂ ಪಿಡಿಒಗಳು ಇ-ಸ್ವತ್ತು ಮಾಡುವ ಮುಂಚೆ ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿ ಆ ನಂತರವೇ ಇ-ಸ್ವತ್ತು ಮಾಡುವ ಕೆಲಸ ಮಾಡಬೇಕಾಗಿರುತ್ತದೆ. ಇಲ್ಲವಾದಲ್ಲಿ ಯಾವುದೇ ತಪ್ಪು ದಾಖಲೆಗಳಿಂದಇ-ಸ್ವತ್ತು ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಗಮನಕ್ಕೆ ತಂದರೆ ಅನುಮತಿ: ಗ್ರಾಪಂಗಳಲ್ಲಿ ಸಾಕಷ್ಟು ಮೂಲಭೂತ ಸಮಸ್ಯೆಗಳು ಎದುರಾಗಲಿವೆ. ಕುಡಿಯುವ ನೀರಿನ, ವಿದ್ಯುತ್‌ ದೀಪ, ಚರಂಡಿಗಳ ಸ್ವತ್ಛತೆ, ರಸ್ತೆ ಅಭಿವೃದ್ಧಿ ಸೇರಿದಂತೆ ಸಾಕಷ್ಟು ದೂರುಗಳು ಪ್ರತಿದಿನ ಬರುತ್ತಿವೆ. ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆ ಬಂದಲ್ಲಿ ತಕ್ಷಣವೇ ನನ್ನ ಗಮನಕ್ಕೆ ತಾಪಂ ಇಒ ಮೂಲಕ ತಂದಲ್ಲಿ ಅನುಮತಿ ನೀಡಲಾಗುವುದು ಎಂದರು.

ಗ್ರಾಪಂಗಳಲ್ಲಿ ಸರ್ಕಾರದ ಯೋಜನೆಗಳಾದ ನರೇಗಾ, ಸ್ವಚ್ಛ ಭಾರತ್‌, ಅಂಗವಿಕಲರ ಅಭಿವೃದ್ಧಿ ಕಾರ್ಯಕ್ರಮಗಳು ಸೇರಿದಂತೆ ಸಕಾಲಕ್ಕೆ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಸದ್ಯಕ್ಕೆ ಕೋವಿಡ್ ಸಮಸ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಸಂಪೂರ್ಣವಾಗಿ ಮುಚ್ಚಿರುವುದರಿಂದ ಎಲ್ಲಾ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುತ್ತಿರುವುದರಿಂದ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ಎಂದರು.

ಜಿಪಂ ಉಪ ಕಾರ್ಯದರ್ಶಿ ಆರ್‌.ಸಂಜೀವಪ್ಪ, ಜಿಪಂ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಸಹಾಯಕ ಯೋಜನಾ ನಿರ್ದೇಶಕ ಗೋವಿಂದೇಗೌಡ, ವಸಂತ್‌ಕುಮಾರ್‌, ತಾಪಂ ಇಒ ಎನ್‌.ವೆಂಕಟೇಶಪ್ಪ, ಪಂಚಾಯತ್‌ ರಾಜ್‌ಇಲಾಖೆ ಎಇಇ ಹೆಚ್‌.ಡಿ.ಶೇಷಾದ್ರಿ, ಲೋಕೋಪಯೋಗಿ ಇಲಾಖೆ ಎಇಇ ಎಂ.ರವಿ, ರೇಷ್ಮೆ ಸಹಾಯಕ ನಿರ್ದೇಶಕ ಎಸ್‌.ಎನ್‌. ಶ್ರೀನಿವಾಸ್‌, ಕೃಷಿ ಇಲಾಖೆ ಎಡಿ ಆಸೀಫ್ವುಲ್ಲಾ ಖಾನ್‌, ತೋಟಗಾರಿಕೆ ಇಲಾಖೆ ಎಡಿ ಶಿವಾರೆಡ್ಡಿ ಹಾಜರಿದ್ದರು.

ಟಾಪ್ ನ್ಯೂಸ್

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

fhfcghftyt

ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  

Dr. Death of Geeta no more

ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

bhatkala news

ಕಾಲ್ನಡಿಗೆಯಲ್ಲಿ ಪ್ರಪಂಚ ಸುತ್ತಲು ಹೊರಟ ರೋಹನ್ ಅಗರ್‍ವಾಲ್

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.