ಡೊನೇಷನ್‌, ಫೀ ಇಲ್ಲದೆ ಆಂಗ್ಲ ತರಗತಿಗೆ ಪ್ರವೇಶ!

ಜಿಲ್ಲೆಯ 24 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆ • ಇಂದು ದಾಖಲಾತಿಗೆ ಚಾಲನೆ

Team Udayavani, May 29, 2019, 12:30 PM IST

kolar-tdy-1..

ಕೋಲಾರ ತಾಲೂಕಿನ ನರಸಾಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಜಿಲ್ಲಾ ಮಟ್ಟದ ಆಂಗ್ಲ ಮಾಧ್ಯಮ ಬೋಧನೆ ತರಗತಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ.

ಕೋಲಾರ: ಪರ-ವಿರೋಧ ಅಭಿಪ್ರಾಯಗಳ ನಡುವೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆ ತರಗತಿಗಳ ಆರಂಭಿಸಲು ಶಿಕ್ಷಣ ಇಲಾಖೆಯು ಸಜ್ಜಾಗಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗುವ ಮೇ 29ರಿಂದಲೇ ಆಂಗ್ಲ ಮಾಧ್ಯಮ ಬೋಧನೆ ತರಗತಿಗಳಿಗೂ ದಾಖಲಾತಿ ಆರಂಭಿಸಲಾಗುತ್ತಿದೆ. ಜಿಲ್ಲೆಯ 24 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳೆಂದು ಗುರುತಿಸಿ ದಾಖಲಾತಿ ಪ್ರಕ್ರಿಯೆ ವಿದ್ಯುಕ್ತವಾಗಿ ಚಾಲನೆ ನೀಡಲು ಸಿದ್ಧತೆ ನಡೆದಿದೆ.

ನರಸಾಪುರದಲ್ಲಿ ಚಾಲನೆ: ಕೋಲಾರ ತಾಲೂಕಿನ ನರಸಾಪುರ ಪಬ್ಲಿಕ್‌ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಬೋಧನೆ ತರಗತಿಗಳನ್ನು ವಿದ್ಯುಕ್ತವಾಗಿ ಉದ್ಘಾಟಿಸಲು ಶಿಕ್ಷಣ ಇಲಾಖೆಯು ಸಿದ್ಧತೆ ನಡೆಸಿದೆ. ಜಿಪಂ ಸಿಇಒ ಜೆ.ಜಗದೀಶ್‌ ಸಾಂಕೇತಿಕವಾಗಿ ಮಗುವನ್ನು ಆಂಗ್ಲ ಮಾಧ್ಯಮಕ್ಕೆ ದಾಖಲಾತಿ ಮಾಡಿಕೊಳ್ಳುವ ಮೂಲಕ ಉದ್ಘಾಟಿಸಲಿದ್ದಾರೆ.

ನರಸಾಪುರದಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಸಲುವಾಗಿ ಈಗಾಗಲೇ ಪ್ರಾಂಶುಪಾಲ ಶಿವಪ್ರಸಾದ್‌ ನೇತೃತ್ವದಲ್ಲಿ ಶಿಕ್ಷಕರ ತಂಡವು ಸುತ್ತಮುತ್ತಲ ಗ್ರಾಮಗಳಲ್ಲಿ ಆಂದೋಲನ ನಡೆಸಿ ಆಂಗ್ಲ ಮಾಧ್ಯಮದ ಎಲ್ಕೆಜಿ ಮತ್ತು ಒಂದನೇ ತರಗತಿಗೆ ಮಕ್ಕಳನ್ನು ಗುರುತಿಸಿದ್ದಾರೆ. ಈ ಜಾಥಾದಲ್ಲಿ ಪೋಷಕರೇ ಪಾಲ್ಗೊಂಡು ತಮ್ಮ ಮಕ್ಕಳನ್ನು ಸೇರಿಸಲು ಮುಂದೆ ಬಂದಿರುವುದು ವಿಶೇಷವಾಗಿದೆ. ಮೊದಲ ದಿನವೇ ದಾಖಲಾದ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ. ಶಾಲೆಯನ್ನು ರೋಟರಿ ಇಂಟರ್‌ನ್ಯಾಷನಲ್ ಸುಣ್ಣ ಬಣ್ಣದಿಂದ ಅಲಂಕರಿಸಿದೆ.

ಯಾವ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ: ಕೋಲಾರ ಜಿಲ್ಲೆಯ ಪ್ರತಿ ತಾಲೂಕಿಗೂ ನಾಲ್ಕು ಶಾಲೆಗಳಂತೆ ಗುರುತಿಸಿ ಆರು ತಾಲೂಕುಗಳಿಂದ ಒಟ್ಟು 24 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಯಾವ ಶಾಲೆಯಲ್ಲಿ ಒಂದರಿಂದ 12ನೇ ತರಗತಿಯವರೆಗೂ ವ್ಯಾಸಂಗ ಮಾಡಲು ಅವಕಾಶವಿದೆಯೋ ಅಂತಹ ಶಾಲೆಗಳನ್ನು ಆಂಗ್ಲ ಮಾಧ್ಯಮ ಬೋಧನೆಗೆ ಆಯ್ಕೆ ಮಾಡಲಾಗಿದೆ.

ಶಿಕ್ಷಣ ಇಲಾಖೆ ಸಿದ್ಧತೆಗಳೇನು?: ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಪೂರ್ವಭಾವಿ ಸಿದ್ಧತೆ ನಡೆಸಿದೆ. ಪ್ರತಿ ಶಾಲೆಗೂ ಇಬ್ಬರು ಶಿಕ್ಷಕರಂತೆ 48 ಶಿಕ್ಷಕರಿಗೆ ಆಂಗ್ಲ ಮಾಧ್ಯಮ ಬೋಧನೆ ಕುರಿತಂತೆ ವಿಶೇಷ ತರಬೇತಿ ನೀಡಲಾಗಿದೆ. ಆರಂಭದಲ್ಲಿ ಕೇವಲ ಎಲ್ಕೆಜಿ ಮತ್ತು ಒಂದನೇ ತರಗತಿಗೆ ಮಾತ್ರವೇ ಆಂಗ್ಲ ಮಾಧ್ಯಮ ಬೋಧನೆ ಆರಂಭಿಸಲಾಗುತ್ತಿದ್ದು, ಆ ನಂತರ ವರ್ಷದಿಂದ ವರ್ಷಕ್ಕೆ ತರಗತಿ ಹೆಚ್ಚಿಸಲಾಗುತ್ತದೆ.

ಪೋಷಕರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ: ಆಂಗ್ಲ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸುವಂತೆ ಪೋಷಕರಿಗೆ ಮಾಹಿತಿ ನೀಡುವ ಸಲುವಾಗಿ ಆಯಾ ಶಾಲಾ ವ್ಯಾಪ್ತಿಯಲ್ಲಿ ಜಾಥಾಗಳನ್ನು ನಡೆಸಲಾಗಿದೆ. ಶಾಲೆಯಲ್ಲಿ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ಕರಪತ್ರಗಳನ್ನು ಮನೆ ಮನೆಗೂ ಹಂಚಲಾಗಿದೆ. ಪೋಷಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಡಿಡಿಪಿಐ ಕೆ.ರತ್ನಯ್ಯ ವಿವರಿಸುತ್ತಾರೆ.

ಸೌಲಭ್ಯಗಳೇನು?: ಆಂಗ್ಲ ಮಾಧ್ಯಮ ತರಗತಿಗಳಿಗೆ ಸದ್ಯಕ್ಕೆ ವಿಶೇಷ ಸೌಲಭ್ಯಗಳೇನು ಕಲ್ಪಿಸಲಾಗುತ್ತಿಲ್ಲ. ಆದರೂ, ಆಂಗ್ಲ ಮಾಧ್ಯಮ ಬೋಧನೆಯ ಪಠ್ಯ ಪುಸ್ತಕಗಳನ್ನು ಒಂದು ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳಾದ ಸಮವಸ್ತ್ರ, ಬಿಸಿಯೂಟ, ಪಠ್ಯಪುಸ್ತಕಗಳು ಸಂಪೂರ್ಣ ಉಚಿತವಾಗಿಯೇ ಸಿಗಲಿದೆ. ಆಂಗ್ಲ ಮಾಧ್ಯಮ ಬೋಧನೆಗೆ ಯಾವುದೇ ರೀತಿಯ ಪ್ರತ್ಯೇಕ ಪ್ರವೇಶಾತಿ ಶುಲ್ಕಗಳನ್ನು ಮತ್ತು ಡೊನೇಷನ್‌ ವಿಧಿಸದೆ ಸಂಪೂರ್ಣ ಉಚಿತವಾಗಿಯೇ ಶಿಕ್ಷಣ ನೀಡಲಾಗುವುದು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಸುಮಾರು 94 ಸಾವಿರ ಮಕ್ಕಳಿಗೆ ಸ್ಯಾಮಸಂಗ್‌ ಕಂಪನಿಯಿಂದ ಉಚಿತ ನೋಟ್ಪುಸ್ತಕಗಳನ್ನು ವಿತರಿಸಲಾಗುತ್ತಿದ್ದು, ಇದು ಆಂಗ್ಲ ಮಾಧ್ಯಮ ಮಕ್ಕಳಿಗೂ ಸಿಗಲಿದೆ.

ಎಷ್ಟು ಮಕ್ಕಳಿಗೆ ಪ್ರವೇಶ: ಆರಂಭಿಕವಾಗಿ ಎಲ್ಕೆಜಿಗೆ 30 ಮಕ್ಕಳಿಗೆ ಮತ್ತು ಒಂದನೇ ತರಗತಿಗೆ 30 ಮಕ್ಕಳಿಗೆ ಮಾತ್ರವೇ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಇದನ್ನು ಮೀರಿ ಮಕ್ಕಳು ಆಂಗ್ಲ ಮಾಧ್ಯಮಕ್ಕೆ ಸೇರಲು ಬಂದರೆ ಅಂತ ಶಾಲೆಗಳ ಮುಖ್ಯೋಪಾಧ್ಯಾಯರು ಆಂಗ್ಲ ಮಾಧ್ಯಮಕ್ಕೆ ಪ್ರಸ್ತಾಪನೆ ಕಳುಹಿಸಬಹುದಾಗಿದೆ. ಇದನ್ನು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳ ಗಮನಕ್ಕೆ ತಂದು ಪರವಾನಗಿ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ 24 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗುತ್ತಿದ್ದು, ಪ್ರತಿ ಶಾಲೆಗೂ 30 ರಂತೆ ತಲಾ 720 ಮಂದಿ ಒಂದನೇ ತರಗತಿ, ಎಲ್ಕೆಜಿಗೂ ಪ್ರವೇಶ ಪಡೆಯಲು ಅವಕಾಶವಿದೆ.

ಅಭೂತ ಪೂರ್ವ ಸ್ವಾಗತ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಂಗ್ಲ ಮಾಧ್ಯಮ ತರಗತಿಗಳು ಸಹಕಾರಿಯಾಗಲಿವೆ ಎಂಬ ಭಾವನೆ ಶಿಕ್ಷಕರವಲಯದಲ್ಲಿ ಮೂಡಿದೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭವಾಗುತ್ತಿರುವುದು ಈ ಭಾಗದ ಖಾಸಗಿ ಶಾಲೆಗಳ ದಾಖಲಾತಿ ಮೇಲೆ ಪರಿಣಾಮ ಬೀರುವುದರಿಂದ ಪೊಷಕರಿಂದ ವಿಪರೀತ ಡೊನೇಷನ್‌ ವಸೂಲು ಮಾಡುತ್ತಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿಗಳಲ್ಲಿ ಆತಂಕಕ್ಕೂ ಕಾರಣವಾಗಿದೆ. ಒಟ್ಟಾರೆ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆ ಆರಂಭವಾಗುತ್ತಿರುವುದು ಕೆಲವರ ವಿರೋಧದ ನಡುವೆಯೂ ಪೋಷಕರ ವಲಯದಲ್ಲಿ ಅಭೂತಪೂರ್ವ ಸ್ವಾಗತ ಕಂಡು ಬಂದಿದೆ.

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.