Udayavni Special

ನೀರಿನ ಸೌಲಭ್ಯವಿಲ್ಲದೆ ಕೃಷಿ ಚಟುವಟಿಕೆ ಕುಂಠಿತ

ಕೆ.ಸಿ. ವ್ಯಾಲಿ ನೀರು ತಾಲೂಕಿನ ಕೆರೆಗಳಿಗೆ ತುಂಬಿಸಿ • ಸಮಗ್ರ ಕೃಷಿ ಅಭಿಯಾನದಲ್ಲಿ ಜಿಪಂ ಸದಸ್ಯೆ ಗೀತಮ್ಮ ಮನವಿ

Team Udayavani, Jul 14, 2019, 12:19 PM IST

kolar-tdy-1..

ಮಾಲೂರು ಪಟ್ಟಣದಲ್ಲಿ ಕೃಷಿ ಇಲಾಖೆ ವಿವಿಧ ಇಲಾಖೆಗಳು ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಗೀತಮ್ಮ, ಎಚ್.ವಿ.ಶ್ರೀನಿವಾಸ್‌, ಶ್ರೀನಾಥ್‌, ಭೌವ್ಯರಾಣಿ, ಮುನಿರಾಜು ಮತ್ತಿತರರು ಇದ್ದರು.

ಮಾಲೂರು: ಸಕಾಲದಲ್ಲಿ ಮಳೆ ಬೀಳದೆ, ಅಂತರ್ಜಲ ಕುಸಿತದಿಂದ ತಾಲೂಕಿನಲ್ಲಿ ಕೃಷಿ ಚಟುವಟಿಕೆ ದಿನದಿಂದ ದಿನಕ್ಕೆ ಕುಂಠಿತಗೊಳ್ಳುತ್ತಿದೆ ಎಂದು ಜಿಪಂ ಸದಸ್ಯೆ ಗೀತಮ್ಮ ವೆಂಕಟೇಶಗೌಡ ತಿಳಿಸಿದರು.

ಪಟ್ಟಣದ ಕಾಂಗ್ರೆಸ್‌ ಮೈದಾನದಲ್ಲಿ ತಾಲೂಕು ಕೃಷಿ ಇಲಾಖೆ, ಜಿಪಂ ಹಾಗೂ ತಾಲೂಕು ಪಂಚಾಯ್ತಿ ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಸಮರ್ಪಕ ಮಳೆಯಾಗದೇ, ಕೃಷಿಗಾಗಿ ಕೊಳವೆಬಾವಿಗಳನ್ನೇ ನಂಬಿಕೊಂಡಿದ್ದ ರೈತ ಮಳೆ ಕೊರತೆಯಿಂದ ಅಂತರ್ಜಲ ಬತ್ತಿ ಹೋಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾನೆ. ನೀರಾವರಿ ಸೌಲಭ್ಯಗಳಿಲ್ಲದೇ ಕೃಷಿ ಚಟುವಟಿಕೆಗಳು ಸಂಪೂರ್ಣ ಕುಂಠಿತವಾಗುತ್ತಿವೆ ಎಂದು ವಿಷಾದಿಸಿದರು.

ಆಧುನಿಕ ಪದ್ಧತಿ ಅಳವಡಿಸಿಕೊಳ್ಳಿ: ಸಹಾಯಕ ಕೃಷಿ ನಿರ್ದೇಶಕಿ ಜಿ.ಆರ್‌.ಭೌವ್ಯರಾಣಿ ಮಾತನಾಡಿ, ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಅಭಿಯಾನದಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ನೀಡುತ್ತಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳುವ ಜೊತೆಗೆ ಅಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡಲ್ಲಿ ಕೃಷಿಯನ್ನು ಹೆಚ್ಚು ಲಾಭದಾಯವನ್ನಾಗಿಸಲು ಸಾಧ್ಯವಿದೆ ಎಂದರು.

ರಿಯಾಯ್ತಿ ದರದಲ್ಲಿ ಸೌಲಭ್ಯ: ಕೃಷಿ ಅಭಿಯಾನದಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳು ರೈತರ ಮನೆ ಬಾಗಿಲಿಗೆ ತೆರಳಿ ಕಾರ್ಯಕ್ರಮವನ್ನು ಪರಿಚಯಿಸುವ ಜೊತೆಗೆ ಅಗತ್ಯ ಮಾಹಿತಿ ನೀಡಬೇಕಿದೆ. ಅದರಂತೆ ಬಿತ್ತನೆ ಬೀಜಗಳ ದಾಸ್ತನು ಮಾಡಿರುವ ಕೃಷಿ ಇಲಾಖೆಯು ರಾಗಿ, ಅಲಸಂದೆ, ತೊಗರಿ, ಕಡಲೆಬೀಜ, ಕೃಷಿ ಯಂತ್ರಗಳು, ಟಾರ್ಪಲಿನ್‌ಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಶೇ.75ರ ರಿಯಾಯ್ತಿ, ಸಾಮಾನ್ಯ ವರ್ಗ ರೈತರಿಗೆ ಶೇ.50 ರಿಯಾಯ್ತಿ ದರದಲ್ಲಿ ನೀಡುತ್ತಿದೆ ಎಂದು ಹೇಳಿದರು. ಹನಿ ನೀರಾವರಿ, ಪಾಲಿಹೌಸ್‌, ಕೃಷಿ ಹೊಂಡ, ರಾಗಿ ಒಕ್ಕಣೆ ಮಿಷನ್‌ಗಳನ್ನು ನೀಡುತ್ತಿರುವ ಕೃಷಿ ಇಲಾಖೆ, ರೈತರಿಗೆ ಕೃಷಿ ಯಂತ್ರಗಳನ್ನು ಬಾಡಿಗೆ ಆಧಾರದ ಮೇಲೂ ನೀಡುತ್ತಿದೆ. ರೈತರ ತಮ್ಮ ಬೆಳೆಗಳಿಗೆ ಅಗತ್ಯವಾಗಿರುವ ವಿಮಾ ಸೌಲಭ್ಯ ಪಡೆಯಲು ಅವಕಾಶವಿದೆ ಎಂದರು.

ರೈತರಿಗೆ ಪರಿಹಾರ: ಸರ್ಕಾರದ ಅತ್ಮ ಯೋಜನೆಯಡಿಯಲ್ಲಿ ಹಾವು ಕಚ್ಚಿ ರೈತ ಮೃತನಾದರೆ 2 ಲಕ್ಷ ರೂ. ಪರಿಹಾರ ಮತ್ತು ಹುಲ್ಲಿನ ಬಣವೆ ಸುಟ್ಟು ಹೋದಲ್ಲಿ 20 ಸಾವಿರ ರೂ. ಪರಿಹಾರ ಪಡೆಯಬಹುದು. ಮಣ್ಣು ಪರೀಕ್ಷೆ ನಡೆಸಿ, ಲಘು ಪೋಷಕಾಂಶಗಳಾದ ಎರೆಗೊಬ್ಬರ, ಜಿಪ್ಸಂ ಮಿಶ್ರಣವನ್ನು ರಿಯಾಯ್ತಿ ದರದಲ್ಲಿ ರೈತರಿಗೆ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

14ರವರೆಗೂ ಬೆಳೆ ವಿಮೆ ಮಾಡಿಸಿ: ಮಣ್ಣು ಅಭಿವೃದ್ಧಿ ಯೋಜನೆಯಡಿಯಲ್ಲಿ ಚನ್ನಕಲ್ಲು ಗ್ರಾಮವನ್ನು ಅಯ್ಕೆ ಮಾಡಿದ್ದು, ರೈತರ ಕೃಷಿ ಭೂಮಿಯಲ್ಲಿನ ಮಣ್ಣು ಪರೀಕ್ಷೆ ನಡೆಸಿ ಚೀಟಿ ನೀಡುತ್ತಿರುವುದಾಗಿ ತಿಳಿಸಿದ ಅವರು, ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆಗಳಿಗೆ ವಿಮೆ ಮಾಡಿಸಲು ಜ.14ರವರೆಗೂ ಅವಕಾಶ ಇದೆ, ರೈತ ಸಿರಿ ಯೋಜನೆಯಡಿಯಲ್ಲಿಯೂ ರೈತರು ಅನುಕೂಲ ಪಡೆಯಬಹುದಾಗಿದೆ ಎಂದು ವಿವರಿಸಿದರು. ಜಿಪಂ ಸದಸ್ಯ ಎಚ್.ವಿ.ಶ್ರೀನಿವಾಸ್‌, ತಾಪಂ ಸದಸ್ಯ ಶ್ರೀನಾಥ್‌, ಎಪಿಎಂಸಿ ನಿರ್ದೇಶಕರಾದ ಸುರೇಶ್‌, ಎಂ.ಪಿ.ಚಂದ್ರಶೇಖರ್‌, ಪಟ್ಲಪ್ಪ, ಕೃಷಿ ವಿಜ್ಞಾನಿ ಡಾ . ನಾಗರಾಜು, ಡಾ.ಅಂಬಿಕಾ, ಜಿಪಂ ಮಾಜಿ ಸದಸ್ಯ ಎಚ್.ಹನುಮಂತಪ್ಪ, ನಾರಾಯಣ ಗೌಡ, ರತ್ನಮ್ಮ, ವೆಂಕಟೇಶಪ್ಪ, ಬೈರೇಗೌಡ, ಸಹಾಯಕ ಕೃಷಿ ಅಧಿಕಾರಿ ಮುನಿರಾಜು, ಪ್ರದೀಪ್‌ ಮತ್ತಿತರರು ಇದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

IPLಪಂಜಾಬ್‌ಗ ಸೋಲಿನ ಪಂಚ್‌ ನೀಡಿದ ರಾಜಸ್ಥಾನ್‌

ಪಂಜಾಬ್‌ಗ ಸೋಲಿನ ಪಂಚ್‌ ನೀಡಿದ ರಾಜಸ್ಥಾನ್‌

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರ: ಸುಧಾಕರ್

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಯುವಕನ ಆತ್ಮಹತ್ಯೆ- ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿರುವ ಶಂಕೆ

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಪಿಎಂ ಕಿಸಾನ್‌ ಯೋಜನೆ : ನಕಲಿ ಫಲಾನುಭವಿಗಳಿಗೆ ಜಿಲ್ಲಾಡಳಿತ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಣಾತ್ಮಕ ಶಿಕ್ಷಣಕ್ಕೆ ಸರ್ಕಾರಿ ಶಾಲೆ ಯಶಸ್ಸು

ಗುಣಾತ್ಮಕ ಶಿಕ್ಷಣಕ್ಕೆ ಸರ್ಕಾರಿ ಶಾಲೆ ಯಶಸ್ಸು

ಅಮ್ಮೇರಹಳ್ಳಿ ಕೆರೆ ಕಟ್ಟೆ ಬಿರುಕು ದೂರು: ಜಿಲ್ಲಾಧಿಕಾರಿ ಭೇಟಿ

ಅಮ್ಮೇರಹಳ್ಳಿ ಕೆರೆ ಕಟ್ಟೆ ಬಿರುಕು ದೂರು: ಜಿಲ್ಲಾಧಿಕಾರಿ ಭೇಟಿ

ಪಿಕಾರ್ಡ್‌ ಬ್ಯಾಂಕ್‌ನಿಂದ 1.46 ಕೋಟಿ ಸಾಲ ವಿತರಣೆ

ಪಿಕಾರ್ಡ್‌ ಬ್ಯಾಂಕ್‌ನಿಂದ 1.46 ಕೋಟಿ ಸಾಲ ವಿತರಣೆ

kolar-tdy-1

ಒಂದೇ ದಿನ 5 ಸಾವಿರ ರಾಸುಗಳಿಗೆ ಕಾಲುಬಾಯಿ ಲಸಿಕೆ

ಗ್ರಾಹಕರ ಮನೆ ಬಾಗಿಲಿಗೆ ಡಿಸಿಸಿ ಬ್ಯಾಂಕ್‌ ಸೇವೆ

ಗ್ರಾಹಕರ ಮನೆ ಬಾಗಿಲಿಗೆ ಡಿಸಿಸಿ ಬ್ಯಾಂಕ್‌ ಸೇವೆ

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

MLR

ಕುಂಟುತ್ತಾ ಸಾಗುತ್ತಿದೆ ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕಾಮಗಾರಿ

Vote

ಪಂಚಾಯತ್‌ ಚುನಾವಣೆಗೆ ತಾಲೀಮು

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಪೇಜಾವರ ಶ್ರೀಗಳು ಇಂದು ಅಯೋಧ್ಯೆಗೆ

ಹುಲಿ ಹೆಜ್ಜೆ ಗುರುತು ಗ್ರಾಮಸ್ಥರು ಆತಂಕ

ಹುಲಿ ಹೆಜ್ಜೆ ಗುರುತು ಗ್ರಾಮಸ್ಥರು ಆತಂಕ

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

ಮುಂದೂಡಲ್ಪಟ್ಟಿದ್ದ ಸಪ್ತಪದಿಗೆ ಕೂಡಿಬಂತು ಮುಹೂರ್ತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.