ಅರಸು ಜಯಂತಿ ಅರ್ಥಪೂರ್ಣ ಆಚರಣೆ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಂಜುನಾಥ್‌ ನಿರ್ಧಾರ • 20ರಂದು ಜಯಂತಿ ಕಾರ್ಯಕ್ರಮ

Team Udayavani, Aug 7, 2019, 3:07 PM IST

ಕೋಲಾರದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ , ಅರಸು ಜಯಂತಿ ಪೂರ್ವಭಾವಿ ಸಭೆ ನಡೆಸಿದರು.

ಕೋಲಾರ: ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು 104ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿ ಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೇವರಾಜ ಅರಸು ಜಯಂತಿ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗಣ್ಯ ವ್ಯಕ್ತಿಗಳ ಜನ್ಮದಿನಾಚರಣೆಯ ಉದ್ದೇಶದ ಬಗ್ಗೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದ ಅವರು, ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದರು.

ಭಾವಚಿತ್ರದ ಮೆರವಣಿಗೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್‌ ಮಾತನಾಡಿ, ಆ.20ರಂದು ಜಯಂತಿ ಆಚರಣೆ ಮಾಡಲಿದ್ದು, ಬೆಳಗ್ಗೆ 9.30ಕ್ಕೆ ದೇವರಾಜ ಅರಸು ಭವನದ ಸಮೀಪದಿಂದ ಅರಸು ಭಾವಚಿತ್ರದ ಮೆರವಣಿಗೆ ನಡೆಯಲಿದೆ, ಆನಂತರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ವಿಜೇತರಿಗೆ ಬಹುಮಾನ: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು, ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಸುಸಜ್ಜಿತ ರಸ್ತೆ ಇಲ್ಲ: ಮುಖಂಡ ಮಂಜುನಾಥ್‌ ಸಭೆಯಲ್ಲಿ ಮಾತನಾಡಿ, ದೇವರಾಜು ಅರಸು ಭವನಕ್ಕೆ ಹೋಗಲು ಸುಸಜ್ಜಿತ ರಸ್ತೆಯಿಲ್ಲ. ರಸ್ತೆಗೆ ಬಿಟ್ಟುಕೊಂಡಿದ್ದ ಜಾಗವನ್ನು ಕೆಲ ಪ್ರತಿಷ್ಠಿತ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾರೆ. ಜಾಗ ಒತ್ತುವರಿ ತೆರವುಗೊಳಿಸುವಂತೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹಿಂದೆ ಅಧಿಕಾರದಲ್ಲಿದ್ದ ಚುನಾಯಿತ ಆಡಳಿತ ಮಂಡಳಿಯೇ ಒತ್ತುವರಿಗೆ ಕಾರಣ ಎಂದು ದೂರಿದರು.

ಪರಿಶೀಲನೆ ಸೂಚನೆ: ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮತನಾಡಿ, ಕೆರೆ ಮುಳುಗಡೆ ಜಾಗ ಮತ್ತೂಬ್ಬರಿಗೆ ಯಾವ ಮೂಲದಿಂದ ಮಂಜೂರಾಗಿದೆ ಅಥವಾ ಒತ್ತುವರಿಯಾಗಿರುವುದೋ ಪರಿಶೀಲಿಸಿ ಮಾಹಿತಿ ನೀಡಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು. ಪ್ರಸ್ತುತ ಶಿಷ್ಟಾಚಾರ ಪಾಲನೆಗೆ ಸಂಪುಟ ರಚನೆ ಆಗಿಲ್ಲ. ಆ.20ರಂದು ಕಾರ್ಯಕ್ರಮ ಇರು ವುದರಿಂದ ನೋಡಿಕೊಂಡು ಆಹ್ವಾನ ಪತ್ರಿಕೆಯನ್ನು ಮುದ್ರಿಸುವಂತೆ ಅರಸು ಅಭಿವೃದ್ಧಿ ನಿಗಮದ ವ್ಯವ ಸ್ಥಾಪಕ ಗಣೇಶ್‌ಗೆ ಸೂಚಿಸಿದರು.

ಸಭೆಯಲ್ಲಿ ಬಿಸಿಎಂ ಇಲಾಖೆ ಅಧಿಕಾರಿ ರಾಜಣ್ಣ, ವಿವಿಧ ಸಮುದಾಯದ ಮುಖಂಡರಾದ ರಾಜೇಶ್‌ಸಿಂಗ್‌, ಪ್ರಸಾದ್‌ಬಾಬು, ಕೃಷ್ಣಮೂರ್ತಿ ಹಾಜರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...

  • ಈ ವಾರ ಬೆಂಗಳೂರಿನಲ್ಲಿ ಪ್ರತೀವರ್ಷದಂತೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗುತ್ತಿದೆ. ಸುಮಾರು 200ಕ್ಕಿಂತಲೂ ಹೆಚ್ಚಿನ ದೇಶವಿದೇಶಗಳ ಚಿತ್ರಗಳನ್ನೂ...

  • ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ...

  • ಗರ್ಭಧಾರಣೆ ಎಂಬುದು ಶಿಶು ಜನನವನ್ನು ನಿರೀಕ್ಷಿಸುತ್ತಿರುವ ತಾಯಿ ಮಾತ್ರವಲ್ಲದೆ ಇಡೀ ಕುಟುಂಬವೇ ಹರ್ಷೋಲ್ಲಾಸದಲ್ಲಿ ಇರುವ ಸಮಯ. ಗರ್ಭಧಾರಣೆಯ ಒಂಬತ್ತು ತಿಂಗಳುಗಳ...

  • ಪ್ಲಾಸ್ಟಿಕ್‌ ಇಂದು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಕಡಿಮೆ ವೆಚ್ಚದಲ್ಲಿ ತಯಾರಿಕೆ ಹಾಗೂ ಕೈಗೆಟಕುವ ದರದಲ್ಲಿ ಈ ಪ್ಲಾಸ್ಟಿಕ್‌...