ಎಸಿ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಕ್ಕೆ ಯತ್ನ


Team Udayavani, Feb 1, 2023, 4:08 PM IST

tdy-17

ಕೋಲಾರ: ಜಿಪಂ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕಾಗಿ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡದ ಜಾಗವನ್ನು ಕಾಯ್ದಿರಿಸಿ, ಎಸಿ ಕಚೇರಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಿ ಸಲು ಸಿದ್ಧತೆ ನಡೆಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಬ್ರಿಟಿಷರ ಕಾಲದ ಕಟ್ಟಡದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಿದ್ದು, 1961ರಿಂದಲೂ ಈವರೆಗೆ ಯಾವುದೇ ತೊಂದರೆಯಿಲ್ಲದೆ ಕಾರ್ಯ ಚಟುವಟಿಕೆ ನಡೆಸಿಕೊಂಡು ಬರಲಾಗುತ್ತಿದೆ. ಕೋಲಾರ ನಗರದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಿದ್ದು,ಕೂಗಳತೆ ದೂರದಲ್ಲಿಯೇ ನ್ಯಾಯಾಲಯವೂ ಇದೆ.

ಎಲ್ಲರಿಗೂ ತೊಂದರೆ: ಉಪವಿಭಾಗಾಧಿಕಾರಿಗಳ ಕಚೇರಿಯು ನಗರದಲ್ಲಿ ಇರುವುದರಿಂದಾಗಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಸಾರ್ವಜನಿಕರು, ರೈತರ ಕೆಲಸ ಕಾರ್ಯಗಳಿಗೆ ಸೂಕ್ತವಾಗಿದೆ. ಪಕ್ಕದಲ್ಲಿಯೇ ನ್ಯಾಯಾಲಯವೂ ಇರುವುದರಿಂದ ವಕೀಲರಿಗೂ ಅನುಕೂಲವಾಗಿದೆ. ಆದರೆ, ಈಗ ಉಪವಿಭಾ ಗಾಧಿಕಾರಿಗಳ ಕಚೇರಿಯನ್ನು ಇಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಗೆಸ್ಥಳಾಂತರಿಸಿದ್ದೇ ಆದಲ್ಲಿ ರೈತರು, ಸಾರ್ವಜನಿಕರು,ವೃದ್ಧರು, ವಕೀಲರು ಸೇರಿ ಎಲ್ಲರಿಗೂ ತೊಂದರೆಆಗಲಿದೆ. ಆದ ಕಾರಣ, ಜಿಲ್ಲಾ ಧಿಕಾರಿ ಕಚೇರಿಯು ಕೋಲಾರ ನಗರದಿಂದ 6-7 ಕಿ.ಮೀ.ಗಳಿದ್ದು,ಅಲ್ಲಿಗೆ ಹೋಗುವುದಕ್ಕೆ ಬಸ್‌, ಆಟೋಗಳಿಗೆ ಕಾಯಬೇಕಾದ ಪರಿಸ್ಥಿತಿಯೂ ಇದೆ.

ಕಟ್ಟಡ ಕಟ್ಟಲು ಸರ್ಕಾರಿ ಜಾಗ ಇದೆ: ಬೇರೆ ತಾಲೂಕುಗಳಿಂದ ನಗರಕ್ಕೆ ಕಷ್ಟಪಟ್ಟು ಬರುವದಲ್ಲದೆ, ಇಲ್ಲಿಂದ ಪುನಃ ಬಸ್‌, ಆಟೋಗಳಿಗೆ ಹಣ ನೀಡಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಲು ಹರಸಾಹಸ ಪಡಬೇಕಾಗಿದೆ. ಜಿಪಂ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕೆ ಕೋಲಾರ ನಗರ ಸೇರಿಹೊರವಲಯ ದಲ್ಲಿ ಸಾಕಷ್ಟು ಸರ್ಕಾರಿ ಜಮೀನುಇದೆ. ಅಲ್ಲಿ ಬೇಕಿದ್ದರೆ ನಿರ್ಮಿಸಿಕೊಳ್ಳಲಿ, ಇಲ್ಲವೇಎಸಿ ಕಚೇರಿಯಲ್ಲಿ ಕೋಲಾರ ತಾಲೂಕು ಕಚೇರಿಗಾದರೂ ಸ್ಥಳಾಂತರಿಸಲು ಕ್ರಮಕೈಗೊಳ್ಳ ಬೇಕೇ ಹೊರತು, ಜಿಲ್ಲಾಧಿ ಕಾರಿಗಳ ಕಚೇರಿಗೆ ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು ಎನ್ನುವ ಆಗ್ರಹ ಸಾರ್ವಜನಿಕವಲಯದಲ್ಲಿ ಕೇಳಿ ಬರುತ್ತಿದೆ.

ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸ್ಥಳಾಂತರಿಸುವುದರಿಂದ ಸಾರ್ವಜನಿಕರು, ರೈತರು ಸೇರಿ ಎಲ್ಲರಿಗೂ ತೊಂದರೆಯಾಗಲಿದೆ. ಬ್ರಿಟಿಷರ ಕಾಲದ ಕಟ್ಟಡ ಉತ್ತಮ ಸ್ಥಿತಿಯಲ್ಲಿದೆ. ಇದನ್ನು ಉಳಿಸಿಕೊಳ್ಳದೇ ಕಟ್ಟಡ ತೆರವುಗೊಳಿಸಿ, ವಸತಿ ಗೃಹಗಳ ನಿರ್ಮಾಣಕ್ಕೆಮುಂದಾಗಿರುವುದು ಖಂಡನೀಯ. ಕೂಡಲೇ ಈಕ್ರಮವನ್ನು ವಾಪಸ್‌ ಪಡೆಯುವಂತೆ ಗ್ರಾಪಂ ಸದಸ್ಯ ನಿರಂಜನ್‌ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.