ಗ್ರಾಪಂಗಳಲ್ಲೇ ಸಿಗಲಿದೆ ಆಯುಷ್ಮಾನ್‌ ಕಾರ್ಡ್‌

Team Udayavani, Dec 27, 2019, 1:12 PM IST

kolar-tdy-2

ಮುಳಬಾಗಿಲು: ಜನವರಿ 1ರಿಂದ ಗ್ರಾಪಂಗಳಲ್ಲೇ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಣೆ ಮಾಡಲು ಸರ್ಕಾರ ಆದೇಶಿಸಿದೆ. ಜನರು ಸದುಪಯೋಗ ಪಡಿಸಿಕೊಳ್ಳಬೇಕು. ವಿತರಣೆ ಯಲ್ಲಿ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆ ಜಿಲ್ಲಾ ನೋಡಲ್‌ ಅಧಿಕಾರಿ ಡಾ.ಎನ್‌.ಸಿ. ನಾರಾಯಣಸ್ವಾಮಿ, ಪಿಡಿಒ ಮತ್ತು ಡಿಇಒ ಅಧಿಕಾರಿಗಳಿಗೆ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಸಾರ್ವಜನಿಕ ಆಸ್ಪತ್ರೆ ಮುಳಬಾಗಿಲು ಆಶ್ರಯದಲ್ಲಿ ನಗರದ ತಾಪಂ ಕಚೇರಿಯಲ್ಲಿ ಪಿಡಿಒ ಮತ್ತು ಡಿಇಒಗಳಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಂಯೋಜಿತ ಯೋಜನೆಯಾಗಿದ್ದು ಅ. 2018ರಿಂದ ರಾಜ್ಯಾದ್ಯಂತ ಜಾರಿಯಾಗುತ್ತಿದೆ. ಅದರಂತೆ ತಾಲೂಕು ಗ್ರಾಪಂ ಅಧಿಕಾರಿಗಳಿಗೆ ಹಾಗೂ ಬಾಪೂಜಿ ಸೇವಾ ಕೇಂದ್ರಗಳ ಗಣಕಯಂತ್ರ ನಿರ್ವಾಹಕರುಗಳಿಗೆ ತರಬೇತಿಯನ್ನು ನಿಗದಿತ ದಿನಾಂಕದಂದು ಆಯೋಜಿಸಲಾಗಿದ್ದು ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದರು.

ಸೌಲಭ್ಯ ಪಡೆಯುವುದು ಹೇಗೆ?: ಜನರು ಹುಷಾರಿಲ್ಲದಾಗ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ನಿಮ್ಮ ಆಧಾರ್‌ ಕಾರ್ಡ್‌ ಮತ್ತು ಪಡಿತರ ಕಾರ್ಡ್‌ ಹಾಜರು ಪಡಿಸಿ, ಅಲ್ಲಿ ನಿಮ್ಮ ತಪಾಸಣೆ ಮಾಡಿ ಚಿಕಿತ್ಸೆ ನೀಡುತ್ತಾರೆ. ನಿಮ್ಮ ಕಾಯಿಲೆಗೆ ಅಲ್ಲಿ ಚಿಕಿತ್ಸೆ ಲಭ್ಯವಿದ್ದರೆ ನಿಮಗೆ ರೆಫ‌ರಲ್‌ ನೀಡುತ್ತಾರೆ. ರೆಫ‌ರಲ್‌ ಪತ್ರದೊಂದಿಗೆ ನೀವು ಇಚ್ಛಿಸುವ ಯಾವುದೇ ನೋಂದಾಯಿತ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳ ಬಹುದು. ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫ‌ರಲ್‌ ಇರುವುದಿಲ್ಲ. ನೀವು ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಕೊಳ್ಳಬಹುದು ಎಂದು ಹೇಳಿದರು.

1,650 ರೀತಿಯ ಚಿಕಿತ್ಸೆಗಳು ಲಭ್ಯ: ಯೋಜನೆಯಲ್ಲಿ 1,650 ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಲಭ್ಯವಿದೆ. ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ಕ್ಲಿಷ್ಟಕರ ದ್ವಿತೀಯ ಹಂತದ 254 ಮತ್ತು ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳನ್ನು ನೋಂದಾಯಿತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬಹುದು. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫ‌ರಲ್‌ ಇಲ್ಲ. ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಕಾರ್ಡ್‌ ಎಲ್ಲಿ ನೀಡಲಾಗುತ್ತದೆ: ಆರೋಗ್ಯ ಕಾರ್ಡ್‌ನ್ನು (ಎಬಿ-ಎಆರ್‌ಕೆ) ಸರ್ಕಾರಿ ಆಸ್ಪತ್ರೆ ಗಳಲ್ಲಿ 10 ರೂ. ಶುಲ್ಕ ನೀಡಿ ಪಡೆದುಕೊಳ್ಳಿ.

ಬೆಂಗಳೂರು ಒನ್‌, ಕರ್ನಾಟಕ ಒನ್‌ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಕಾಗದದ ಕಾರ್ಡಿಗೆ 10 ರೂ., ಪ್ಲಾಸ್ಟಿಕ್‌ ಕಾರ್ಡಿಗೆ 35 ರೂ.ಶುಲ್ಕ ನೀಡಿ ಪಡೆದುಕೊಳ್ಳಿ, ಆಧಾರ್‌ ಕಾರ್ಡ್‌ ಮತ್ತು ಪಡಿತರ ಕಾರ್ಡ್‌ ಗಳನ್ನು ಹಾಜರುಪಡಿಸಿ ಆರೋಗ್ಯ ಕಾರ್ಡ್‌ ಪಡೆದು ಕೊಳ್ಳಬೇಕೆಂದರು. ತಾಪಂ ಇಒ ಎಂ.ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ ಮತ್ತು ಪಿಡಿಒಗಳು ಮತ್ತು ಡಿಇಒಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.