ಬಂಗಾರಪೇಟೆ ತಾಲೂಕಿನ ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಮತ ಸ್ಫೋಟ ಸಾಧ್ಯತೆ

 ಬಂಗಾರಪೇಟೆ ತಾಲೂಕಿಗೆ ಗುಟ್ಟೆ ರಾಜಣ್ಣ ಪ್ರವೇಶ ! ಕಾಂಗ್ರೆಸ್‌ ಮುಖಂಡರೊಂದಿಗೆ ಒಡನಾಟ

Team Udayavani, Apr 9, 2021, 8:27 PM IST

Untitled-3

ಬಂಗಾರಪೇಟೆ: ತಾಲೂಕಿನ ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಮತದ ಬಿರುಗಾಳಿ ಹಬ್ಬಿದ್ದು, ಕಾಂಗ್ರೆಸ್‌ ಪಕ್ಷದಲ್ಲಿ ಶಾಸಕರು ಹಾಗೂ ಶಾಸಕರ ವಿರುದ್ಧ ಬಣಗಳು ಹುಟ್ಟಿಕೊಂಡು, ಶಾಸಕರ ವಿರುದ್ಧ ಬಣಕ್ಕೆ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಗುಟ್ಟೆ ರಾಜಣ್ಣ ಎಂಬುವವರು ಕ್ಷೇತ್ರಕ್ಕೆ ಪ್ರವೇಶ ಮಾಡಲು ತಯಾರು ನಡೆಯುತ್ತಿದೆ. ಇದರಿಂದ ಕಾಂಗ್ರೆಸ್‌ ಪಕ್ಷದಲ್ಲಿನ ಭಿನ್ನಮತವು ಬೂದಿ ಮುಚ್ಚಿದ ಕೆಂಡದಂತಿದೆ.

ಕಳೆದ ಮೂರು ತಿಂಗಳಿನಿಂದ ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಗುಟ್ಟೆ ರಾಜಣ್ಣ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡ ಎಂದು ವೈರಲ್‌ ಆಗುತ್ತಿದೆ. ತಾಲೂಕಿಗೆ ಒಮ್ಮೆ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಜಿಪಂ ಮಾಜಿ ಸದಸ್ಯ ರಾಮಚಂದ್ರಪ್ಪ ಅವರ ಮೊಮ್ಮಗಳ ನಾಮಕರಣಕ್ಕೆ ಬಂದಿದ್ದು, ಅಂದಿನಿಂದ ಗುಟ್ಟೆ ರಾಜಣ್ಣ ಅಭಿಮಾನಿಗಳ ಬಳಗ, ಬಂಗಾರಪೇಟೆ ಎಂದು ಫೇಸ್‌ ಬುಕ್‌ನಲ್ಲಿ ಹರಿದಾಡುತ್ತಿವೆ.

ಮಹದೇವಪುರ ಕ್ಷೇತ್ರದಲ್ಲಿ ವಾಸ:

ಗುಟ್ಟೆ ರಾಜಣ್ಣ ಬೆಂಗಳೂರಿನ ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಕಾಂಗ್ರೆಸ್‌ ಪಕ್ಷದಲ್ಲಿ ಹಿರಿಯ ಮುಖಂಡರಾಗಿದ್ದಾರೆ. ಒಮ್ಮೆ ಮಹದೇವಪುರ ನಗರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೋಲಾರ ಸಂಸದ ಎಸ್‌.ಮುನಿಸ್ವಾಮಿ ವಿರುದ್ಧ ಕಳೆದ 5 ವರ್ಷಗಳ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಸೋತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕೇಂದ್ರ ಮಾಜಿ ಸಚಿವ ಕೆ. ಎಚ್‌.ಮುನಿಯಪ್ಪ ಸೇರಿದಂತೆ ಕೆಲವು ಕಾಂಗ್ರೆಸ್‌ ಮುಖಂಡರ ಒಡನಾಟದಲ್ಲಿದ್ದಾರೆ ಎಂದು ಹೇಳಲಾಗಿದೆ.

ಶಾಸಕರ ಬೆಂಬಲಿಗರಿಗೆ ಬಿಸಿತುಪ್ಪ: ದೇಶದಲ್ಲಿ

ಅಕ್ಷರ ಕ್ರಾಂತಿ ಪ್ರಾರಂಭಿಸಿದ ಸಾವಿತ್ರಬಾಯಿ ಫ‌ುಲೆ ಜನ್ಮದಿದ ಪ್ರಯುಕ್ತ ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಭಾವಚಿತ್ರ ಕೈಬಿಟ್ಟು, ಕೇಂದ್ರ ಮಾಜಿ ಶಾಸಕ ಕೆ.ಎಚ್‌.ಮುನಿಯಪ್ಪ, ಗುಟ್ಟೆ ರಾಜಣ್ಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಕೆಪಿಸಿಸಿ ಕಾರ್ಯದರ್ಶಿ ರಾಮಚಂದ್ರಪ್ಪ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜ್‌ ಅವರ ಭಾವಚಿತ್ರವುಳ್ಳ ಬ್ಯಾನರ್‌ಗಳನ್ನು ಮಾಡಿಸಿರುವುದರಿಂದ ಶಾಸಕರ ಬೆಂಬಲಿಗರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಕಾಂಗ್ರೆಸ್‌ನಲ್ಲಿ ಶೀತಲ ಸಮರ:

ಮೂರು ತಿಂಗಳಿನಿಂದ ಕಾಂಗ್ರೆಸ್‌ ಪಕ್ಷದ ಪ್ರತಿಯೊಬ್ಬ ಮುಖಂಡ ಹಾಗೂ ಕಾರ್ಯಕರ್ತರ ಹುಟ್ಟಿದ ಹಬ್ಬಕ್ಕೆ ಗುಟ್ಟೆ ರಾಜಣ್ಣ ಅಭಿನಂದಿಸುವ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇವುಗಳಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಭಾವಚಿತ್ರ ಇಲ್ಲದೇ ಕಾಂಗ್ರೆಸ್‌ ಪಕ್ಷದಿಂದಲೇ ಪ್ರಚಾರ ಮಾಡುತ್ತಿದೆ. ಇದರಿಂದ ಹಾಲಿ ಶಾಸಕರ ವಿರುದ್ಧ ಪರ್ಯಾಯವಾಗಿ ಮತ್ತೂಬ್ಬ ನಾಯಕನನ್ನಾಗಿ ಗುಟ್ಟೆ ರಾಜಣ್ಣ ಅವರನ್ನು ಪ್ರತಿಬಿಂಬಿಸುತ್ತಿರುವುದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಶೀತಲ ಸಮರ ಎದ್ದು ಕಾಣುತ್ತಿದೆ. ಗುಟ್ಟೆ ರಾಜಣ್ಣ ಕಾಂಗ್ರೆಸ್‌ ಮುಖಂಡರಾಗಿದ್ದು, ತಾಲೂಕಿನ ಜಿಪಂ ಸದಸ್ಯ ರಾಮಚಂದ್ರಪ್ಪ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜ್‌ ಹಾಗೂ ಇನ್ನೂ ಕೆಲವು ರೇಣುಕಾ ಯಲ್ಲಮ್ಮ ಬಳಗದ ಮುಖಂಡರೊಂದಿಗೆ ಒಡನಾಟ ಇಟ್ಟುಕೊಂಡಿದ್ದಾರೆ. ರೇಣುಕಾ ಎಲ್ಲಮ್ಮ ಬಳಗದಲ್ಲಿ ಕಾಂಗ್ರೆಸ್‌, ಬಿಜೆಪಿ ಮುಖಂಡರಿದ್ದಾರೆ. ಆದರೆ, ಗುಟ್ಟೆ ರಾಜಣ್ಣ ಕೇವಲ ಕಾಂಗ್ರೆಸ್‌ ಮುಖಂಡರೊಂದಿಗೆ ಒಡನಾಟ ಇಟ್ಟುಕೊಂಡಿದ್ದರಿಂದ ಕಾಂಗ್ರೆಸ್‌ನ ಎರಡು ಗುಂಪುಗಳ ಪೈಕಿ ಒಂದು ಗುಂಪಿಗೆ ಪರ್ಯಾಯ ನಾಯಕರನ್ನಾಗಿ ಮಾಡಲು ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ ಎಂದು ಕೇಳಿ ಬರುತ್ತಿವೆ. ತಾಲೂಕಿನಲ್ಲಿ ಸದೃಢವಾಗಿರುವ ಕಾಂಗ್ರೆಸ್‌ ಪಕ್ಷಕ್ಕೆ ಗುಟ್ಟೆ ರಾಜಣ್ಣ ಎಂಟ್ರಿ ಅಗತ್ಯವೇ ಎಂಬ ಪ್ರಶ್ನೆಯು ಚರ್ಚೆಗೆ ಗ್ರಾಸವಾಗಿದೆ.

  • ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.