ಸವಾರರಿಗೆ ಆತಂಕ ತಂದ ಬೇರಿಕಿ ರಸ್ತೆ ಅವ್ಯವಸ್ಥೆ

ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ಕಷ್ಟಸಾಧ್ಯ | ನಿತ್ಯ ಸಂಕಟ

Team Udayavani, Aug 2, 2019, 12:04 PM IST

kolar-tdy-2

ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾಸ್ತಿ ಗ್ರಾಪಂ ವ್ಯಾಪ್ತಿಯ ಕೆಸರಗೆರೆ ಸಮೀಪದ ವಾನಪ್ರಸ್ತ ಆಸ್ಪತ್ರೆಯಿಂದ ಹಿಡಿದು ಗಡಿಗೆ ಹೊಂದಿಕೊಂಡಂತೆ ಇರುವ ಬೇರಿಕಿ ರಸ್ತೆ ಸಂಪೂರ್ಣ ಹಾಳಾಗಿರುವುದು.

ಮಾಸ್ತಿ: ಮಾಲೂರು ಪಟ್ಟಣದಿಂದ ಮಾಸ್ತಿ ಮಾರ್ಗವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಬೇರಿಕಿ ರಸ್ತೆ ಸಂಪೂರ್ಣ ಹಾಳಾ ಗಿದ್ದು, ವಾಹನ ಸವಾರರಿಗೆ ಇನ್ನಿಲ್ಲದ ತೊಂದರೆಯಾಗಿದೆ.

ಮಾಸ್ತಿ ಹೋಬಳಿ ಕತ್ತರಹಳ್ಳಿ ಕ್ರಾಸ್‌ನಿಂದ ಹಿಡಿದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಗಡಿಯವರೆಗೂ ಸುಮಾರು 1 ಕಿ.ಮೀ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ.

ಇನ್ನಿಲ್ಲದ ತೊಂದರೆ:ಕಳೆದ ಸುಮಾರು 2 ವರ್ಷಗಳ ಹಿಂದೆ ಲೋಕೋಪಯೋಗಿ ಇಲಾಖೆ ಮಾಸ್ತಿ ಸಮೀಪದ ಮಾಲೂರು ರಸ್ತೆ ಕತ್ತರಹಳ್ಳಿ ಕ್ರಾಸ್‌ನಿಂದ ಹಿಡಿದು ಕೆಸರಗೆರೆ ಸಮೀಪದ ವಾನಪ್ರಸ್ತ ಆಸ್ಪತ್ರೆವರೆಗೂ ಸುಮಾರು 4 ಕಿ.ಮೀ. ರಸ್ತೆಯನ್ನು ಅಗಲೀ ಕರಣಗೊಳಿಸಿ ಹಾಗೂ ಡಾಂಬರೀಕರಣ ಗೊಳಿಸುವ ಮೂಲಕ ತಮಿಳುನಾಡು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಬೇರಿಕಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿತ್ತು. ಆದರೆ, ಅಲ್ಲಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಗಡಿಯವರೆಗೂ ಸುಮಾರು 1 ಕಿ.ಮೀ.ನಷ್ಟು ರಸ್ತೆ ಅಭಿವೃದ್ಧಿಪಡಿಸದೇ ಹಾಗೆ ಬಿಡಲಾಗಿದೆ. ಇದರಿಂದಾಗಿ ಪ್ರತಿನಿತ್ಯ ವಾಹನ ಸವಾರರು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ.

ಮಾಲೂರು ಪಟ್ಟಣದಿಂದ ಮಾಸ್ತಿ ಮಾರ್ಗವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಪ್ರತಿನಿತ್ಯ ಬಸ್‌, ಲಾರಿ, ಕಾರು ಸೇರಿ ಭಾರೀ ಗಾತ್ರದ ವಾಹನ ಸೇರಿದಂತೆ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯಲ್ಲಿ ಮೊಣಕಾಲುದ್ದ ಹಳ್ಳಗಳು ಬಿದ್ದಿದ್ದು, ಜಲ್ಲಿ ಕಲ್ಲುಗಳು ಮೇಲೆದ್ದಿವೆ. ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರು ತಮ್ಮ ಪ್ರಾಣವನ್ನು ಅಂಗೈಲಿಟ್ಟುಕೊಂಡು ಸಂಚರಿಸಿದರೆ, ಬೈಕ್‌ ಸವಾರರು ಆತಂಕದಿಂದಲೇ ಚಾಲನೆ ಮಾಡುತ್ತಿದ್ದಾರೆ. ಇನ್ನು ಬೈಕ್‌ ಸವಾರರು ತಪ್ಪಿ ಬಿದ್ದು, ಗಾಯಗಳು ಮಾಡಿಕೊಂಡು ಆಸ್ಪತ್ರೆ ಸೇರಿರುವ ಉದಾಹರಣೆಗಳೂ ಇವೆ.

ದೂಳು- ಕೆಸರಿನ ಅಭಿಷೇಕ:ಬಸ್‌, ಲಾರಿ ಸೇರಿದಂತೆ ಭಾರೀ ಗಾತ್ರದ ವಾಹನಗಳು ಸಂಚರಿಸುವ ವೇಳೆ ಹಿಂಬದಿಯಿಂದ ಬರುವ ವಾಹನ ಸವಾರಿಗೆ ದೂಳಿನಾಭಿಷೇಕವಾ ಗುತ್ತದೆ. ಮಳೆ ಬಂದರೆ ಹಳ್ಳಗಳಿಲ್ಲಿ ನೀರು ತುಂಬಿಕೊಂಡು ಕೆಸರು ಗದ್ದೆಯಾಗಿ ಮಾರ್ಪ ಟ್ಟು ಸವಾರರಿಗೆ ಕೆಸರಿನಾಭಿಷೇಕವಾಗುತ್ತದೆ.

ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಇತ್ತ ಕಡೆ ಗಮನ ಹರಿಸಿ ಮಾಲೂರು ಪಟ್ಟಣದಿಂದ ಮಾಸ್ತಿ ಮಾರ್ಗವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ವಾನಪ್ರಸ್ತ ಆಸ್ಪತ್ರೆಯಿಂದ ಹಿಡಿದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಗಡಿಯವರೆಗೂ ಹಾಳಾಗಿರುವ ಸುಮಾರು 1 ಕಿ.ಮೀ.ನಷ್ಟು ರಸ್ತೆಯನ್ನು ಶೀಘ್ರ ಅಭಿವೃದ್ಧಿಪಡಿಸಬೇಕಿದೆ.

ಎಲ್ಲೆಲ್ಲಿಗೆ ಸಂಪರ್ಕ?:

ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯಲ್ಲಿ ಮಾಲೂರು, ಮಾಸ್ತಿ ಮಾರ್ಗವಾಗಿ ತಮಿಳುನಾಡಿನ ಬೇರಿಕಿ, ಬಾಗಲೂರು, ಹೊಸೂರು ಹಾಗೂ ಸೂಳಿಗಿರಿ, ಕೃಷ್ಣಗಿರಿ ಕಡೆಗೆ ವಾಹನಗಳು ಸಂಚರಿಸುತ್ತವೆ. ಅಲ್ಲದೆ, ರಾಜ್ಯದ ಅತ್ತಿಬೆಲೆ, ಆನೇಕಲ್, ಬೆಂಗಳೂರಿಗೂ ಸಮೀಪವಾಗುವುದ ರಿಂದ ಈ ರಸ್ತೆಯಲ್ಲೇ ಹೆಚ್ಚಾಗಿ ವಾಹನಗಳು ಸಂಚರಿಸುತ್ತವೆ.
● ಎಂ.ಮೂರ್ತಿ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.