ಚರ್ಚಿಸಿ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ನಿರ್ಧಾರ

Team Udayavani, Jan 8, 2019, 11:16 AM IST

kol-1.jpg

ಮಾಲೂರು: ನಗರ ಬಿಜೆಪಿ ವತಿಯಿಂದ ಪುರಸಭಾ ಚುನಾವಣೆಗಳ ಪೂರ್ವ ಸಿದ್ಧತೆಗಳ ಚಿಂತನೆಗಳ ಸಮಾಲೋಚನೆ ಸಭೆ ಶಾಂತಿಯುತವಾಗಿ ನಡೆಯಿತು. ನಗರ ಘಟಕದ ಬಿಜೆಪಿ ಅಧ್ಯಕ್ಷ ಎಂ.ಸಿ.ರವಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಕುಂಭೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬೆಂಬಲಿಸಲು ಮುಖಂಡರು ಮನವಿ ಮಾಡಿದರು.

ಆಕ್ರೋಶ ವ್ಯಕ್ತಪಡಿಸಿದರು: ಪಟ್ಟಣದ ಎಲ್ಲಾ 27 ವಾರ್ಡ್‌ಗಳಿಗೆ ಮುಂದಿನ ದಿನಗಳಲ್ಲಿ ನಡೆಯಲಿರುವ ಪುರಸಭೆ ಸಾರ್ವತ್ರಿಕ ಚುನಾವಣೆ ರೂಪುರೇಷಗಳನ್ನು ಸಿದ್ಧಪಡಿಸುವ ವಿಚಾರವಾಗಿ ಸಭೆ ಕರೆಯಲಾಗಿತ್ತು. ಇಂದಿನ ಸಭೆಗೆ ಕಳೆದ ವಿಧಾನ
ಸಭೆಯ ಚುನಾವಣೆ ವೇಳೆಯಲ್ಲಿ ಜೆಡಿಎಸ್‌ ಪರವಾಗಿ ನೇರವಾಗಿ ಪ್ರಚಾರಕ್ಕೆ ಇಳಿದ ಸದಸ್ಯರು ಹಾಜರಾಗಿದ್ದ ಕಾರಣ ಸಭೆಯಲ್ಲಿದ್ದ ಕೆಲವು ಯುವ ಕಾರ್ಯಕರ್ತರನ್ನು ಸಹಜವಾಗಿಯೇ ಕೆರಳಿಸಿ ತ್ತು. ಕಳೆದ ಪುರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಗೆಲುವು ಸಾಧಿಸಿದ ಕೆಲವು ಸದಸ್ಯರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಬಿಟ್ಟು ಜೆಡಿಎಸ್‌ ಪಾಳೇಯದಲ್ಲಿ ಗುರುತಿಸಿಕೊಂಡಿದ್ದು ಕೆಲ ಯುವ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು.

ಸಂಘಟಿತರಾಗಲು ಸಲಹೆ: ಸಭೆ ಆರಂಭದಿಂದಲೂ ಬಿಗುವಿನ ವಾತಾವರಣ ದಲ್ಲಿಯೇ ನಡೆದ ಸಭೆಯಲ್ಲಿ ಕೆಲವೇ ಕಾರ್ಯಕರ್ತರು ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಮಾತ್ರ ಮನ್ನಣೆ ನೀಡುವಂತೆ ಒತ್ತಿ ಹೇಳುವ ಪ್ರಯತ್ನ ನಡೆಸಿದರು. ಅಲ್ಲದೇ, ಮಧ್ಯ ಪ್ರವೇಶ ಮಾಡಿದ ಬಿಜೆಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದ ಸಚ್ಚಿದಾನಂದ ಮೂರ್ತಿ, ಪುರಸಭಾ ಚುನಾವಣೆ ಪೂರ್ವ ಸಿದ್ಧತಾ ಸಭೆಯಾಗಿ ದ್ದು ಇಲ್ಲಿ ಆಕ್ರೋಶವಾಗಿ ಮಾತನಾಡುವುದು ಬೇಡ. ಮುಂದಿನ ದಿನಗಳಲ್ಲಿಯೇ  ಪಟ್ಟಣದ ಕಾರ್ಯಕರ್ತರ ಸಭೆ ನಡೆಸಿಪ್ರತಿಯೊಬ್ಬರೂ ಮುಕ್ತವಾಗಿ ಮಾತನಾಡಿ ಸೂಕ್ತ ವ್ಯಕ್ತಿಯನ್ನು ಚುನಾವಣೆಗೆ ಇಳಿಸುವ ಕಾರ್ಯವಾಗಬೇ ಕಾಗಿದೆ. ಪಕ್ಷ ಸಂಘಟನೆ ಹಿತ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಎ.ನಾಗರಾಜು ಮಾತನಾಡಿ, ಪ್ರಸ್ತುತ ಚುನಾವಣೆಗಳ ಖರ್ಚು ವೆಚ್ಚ ಅಧಿಕವಾಗುತ್ತಿದ್ದು ಮುಖಂಡರು ಮತ್ತು ಪಕ್ಷವನ್ನು ಮಾತ್ರ ನಂಬಿ ಟಿಕೆಟ್‌ ಕೇಳುವ ಆಕಾಂಕ್ಷಿಗಳ ಬದಲಿಗೆ ಸ್ವಂತ ಶಕ್ತಿಯಿಂದ ಚುನಾವಣೆ ನಡೆಸುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಕಾರ್ಯವಾಗಬೇಕಾಗಿದೆ ಎಂದರು. 

 ಬಿಜೆಪಿ ನಗರ ಘಟಕದ ಅಧ್ಯಕ್ಷ ಎಂ.ಸಿ.ರವಿ ಮಾತನಾಡಿ, ಎಲ್ಲಾ ವಾರ್ಡ್‌ಗಳ ಸರ್ವೆ ನಡೆಸಿ ಸೂಕ್ತ ಅಭ್ಯರ್ಥಿಯನ್ನು ಜನಾಭಿಪ್ರಾಯದೊಂದಿಗೆ ಆಯ್ಕೆ ಮಾಡಲಾಗುವುದು ಎಂದರು. ಸಭೆಯಲ್ಲಿ ಮಾಜಿ ಶಾಸಕ ಎ.ನಾಗರಾಜು, ತಬಲ ಎ.ನಾರಾಯಣಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚ್ಚಿದಾನಂದ ಮೂರ್ತಿ, ತಾಲೂಕು ಅಧ್ಯಕ್ಷ ಬಿ.ಆರ್‌.ವೆಂಕಟೇಶ್‌, ಪುರಸಭೆ ಅಧ್ಯಕ್ಷ ಸಿ.ಪಿ.ನಾಗರಾಜು, ಸದಸ್ಯರಾದ ವೇಮನ, ಶ್ರೀವಳ್ಳಿ, ಗೀತಾ, ಭಾರತಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.