ಟಿಕೆಟ್‌ಗಾಗಿ ಭುಗಿಲೆದಿದ್ದ ಬಿಜೆಪಿ ಭಿನ್ನಮತ ಶಮನ


Team Udayavani, Mar 30, 2019, 3:12 PM IST

ticketgagi

ಕೋಲಾರ: ಲೋಕಸಭೆ ಕ್ಷೇತ್ರದ ಟಿಕೆಟ್‌ ಸಂಬಂಧ ಭುಗಿಲೆದ್ದಿದ್ದ ಭಿನ್ನಮತ ಶಮನ ಮಾಡುವಲ್ಲಿ ಬಿಜೆಪಿ ವರಿಷ್ಠರು ಸಫಲರಾಗಿದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಎಸ್‌.ವೀರಯ್ಯ ನಾಮಪತ್ರ ಹಿಂಪಡೆದರು.

ಬಿಜೆಪಿ ಅಭ್ಯರ್ಥಿಯಾಗಿಯೇ ಕಣಕ್ಕಿಳಿದಿದ್ದ ವೀರಯ್ಯ, ಹೈಕಮಾಂಡ್‌ ಟಿಕೆಟ್‌ ತಮಗೆ ನೀಡುತ್ತದೆ ಎಂಬ ವಿಶ್ವಾಸದೊಂದಿಗೆ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು. ಅಲ್ಲದೇ, ಕೋಲಾರದಲ್ಲೇ ಕೆಲವು ತಿಂಗಳ ಹಿಂದೆಯೇ ಮನೆ ಮಾಡಿದ್ದರು.

ನನಗೆ ಟಿಕೆಟ್‌ ತಪ್ಪಿಸಲು ಸಂಸದ ಕೆ.ಎಚ್‌.ಮುನಿಯಪ್ಪ ಕೈವಾಡವೇ ಕಾರಣವಾಗಿದೆ. ಪಕ್ಷ ಟಿಕೆಟ್‌ ನೀಡದಿದ್ದಲ್ಲಿ ಪಕ್ಷೇತರನಾಗಿ ನಿಲ್ಲುತ್ತೇನೆ ಎಂದು ಘೋಷಿಸಿದ್ದರು. ಕೊನೆಗೆ ಶುಕ್ರವಾರ ತಮ್ಮ ವಕೀಲ ಸತೀಶ್‌ ಮೂಲಕ ನಾಮಪತ್ರ ಹಿಂಪಡೆದಿದ್ದಾರೆ.

ಸಂಧಾನ ಸೂತ್ರ ಸಿದ್ಧ: ನಗರ ಹೊರವಲಯದ ಅಡಿಗಾಸ್‌ ಹೋಟೆಲ್‌ನಲ್ಲಿ ಗುರುವಾರ ಸಭೆ ಸೇರಿದ್ದ ಬಿಜೆಪಿ ಮುಖಂಡರಾದ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಲಕ್ಷ್ಮಯ್ಯ, ಶ್ರೀರಾಮ್‌, ಸಿ.ಎಂ.ರಘುನಾಥ್‌, ಕೆ.ಎಸ್‌.ರಾಜೇಂದ್ರ, ವೆಂಕಟಸ್ವಾಮಿಗೌಡ, ಕಲ್ಲಪಲ್ಲಿ ಪ್ರಕಾಶ್‌, ಪ್ರಸಾದ್‌, ಗಾಂಧಿನಗರ ವೆಂಕಟೇಶ್‌ ಮತ್ತಿತರರು ವೀರಯ್ಯ ಅವರ ಮನವೊಲಿಕೆಗೆ ಹೈಕಮಾಂಡ್‌ಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಹಳೆ ಕಾರ್ಯಕರ್ತರನ್ನು ಜತೆ ಕರೆದುಕೊಂಡು, ಚುನಾವಣೆ ಎದುರಿಸುವುದರ ಜತೆಗೆ ಮುಂದಿನ ದಿನಗಳಲ್ಲಿ ವೀರಯ್ಯ ಅವರಿಗೆ ಸೂಕ್ತ ಸ್ಥಾನಮಾನ ಒದಗಿಸಲು ಹೈಕಮಾಂಡ್‌ ನೀಡಿದ ಅಭಯದಿಂದ ನಾಮಪತ್ರ ವಾಪಸ್ಸಿಗೆ ಅವರು ಒಪ್ಪಿದರು.

ಪಕ್ಷದ ಸೂಚನೆಗೆ ಬದ್ಧ: ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 20 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ, 2004 ಮತ್ತು 2014 ರಲ್ಲಿ ಕ್ರಮವಾಗಿ 11800 ಹಾಗೂ 23 ಸಾವಿರ ಮತಗಳಿಂದ ಸೋತಿದ್ದೇನೆ. ಈ ಬಾರಿ ಜನರ ಬೆಂಬಲ ನನಗಿದ್ದು, ಗೆಲ್ಲುವ ಸಂಪೂರ್ಣ ವಿಶ್ವಾಸವಿತ್ತು ಎಂದು ತಿಳಿಸಿದರು.

ಕುತಂತ್ರ ರಾಜಕಾರಣದ ಮೂಲಕ 7 ಬಾರಿ ಗೆದ್ದು ಹೋಗಿರುವ ಮುನಿಯಪ್ಪಗೆ ಈ ಬಾರಿ ಪಾಠ ಕಲಿಸಲು ಕ್ಷೇತ್ರದ ಮತದಾರರು ಸಿದ್ಧವಾಗಿದ್ದರು. ಸುಲಭವಾಗಿ ಗೆಲುವು ಸಾಧಿಸುವ ವಿಶ್ವಾಸದೊಂದಿಗೆ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದು ನಿರಾಸೆಯಾಗಿದೆ ಎಂದು ಕಣ್ಣೀರು ಹಾಕಿದ್ದರು.

ಬಿಜೆಪಿ ಗೆಲುವಿಗೆ ಸಾಕಾರ: ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಕೆ.ಎಚ್‌.ಎಂ ಸೋಲಿಸಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಘೋಷಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಮುನಿಯಪ್ಪ ವಿರೋಧಿ ಅಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರೇ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರಣವಾಗಲಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ಪ್ರತಿಧ್ವನಿಸುತ್ತಿವೆ.

ಬಿಜೆಪಿ ಟಿಕೆಟ್‌ ಪಡೆದಿರುವ ಮುನಿಸ್ವಾಮಿ, ಈಗಾಗಲೇ ಕಾಂಗ್ರೆಸ್‌ ಭಿನ್ನಮತಿಯ ನಾಯಕರೊಂದಿಗೆ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ. ಪ್ರಚಾರ ತಂತ್ರಗಳ ಕುರಿತು ಅತೃಪ್ತ ಮುಖಂಡರು ಬಿಜೆಪಿ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.