ಡೀಸಿಗೆ ಅವ್ಯವಸ್ಥೆ, ಪಾದಚಾರಿ ರಸ್ತೆ ಒತ್ತುವರಿ ದರ್ಶನ

ಸತ್ಯಭಾಮರಿಂದ ದಿಢೀರ್‌ ನಗರ ಸಂಚಾರ , ಅಧಿಕಾರಿಗಳಿಗೆ ತರಾಟೆ

Team Udayavani, Nov 8, 2020, 5:00 PM IST

ಡೀಸಿಗೆ ಅವ್ಯವಸ್ಥೆ, ಪಾದಚಾರಿ ರಸ್ತೆ ಒತ್ತುವರಿ ದರ್ಶನ

ಕೋಲಾರ: ನಗರದಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಸಂಚರಿಸಿ ರಸ್ತೆ ಬದಿಯಲ್ಲಿ ಕಸದ ರಾಶಿ, ಪಾದಚಾರಿ ರಸ್ತೆಗಳ ಒತ್ತುವರಿ ಮಾಡಿರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆಯಿತು.

ನಗರದ ಪ್ರಮುಖ ರಸ್ತೆಗಳಾದ ಅಮ್ಮವಾರಿ ಪೇಟೆ ವೃತ್ತದಿಂದ ಕಾಳಮ್ಮ ಗುಡಿರಸ್ತೆ ಹೊಸ ಬಸ್‌ ನಿಲ್ದಾಣ, ಅಂತರಗಂಗೆ ರಸ್ತೆ, ಕಾರಂಜಿ ಕಟ್ಟೆ ರಸ್ತೆ ಮಾರ್ಗ, ಬಸ್‌ ನಿಲ್ದಾಣದ ಹಿಂಭಾಗದ ರಸ್ತೆ, ಸುತ್ತಮುತ್ತ ಪ್ರದೇಶಗಳನ್ನು ಬೆಳಗ್ಗೆ6ರಿಂದ9 ಗಂಟೆ ವರೆಗೆ ಸಂಚರಿಸಿ ಅವ್ಯವಸ್ಥೆಗಳನ್ನು ಕಂಡು ಕೆಂಡಮಂಡಲವಾದರು.

ಪರವಾನಗಿ ರದ್ದುಗೊಳಿಸಲು ಶಿಫಾರಸು ಮಾಡಿ: ಕಾನೂನು ಬಾಹಿರವಾಗಿ ವೈನ್‌ಶಾಪ್‌ಗ್ಳು ಬಾಗಿಲು ತೆರೆದು ವಹಿವಾಟು ನಡೆಸುತ್ತಿದ್ದಾರೆ. ಡೀಸಿ ಬರುತ್ತಿರುವ ಮಾಹಿತಿ ತಿಳಿದು ಬಾಗಿಲು ಹಾಕಿದ್ದಾರೆ ಎಂದು ನಗರಸಭೆ ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ನೋಟಿಸ್‌ ಜಾರಿ ಮಾಡಿ ಪರವಾನಗಿ ರದ್ದುಗೊಳಿಸಲು ಶಿಫಾರಸು ಮಾಡಿ ಅಧಿಕಾರಿಗಳಿಗೆ ಸೂಚಿಸಿದರು.

ಕ್ರಮ ಕೈಗೊಳ್ಳಲು ಸೂಚನೆ: ಪಾದಚಾರಿ ರಸ್ತೆಗಳನ್ನು ಒತ್ತುವರಿ ಮಾಡಿದ್ದ ಅಂಗಡಿಗಳ ಮಾಲೀಕರಿಗೆ ತೆರವು ಮಾಡಲು ಸೂಚಿಸಿ ದಂಡ ಹಾಕುವುದಾಗಿ ಎಚ್ಚರಿಸಿದರು. ಬಸ್‌ ನಿಲ್ದಾಣದ ಮುಂಭಾಗದ ಚರಂಡಿಗಳ ಮೇಲೆ ನಿರ್ಮಿಸಿದ್ದ ಕಟ್ಟಡಗಳನ್ನು ಕೂಡಲೇ ತೆರವು ಮಾಡಿಸಿ ಪಲ್ಲವಿ ವೃತ್ತದಲ್ಲಿ ಕಸ ತುಂಬಿರುವ ಬಗ್ಗೆ ಕ್ರಮ ಕೈಗೊಳ್ಳಲು ಪೌರಾಯುಕ್ತ ಶ್ರೀಕಾಂತ್‌ಗೆ ಸೂಚಿಸಿದರು.

ಕಸ ವಿಂಗಡಿಸಿ ವಿಲೇವಾರಿ ಮಾಡಿ: ನಗರಸಭೆ ಜಾಗ ಒತ್ತುವರಿ ಮಾಡಿದ್ದವರ ಮೇಲೆ ನೋಟಿಸ್‌ ಜಾರಿ ಮಾಡಿ ರಸ್ತೆ ಬದಿಯಲ್ಲಿನ ಅಕ್ರಮ ಪೆಟ್ಟಿಗೆ ಅಂಗಡಿಯನ್ನು ತೆರವು ಮಾಡಿಸಿ ಅಂತರಗಂಗೆ ರಸ್ತೆಯಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ವಿಳಂಬ ಬಗ್ಗೆ ನಗರಾಭಿವೃದ್ಧಿ ಕೋಶ ನಿರ್ದೇಶಕ ರಂಗಸ್ವಾಮಿಅವರಿಗೆ ತ್ವರಿತವಾಗಿ ಕಾಮಗಾರಿಗಳನ್ನು ಮುಗಿಸಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನುನಿವಾರಿಸಬೇಕು.ರಸ್ತೆಬದಿಗಳಲ್ಲಿನ ಕಸದ ರಾಶಿಗಳಿಗೆ ಬೆಂಕಿ ಹಚ್ಚಬೇಡಿ, ಹಸಿ ಮತ್ತು ಒಣ ಕಸವಾಗಿ ವಿಂಗಡಿಸಿ ಅಂದಿನ ಕಸವನ್ನು ವಿಲೇವಾರಿ ಮಾಡಬೇಕು ಎಂದರು.

ನಗರದ ಪ್ರತಿ ವಾರ್ಡ್‌ಗಳಿಗೂ ಅನಿರೀಕ್ಷಿತವಾಗಿ ಭೇಟಿ ನೀಡುತ್ತೇನೆ. ಸಂಬಂಧಪಟ್ಟ ವಾರ್ಡ್‌ನ ಸದಸ್ಯರು ಸಹ ತಮ್ಮ ವಾರ್ಡ್‌ ಸ್ವಚ್ಛತಾ ಮಾಡಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಜವಾಬ್ದಾರಿ ಇರುತ್ತದೆ. ಆಯಾ ವಾರ್ಡ್‌ನ ನಗರಸಭೆ ಮೇಸ್ತ್ರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಶ್ರೀಕಾಂತ್‌, ಕಂದಾಯ ನಿರೀಕ್ಷಕ ತ್ಯಾಗರಾಜ್‌, ಸಿಬ್ಬಂದಿ ನಾಗರಾಜ್‌, ನಗರಸಭೆ ಸದಸ್ಯರಾದ ಜವೇರಿಲಾಲ್‌, ಮಂಜುನಾಥ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.