ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

Team Udayavani, Oct 18, 2021, 4:43 PM IST

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿಯೂ ಮತ್ತೇ  ಪರಸ್ಪರ ಹೊಡೆದಾಡಿಕೊಂಡ ಘಟನೆ ಕೋಲಾರ ಜಿಲ್ಲಾ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ನಡೆದಿದೆ.

ಜಿಲ್ಲಾಸ್ಪತ್ರೆ ತುರ್ತು ಚಿಕಿತ್ಸಾ ಘಟಕದಲ್ಲಿ ಪರಸ್ಪರ ಹೊಡೆದಾಡಿಕೊಂಡ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಮುಂಜಾನೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ ಜಗಳದಲ್ಲಿ ಹಲವರಿಗೆ ರಕ್ತ ಗಾಯಗಳಾಗಿದೆ.

ಅಪರಂಜಿ ನಾರಾಯಣಸ್ವಾಮಿ ಮತ್ತು ಗಂಗಾಧರ ಬಣಗಳ ಮಧ್ಯೆ ಜಗಳ ನಡೆದಿದೆ. ಇವರ ಪರವಾಗಿ ಅಮರ್ ಮತ್ತು ಬಾಲು ಗುಂಪಿನವರು ಹೊಡೆದಾಡಿ ಕೊಂಡಿದ್ದಾರೆ.

ಜಗಳದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡ ಐವರು ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಬಂದಿದ್ದಾರೆ. ಆಸ್ಪತ್ರೆಗೆ ದಾಖಲಾಗಿ ದೂರು ನೀಡಲು ಬಂದ ವೇಳೆ ಆಸ್ಪತ್ರೆಯಲ್ಲಿಯೂ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳಿ ಅಲ್ಲಿಯೂ ಪರಸ್ಪರ ಹೊಡೆದಾಟ ನಡೆದಿದೆ.

ಎರಡು ಗುಂಪಿನ ಯುವಕರು ಆಸ್ಪತ್ರೆ ಸಿಬ್ಬಂದಿಯ ಬುದ್ಧಿಮಾತನ್ನು ಲೆಕ್ಕಿಸದೆ   ತಳ್ಳಾಡಿ  ಹೊಡೆದಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತುರ್ತು ಚಿಕಿತ್ಸಾ ಘಟಕದ ಪೀಠೋಪಕರಣ ಗಳು ಹೊಡೆದಾಟಕ್ಕೆ ಬಳಕೆಯಾಗಿದೆ. ಇವೆಲ್ಲ ಘಟನಾವಳಿಗಳು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ಗುಂಪುಗಳ ಗಲಾಟೆಗೆ ಹಳೆಯ ವೈಷಮ್ಯ ಕಾರಣ ಎಂದು ತಿಳಿದುಬಂದಿದೆ.

ಈ ಗಲಾಟೆಯಿಂದಾಗಿ ಬೂದಿ ಮುಚ್ಚಿದ ಕೆಂಡದಂತ್ತಾಗಿರುವ ಕಠಾರಿಪಾಳ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸುವ ಪ್ರಯತ್ನ ನಡೆಸಿದ್ದಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.