ಈಶ್ವರಪ್ಪ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿ

Team Udayavani, Apr 18, 2022, 3:17 PM IST

Untitled-1

ಕೋಲಾರ: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆ ಸಾಲದು, ಡೆತ್‌ ನೋಟ್‌ ಆಧರಿಸಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಬಂಧಿಸಬೇಕು. ಭ್ರಷ್ಟ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಮಾಜಿ ಸಚಿವ ರಾಮಲಿಂಗರೆಡ್ಡಿ ಆಗ್ರಹಿಸಿದರು.

ನಗರದ ಗಾಂಧಿ ವನದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಫಲ್ಯದ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ಇಂಡಲಗಿ ಗ್ರಾಪಂ ಜನತೆ 3 ವರ್ಷಕ್ಕೂಮ್ಮೆ ಬರುವ ಜಾತ್ರೆ ನಂತರ ಪಂಚಾಯತ್‌ ರಾಜ್‌ ಸಚಿವರಿಗೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿದಾಗ ಸಚಿವರ ಸೂಚನೆ ಮೇರೆಗೆ ಸಂತೋಷ್‌ ಎಂಬ ಬಿಜೆಪಿ ಕಾರ್ಯ ಕರ್ತ ಸಾಲ ಮಾಡಿ ಕಾಮಗಾರಿ ಪೂರ್ಣಗೊಳಿಸಿದ್ದಾನೆ ಎಂದರು.

ಹಣ ಬಿಡುಗಡೆಗಾಗಿ ರಾಜ್ಯ ಸರ್ಕಾರದ ಎಲ್ಲಾ ಗಣ್ಯರಿಗೆ ಅಲ್ಲದೆ, ಮೋದಿ ಅವರಿಗೂ ಪತ್ರ ಬರೆದರೂ ಸಹ ಶೇ. 40ರಷ್ಟು ಕಮಿಷನ್‌ ನೀಡದೆ ಬಿಲ್‌ ಪಾಸ್‌ ಮಾಡದ ಕಾರಣ ನೊಂದ ಸಂತೋಷ್‌ ವಸತಿ ಗೃಹ ವೊಂದರಲ್ಲಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿ ಕೊಂಡರು. ಬಿಜೆಪಿ ಸುಳ್ಳಿನ ಕಾರ್ಖಾನೆಯಾಗಿದ್ದು, ಅಲ್ಲಿ 700 ಮಂದಿ ಸೋಷಿಯಲ್‌ ಮೀಡಿಯಾ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಒಂದು ಸುಳ್ಳನ್ನು ನೂರು ಬಾರಿ ಪ್ರದರ್ಶಿಸಿ ನಿಜವೆಂದು ನಂಬಿ ಸುವ ಗ್ಲೋಬಲ್‌ ವಂಶಸ್ಥನ ಜಾಲತಾಣ ಇದೆ ಎಂದು ವ್ಯಂಗವಾಡಿದರು.

ಹಿಜಾಬ್‌ ಮೂಲಕ ಮಕ್ಕಳಲ್ಲಿ ವಿಷಬೀಜ: ಸಾಮಾನ್ಯ ಜನತೆಯ ಕಷ್ಟ-ಸುಖಗಳನ್ನು ಮರೆತು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಯಾವೂದೇ ಆಶ್ವಾಸನೆ ಈಡೇ ರಿಸದೆ ಜನರನ್ನು ದಿಕ್ಕು ತಪ್ಪಿಸಲು ಶಾಲಾ- ಕಾಲೇಜು ವಿದ್ಯಾರ್ಥಿಗಳ ಮುಗ್ಧ ಮನಸ್ಸಿನಲ್ಲಿ ಜಾತಿಯತೆ ಎಂಬ ವಿಷಬೀಜವನ್ನು ಬಿತ್ತುವ ಮೂಲಕ ರಾಜ್ಯದಲ್ಲಿ ಹಿಜಾಬ್‌ ಹೆಸರಲ್ಲಿ ಅರಾಜಕತೆ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದರು.

ಕೇಸ್‌ ಮುಚ್ಚಿ ಹಾಕುವ ಹುನ್ನಾರ: ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ, ಗೃಹ ಸಚಿವ ಅರಗಜ್ಞಾನೇಂದ್ರ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶ್ವರ ಪ್ಪಗೆ ಕ್ಲೀನ್‌ ಚಿಟ್‌ ನೀಡಿದ್ದು, ಇನ್ನು ಮೂರು ತಿಂಗಳಲ್ಲಿ ಆರೋಪದಿಂದ ಮುಕ್ತರಾಗಲಿದ್ದಾರೆ ಎಂದು ಹೇಳಿರುವುದು ಪ್ರಕರಣ ಮುಚ್ಚಿ ಹಾಕುವ ಹುನ್ನಾರ. ಸಾಮಾನ್ಯ ಜನರು ಬಳಸುವ ದಿನನಿತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ಬಗ್ಗೆ ಯಾರೂ ಚಕಾರವೆತ್ತುತ್ತಿಲ್ಲ ಎಂದು ಟೀಕಿಸಿದರು.

ಕೋಮುಗಲಭೆ ಸೃಷ್ಟಿ: ಮಾಜಿ ಕೇಂದ್ರ ಸಚಿವ ಕೆ.ಎಚ್‌. ಮುನಿಯಪ್ಪ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ಶಾಸಕಿ ರೂಪಕಲಾ ಶಶಿಧರ್‌ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅನೈತಿಕವಾಗಿ ಸರ್ಕಾರವನ್ನು ರಚಿಸಿದೆ. ಇದಕ್ಕೆ ಜನಾದೇಶ ಇರಲಿಲ್ಲ. ಅನೈತಿಕ ಸಂಬಂಧ ಬೆಳೆಸಿ ಅಧಿಕಾರಕ್ಕೆ ಬಂದಿದೆ. ಅಭಿವೃದ್ಧಿ ಮಾಡಬೇಕೆಂಬುವುದು ಮರೆತು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ ಅರಾಜಕತೆ ಉಂಟು ಮಾಡುತ್ತಿದೆ. ಸಿದ್ದರಾಮಯ್ಯ ಆಡಳಿತದಲ್ಲಿ 10 ಪರ್ಸೆಂಟ್‌ ಸರ್ಕಾರವೆಂದು ಟೀಕಿಸುತ್ತಿದ್ದ ಬಿಜೆಪಿ ಇಂದು ಶೇ. 40 ಪರ್ಸೆಂಟ್‌ ಸರ್ಕಾರ ಎಂಬುವುದನ್ನು ಸಚಿವ ಈಶ್ವರಪ್ಪ ಸಾಬೀತು ಮಾಡಿದ್ದಾರೆ ಎಂದರು. ಕೆ

ಪಿಸಿಸಿ ಪ್ರಧಾನ ಕಾರ್ಯ ದರ್ಶಿ ಮೋಹನ್‌ ಬಾಬು, ಮನೋ ಹರ್‌, ಕೋಲಾರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉದಯ ಶಂಕರ್‌, ಪ್ರಸಾ ದ್‌ ಬಾಬು, ಕೆಯುಡಿಎ ಮಾಜಿ ಅಧ್ಯಕ್ಷ ಅಬ್ದುಲ್‌ ಖಯ್ಯೊಂ, ಜಿಲ್ಲಾ ಕಿಸಾನ್‌ ಸೆಲ್‌ ಅಧ್ಯಕ್ಷ ಊರು ಬಾಗಿಲು ಶ್ರೀನಿ ವಾಸ್‌, ನಗರಸಭೆ ಸದಸ್ಯ ಅಸ್ಲಾಂ. ಸಲಾವುದ್ದೀನ್‌ ಬಾಬು, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರತ್ನಮ್ಮ ಮತ್ತಿತರರು ಇದ್ದರು.

ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಬಣ ಗೈರು : ಕಾಂಗ್ರೆಸ್‌ ಪಕ್ಷವು ಕೇಂದ್ರ, ರಾಜ್ಯ ಸರ್ಕಾರಗಳ ವೈಫ‌ಲ್ಯ ಹಾಗೂ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಕಾರಣವಾಗಿರುವ ಈಶ್ವರಪ್ಪ ಬಂಧಿಸಲು ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್‌, ಶ್ರೀನಿವಾಸಪುರ ಶಾಸಕ ರಮೇಶ್‌ಕುಮಾರ್‌ ಬಣದ ಕಾರ್ಯಕರ್ತರು ಯಾರೊಬ್ಬರು ಭಾಗವಹಿಸಲಿಲ್ಲ. ವಿ.ಆರ್‌.ಸುದರ್ಶನ್‌ ಡಿಸಿಸಿ ಅಧ್ಯಕ್ಷ ರಾದಾಗಿನಿಂದಲೂ ಕಾಂಗ್ರೆಸ್‌ ಅಧಿಕೃತ ಕಾರ್ಯಕ್ರಮಗಳಿಂದ ದೂರ ಕಾಯ್ದುಕೊಳ್ಳುತ್ತಿರುವ ಈ ಬಣದ ಶಾಸಕರು, ಮುಖಂಡರು, ನಗರಸಭಾ ಸದಸ್ಯರು ಭಾನುವಾರದ ಪ್ರತಿಭಟನೆಯಿಂದಲೂ ದೂರ ಉಳಿದಿದ್ದರು. ಕೋಲಾರ ಜಿಲ್ಲೆಯಲ್ಲಿ ಪರಸ್ಪರ ವಿರೋಧಿಗಳಂತೆ ಕಾದಾಡುತ್ತಿರುವ ಕಾಂಗ್ರೆಸ್‌ ರಮೇಶ್‌ಕುಮಾರ್‌ ಬಣ ಹಾಗೂ ಕೆ.ಎಚ್‌.ಮುನಿಯಪ್ಪ ಬಣ ಒಗ್ಗೂಡಿಸುವಲ್ಲಿ ಹಾಲಿ ಡಿಸಿಸಿ ಅಧ್ಯಕ್ಷರಾಗಿರುವ ವಿ.ಆರ್‌.ಸುದರ್ಶನ್‌ ಪ್ರಯತ್ನವು ಫ‌ಲಿಸಿಲ್ಲ. ಇದರಿಂದ ಬೇಸತ್ತು ಸದಸ್ಯತ್ವ ಮುಗಿದ ಕಾರಣಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ಈಗಾಗಲೇ ಘೋಷಿಸಿದ್ದಾರೆ.

ಧರ್ಮದ ಅಮಲು ಬಿಜೆಪಿ ನೆತ್ತಿಗೇರಿದೆ : ಬಿಜೆಪಿಗೆ ಧರ್ಮದ ಅಮಲು ನೆತ್ತಿಗೇರಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಹಿಜಾಬ್‌, ಹಲಾಲ್‌, ಜಾತ್ರೆಗಳಲ್ಲಿ ನಿಷೇಧ, ಮಾವು, ರೇಷ್ಮೆ ವ್ಯಾಪಾರಗಳಿಂದ ಬಹಿಷ್ಕಾರ ಹಾಕಲು ಮುಂದಾಗಿದ್ದು, ನಾಳೆ ದಲಿತರು, ನಾಡಿದ್ದು ಕ್ರೈಸ್ತರ ಸರದಿ ಬರಲಿದೆ. ಬಿಜೆಪಿ ಆಡಳಿತ ಹಿಂದೂ ಪರ ಸಂಘಟನೆಗಳಾದ ಆರ್‌ ಎಸ್‌ಎಸ್‌, ಭಜರಂಗ ದಳ, ಶ್ರೀರಾಮಸೇನೆ, ಸಂಘಟನೆಗಳ ಮುಖಂಡರ ಕೈಯಲ್ಲಿದೆ. ಸರ್ಕಾರ ನಿಷ್ಕ್ರಿಯೆಗೊಂಡಿದೆ ಎಂದು ಮಾಜಿ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.