Cyber Crime: ಇಬ್ಬರಿಗೆ 48 ಲಕ್ಷ ರೂ.ವಂಚಿಸಿದ ಸೈಬರ್‌ ಕಳ್ಳರು


Team Udayavani, Nov 29, 2023, 3:29 PM IST

tdy-15

ಕೆಜಿಎಫ್‌: ಪೊಲೀಸ್‌ ಇಲಾಖೆ ವತಿಯಿಂದ ಸೈಬರ್‌ ಕಳ್ಳರ ಬಗ್ಗೆ ಎಷ್ಟೇ ಎಚ್ಚರಿಕೆ ನೀಡಿದರೂ ವಂಚನೆ ಪ್ರಕರಣಗಳು ನಿಲ್ಲುತ್ತಿಲ್ಲ. ಆನ್‌ಲೈನ್‌ ವಂಚಕರು ತಾಲೂಕಿನ ಇಬ್ಬರು ವ್ಯಕ್ತಿಗಳನ್ನು ಖೆಡ್ಡಾಕ್ಕೆ ಕೆಡವಿ ಬರೋಬ್ಬರಿ 48.5 ಲಕ್ಷ ರೂ. ಲಪಟಾಯಿಸಿದ್ದಾರೆ.

ತಾಲೂಕಿನ ಬೇತಮಂಗಲ ಹೋಬಳಿಯ ನೆರ್ನಹಳ್ಳಿ ಗ್ರಾಮದ ಸರ್ವೇ ನಂಬರ್‌ 71/ಪಿ3ರ ಜಮೀನಿನಲ್ಲಿ ಭಾರತ್‌ ಪೆಟ್ರೋಲಿಯಂ ಪೆಟ್ರೋಲ್‌ ಬಂಕ್‌ ಡೀಲರ್‌ ಶಿಪ್‌ಗಾಗಿ ವ್ಯಕ್ತಿಯೊಬ್ಬರು ಕಳೆದ ಒಂದು ವರ್ಷದ ಹಿಂದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿಕೊಂಡಿದ್ದರು ಎನ್ನಲಾಗಿದೆ.

ದೂರುದಾರ ರೈತರ ಮೊಬೈಲ್‌ಗೆ ಸೆ.14ರಂದು 9966906952 ಮೊಬೈಲ್‌ ಸಂಖ್ಯೆಯಿಂದ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ, “ಮಹಾರಾಷ್ಟ್ರದ ಭಾರತ್‌ ಪೆಟ್ರೋಲಿಯಂ ಮುಖ್ಯ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ’ ತಿಳಿಸಿದ್ದಾನೆ.

ಬಳಿಕ “ಈ ಹಿಂದೆ ನೀವು ಪೆಟ್ರೋಲ್‌ ಬಂಕ್‌ಗಾಗಿ ಅರ್ಜಿ ಸಲ್ಲಿಸಿದ್ದು, ನಿಮ್ಮ ಹೆಸರಿಗೆ ಪೆಟ್ರೋಲ್‌ ಬಂಕ್‌ ಪರವಾನಗಿ ಸಿಕ್ಕಿದೆ. ಅರ್ಜಿ ಶುಲ್ಕ, ಡೀಲರ್‌ಶಿಪ್‌ ಸರ್ಟಿಫಿಕೇಟ್‌, ಎನ್‌ಒಸಿ ಸರ್ಟಿಫಿಕೇಟ್‌, ಸೆಕ್ಯೂರಿಟಿ ಡೆಪಾಸಿಟ್‌, ಇನ್ಶೂರೆನ್ಸ್‌ ಹಾಗೂ ಇನ್ನಿತರ ವೆಚ್ಚಗಳಿಗಾಗಿ ದುಡ್ಡು ಕಟ್ಟಬೇಕು’ ಎಂದು ನಂಬಿಸಿದ್ದಾನೆ. ಬಳಿಕ ದೂರುದಾರರು ರಾಬರ್ಟ್‌ಸನ್‌ಪೇಟೆಯ ಕರೂರು ವೈಶ್ಯ ಬ್ಯಾಂಕ್‌ ಖಾತೆಯಿಂದ ಸೆ.14ರಿಂದ ನ.22ರವರೆಗೆ ಹಂತ ಹಂತವಾಗಿ 30 ಬಾರಿ ಹಣ ಜಮಾ ಮಾಡಿದ್ದಾರೆ.

ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ ಐಡಿಎಫ್‌ಬಿ ಬ್ಯಾಂಕ್‌ ಖಾತೆ ಸಂಖ್ಯೆ 10149012923, ಎಚ್‌ಡಿಎಫ್‌ಸಿ ಬ್ಯಾಂಕ್‌ ಖಾತೆ ಸಂಖ್ಯೆ 50100656780581 ಮತ್ತು ಐಡಿಎಫ್‌ಸಿ ಬ್ಯಾಂಕ್‌ ಖಾತೆ ಸಂಖ್ಯೆ 10151616386 ಈ ಖಾತೆಗಳಿಗೆ ಒಟ್ಟು 41.73 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಪೆಟ್ರೋಲ್‌ ಬಂಕ್‌ ಹೆಸರಿನಲ್ಲಿ ತಮಗೆ ವಂಚನೆಯಾಗಿದ್ದು, ಮೋಸಗಾರರನ್ನು ಪತ್ತೆ ಹಚ್ಚಿ ತಮ್ಮ ದುಡ್ಡನ್ನು ವಾಪಸ್‌ ಕೊಡಿಸುವಂತೆ ಕೆಜಿಎಫ್‌ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಇದೇ ರೀತಿ ಗ್ಯಾಸ್‌ ಬಂಕ್‌ ಡೀಲರ್‌ಶಿಪ್‌ಗಾಗಿ ಕೆಜಿಎಫ್‌ ಪೊಲೀಸ್‌ ಜಿಲ್ಲಾ ವ್ಯಾಪ್ತಿಯ ದೊಡ್ಡಪೊನ್ನಾಂಡಹಳ್ಳಿ ವ್ಯಕ್ತಿಯೊಬ್ಬರು ಅಕ್ಟೋಬರ್‌ ಒಂದರಿಂದ ನವೆಂಬರ್‌ 25ರ ವರೆಗೆ ಒಟ್ಟು 6.69 ಲಕ್ಷ ರೂ. ಜಮೆ ಮಾಡಿ ಮೋಸ ಹೋಗಿದ್ದಾರೆ. ಬಳಿಕ ಕರೆ ಮಾಡಿರುವವ ಸಂಪರ್ಕಕ್ಕೆ ಸಿಕ್ಕಿಲ್ಲ. ಇದರಿಂದ ದಿಕ್ಕು ತೋಚದಂತಾಗಿ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಆನ್‌ಲೈನ್‌ನಲ್ಲಿ ಹಣವನ್ನು ಜಮೆ ಮಾಡಿ ಎಂದು ಬರುವ ಯಾವುದೇ ಲಿಂಕ್‌ ನಂಬಬಾರದು. ಗೂಗಲ್‌ನಲ್ಲಿ ಬರುವ ಲಿಂಕ್‌ಗಳೆಲ್ಲವೂ ನೈಜವಾಗಿರುವುದಿಲ್ಲ. ಹಣವನ್ನು ಜಮೆ ಮಾಡುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆನ್‌ಲೈನ್‌ ವಂಚನೆಗಳಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. –ಶಾಂತರಾಜು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಕೆಜಿಎಫ್‌

 -ನಾಗೇಂದ್ರ ಕೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.