ರಾಜ್ಯಕ್ಕೆ  ಮಾದರಿಯಾಗುವಂತೆ ರಾಜ್ಯೋತ್ಸವ ಆಚರಣೆ

Team Udayavani, Oct 30, 2022, 12:33 PM IST

ರಾಜ್ಯಕ್ಕೆ  ಮಾದರಿಯಾಗುವಂತೆ ರಾಜ್ಯೋತ್ಸವ ಆಚರಣೆ

ಕೋಲಾರ: ಕೊರೊನಾದಿಂದ ಕಳೆದ 2 ವರ್ಷ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಿದ್ದು, ಈ ಬಾರಿ ರಾಜ್ಯಕ್ಕೆ ಮಾದರಿಯಾಗುವಂತೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ತಿಳಿಸಿದರು.

ಶುಕ್ರವಾರ ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ನಡೆದ 2022ನೇ ಸಾಲಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಗ್ಗೆ ಚರ್ಚಿಸುವ ಸಭೆಯಲ್ಲಿ ಮಾತನಾಡಿ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸರ್ಕಾರಿ ಕಚೇರಿಗಳಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ ಮಾಡಬೇಕು. ಕೋಲಾರ ಜಿಲ್ಲೆಯಲ್ಲಿ ವಿಶೇಷ ಸಾಧನೆ ಮಾಡಿರುವ ವ್ಯಕ್ತಿಗಳ ಭಾವಚಿತ್ರ ಹಾಗೂ ಜಿಲ್ಲೆಯ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ಸ್ತಬ್ಧಚಿತ್ರಗಳ ಮೆರವಣಿಗೆ ಶ್ರೀವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಪ್ರಾರಂಭವಾಗಲಿದೆ ಎಂದರು.

ಸಾಧನೆಗೈದ ವ್ಯಕ್ತಿಗಳ ಭಾವಚಿತ್ರ ಮೆರವಣಿ: ಕರ್ನಾಟಕ ರಾಜ್ಯದಲ್ಲಿ ವಿಶೇಷ ಸಾಧನೆಗೈದ ವ್ಯಕ್ತಿಗಳ ಬಗ್ಗೆ ಸ್ತಬ್ಧಚಿತ್ರಗಳಲ್ಲಿ ಹಾಗೂ ಜಿಲ್ಲೆಯ ಕೆ.ಸಿ.ರೆಡ್ಡಿ, ಡಿ.ವಿ.ಗುಂಡಪ್ಪ, ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಇನ್ನು ಮುಂತಾದ ವ್ಯಕ್ತಿಗಳ ಭಾವಚಿತ್ರವನ್ನು ಮೆರವಣಿಯಲ್ಲಿ ಪ್ರದರ್ಶನ ಮಾಡಲಾಗುವುದು. ವಿವಿಧ ಇಲಾಖೆಗಳಿಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ನಾಡಿನ ಸಂಸ್ಕೃತಿ, ನೆಲ, ಜಲ ಹಾಗೂ ಕರ್ನಾಟಕದ ಬಗ್ಗೆ ತಿಳಿಸುವ ಒಳ್ಳೆಯ ವಿಚಾರಧಾರೆಗಳನ್ನು ಜನರಿಗೆ ಮತ್ತು ಮಕ್ಕಳಿಗೆ ಕನ್ನಡದ ಸಂಸ್ಕೃತಿ ಮತ್ತು ಭಾಷೆಯ ಬಗ್ಗೆ ತಿಳುವಳಿಕೆ ನೀಡುವಂತಹ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.

ಎಲ್ಲಾ ಗ್ರಾಪಂಗಳಲ್ಲಿ ಮೆರವಣಿಗೆ: ಜಿಪಂ ಸಿಇಒ ಎಸ್‌.ಯುಕೇಶ್‌ ಕುಮಾರ್‌ ಮಾತನಾಡಿ, ಕೋಲಾರ ತಾಲೂಕಿನ ಎಲ್ಲಾ ಗ್ರಾಪಂಗಳಿಂದಲೂ ಸ್ತಬ್ಧಚಿತ್ರ, ಪಲ್ಲಕ್ಕಿಗಳ ಮೆರವಣಿಗೆ ನಡೆಯಲಿದೆ. ಕನ್ನಡ ರಾಜ್ಯೋತ್ಸವವನ್ನು ಜಿಲ್ಲೆಯ ಎಲ್ಲರೂ ಸೇರಿ ಯಶಸ್ವಿಯಾಗಿ ಆಚರಿಸೋಣ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯಿಂದ ವಿವೇಕಾನಂದ, ವಿಶ್ವೇಶ್ವರಯ್ಯ ವೇಷ ಧಾರಿಗಳಾಗಿ ಶಾಲಾ ಮಕ್ಕಳು ಭಾಗವಹಿಸುವರು. ಪಶು ಸಂಗೋಪನೆ ಇಲಾಖೆಯಿಂದ ಹಳ್ಳಿಯ ಪರಿಸರದ ವಾತಾವರಣ, ಶಿಕ್ಷಣ ಇಲಾಖೆಯಿಂದ ವಚನಕಾರರ ಸ್ತಬ್ಧಚಿತ್ರ, ಜಿಪಂನಿಂದ ಶಿವಾರಪಟ್ಟಣದ ಶಿಲ್ಪಿಗಳು ಹಾಗೂ ಚೋಳರ ಕಾಲದ ದೇವಾಲಯಗಳಾದ ಕುರುಡುಮಲೆ, ಕೋಲಾರಮ್ಮ ದೇವಸ್ಥಾನ, ಸಣ್ಣ ನೀರಾವರಿ ಇಲಾಖೆಯಿಂದ ಡಿ.ವಿ.ಗುಂಡಪ್ಪ ಭಾವಚಿತ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 40 ಕಲಾ ತಂಡಗಳ ಮೆರವಣಿಗೆ ಸೇರಿದಂತೆ ವಿವಿಧ ಇಲಾಖೆ ಗಳಿಂದ ಇನ್ನು ಮುಂತಾದ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್‌, ತಹಶೀಲ್ದಾರ್‌ ನಾಗರಾಜ್‌, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಶಶಿಕಲಾ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.